Accident News: ಭೀಕರ ಸರಣಿ ಅಪಘಾತ: ನಾಲ್ವರು ಸಾವು
Accident News: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಭೀಕರ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಬಳಿ ನಡೆದಿದೆ.
ಕಲಬುರಗಿ ತಾಲೂಕಿನ ಅವರಾದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಕಲಬುರಗಿ ನಗರದ ಹೊರವಲಯದಲ್ಲಿ ಇರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಅಂಕಲಗಿ ಮತ್ತು ಔರಾದ್ ಬಳಿ ಟ್ಯಾಂಕರ್, ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಮೃತರಲ್ಲಿ ಬೈಕ್ನಲ್ಲಿ ಪ್ರಯಾಣ ಮಾಡುತ್ತಿದ್ದ ಸಿರಡೋಣ ಗ್ರಾಮದ ನಾಗೇಂದ್ರ ಮತ್ತು ಶಿವಾನಂದ ಅಪ್ಪಾರಾವ ಸೇರಿದ್ದಾರೆ. ಸಿರಡೋಣ ಗ್ರಾಮದ ಇವರು ಕೂಲಿ ಕೆಲಸ ಮುಗಿಸಿ ಒಂದೇ ಬೈಕ್ನಲ್ಲಿ ತಮ್ಮ ಗ್ರಾಮಕ್ಕೆ ವಾಪಾಸ್ ಆಗುಯ್ತಿದ್ದರು. ಕಾರಿನಲ್ಲಿದ್ದ ಬಾಲ್ಕಿ ಮೂಲದ ದತ್ತಾತ್ರೇಯ ಚಿಮಾಜಿ (48), ಚಂದ್ರಕಲಾ (70) ಸಾವಿಗೀಡಾಗಿದ್ದಾರೆ.
ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ಬೈಕ್ನಲ್ಲಿದ್ದ ಮತ್ತೊಬ್ಬ ಯುವಕ ಮೈಲಾರಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ ಎನ್ನಲಾಗಿದೆ.
20 ಮಂದಿ ಸಾವು: ಬಸ್ ಹಾಗೂ ಟ್ರಕ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದರು.
ತೆಲಂಗಾಣದ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಆರ್ಟಿಸಿ ಬಸ್ಗೆ ಟ್ರಕ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ನಲ್ಲಿ 20 ಮಂದಿ ಸಾವನ್ನಪ್ಪಿದ್ದು, 24 ಜನ ಗಾಯಗೊಂಡಿದ್ದರು.
ಜಲ್ಲಿಕಲ್ಲು ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅನ್ನು ಭಾರೀ ವೇಗದಲ್ಲಿ ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿತ್ತು.
ಅಪಘಾತ ನಡೆದ ಸ್ಥಳದ ಬಳಿ ಅಪಾಯಕಾರಿ ತಿರುವು ಇದ್ದು, ಇದೇ ಪ್ರದೇಶದಲ್ಲಿ ಅತಿ ವೇಗದಲ್ಲಿ ಬಂದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಬಸ್ಗೆ ಡಿಕ್ಕಿ ಹೊಡೆದಿರುವುದಲ್ಲದೆ, ಅದರಲ್ಲಿ ಜಲ್ಲಿಕಲ್ಲು ಬಸ್ ಒಳಗಡೆ ಇದ್ದ ಪ್ರಯಾಣಿಕೆ ಮೇಲೆ ಸುರಿದಿವೆ. ಇದು ಹೆಚ್ಚಿನ ಜೀವಹಾನಿಗೆ ಕಾರಣವಾಗಿದೆ. 10ಕ್ಕೂ ಹೆಚ್ಚು ಮಂದಿ ಜಲ್ಲಿಕಲ್ಲುಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಭೀಕರ ಅಪಘಾತದಲ್ಲಿ ಬಸ್ ಪ್ರಯಾಣಿಕರು, ಬಸ್ ಮತ್ತು ಟಿಪ್ಪರ್ ಚಾಲಕರು ಸಾವನ್ನಪ್ಪಿರುವ ಬಗ್ಗೆಯೂ ವರದಿಯಾಗಿತ್ತು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications