• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ ನಾಲ್ವರ ಸಾವು

By ಕಲಬುರಗಿ ಪ್ರತಿನಿಧಿ
|

ಕಲಬುರಗಿ, ನವೆಂಬರ್ 3: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪೂರ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

ಎರಡೂ ಬೈಕ್ ಗಳಲ್ಲಿ ತಲಾ ಮೂವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಜರುಗಿದ್ದು, ಮೂವರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾದ್ದಾರೆ.

 ಕಲಬುರಗಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಕಲಬುರಗಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ

ಲಾಡ್ಲಾಪುರ ಗ್ರಾಮದ ಮರೆಪ್ಪ (50), ಬಸಪ್ಪ (32) ಮತ್ತು ಅಲ್ಲೂರು ಗ್ರಾಮದ ದೇವೇಂದ್ರ (50) ಹಾಗೂ ಮಲ್ಲಪ್ಪ ರಾಯಪ್ಪ (35) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಉಳಿದ ಹನಮಂತ ಹಾಗೂ ಕಾಶಿನಾಥ ಎಂಬುವರು ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತಿಯಾದ ವೇಗದಲ್ಲಿ ಬಂದ ಎರಡೂ ಬೈಕ್ ಗಳು ರಾಷ್ಟ್ರೀಯ ಹೆದ್ದಾರಿ ಮೇಲೆ ಮುಖಾಮುಖಿ ಡಿಕ್ಕಿಯಾಗಿವೆ. ಕತ್ತಲಲ್ಲಿ ಡಿಕ್ಕಿ ಹೊಡೆದ ರಭಸಕ್ಕೆ ಒಂದು ಬೈಕ್ ನ ಮುಂದಿನ ಚಕ್ರ ತುಂಡಾಗಿ ಹೋಗಿದೆ. ಎರಡೂ ಬೈಕ್ ಗಳು ಜಖಂಗೊಂಡಿದ್ದು, ಬೈಕ್ ಗುರುತು ಸಿಗಲಾರದ ಸ್ಥಿತಿಗೆ ತಲುಪಿವೆ.

ಡಿಕ್ಕಿಯ ರಭಸಕ್ಕೆ ಬೈಕ್ ಮೇಲೆ ಕುಳಿತಿದ್ದ ಇಬ್ಬರು ವ್ಯಕ್ತಿಗಳ ಎರಡೂ ಕಾಲು ಹಾಗೂ ಕೈಗಳು ತುಂಡು ತುಂಡಾಗಿವೆ. ಅತಿಯಾದ ವೇಗ ಹಾಗೂ ತ್ರಿಬಲ್ ರೈಡಿಂಗ್ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಬಗ್ಗೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Four people were Died in a collision between two bikes at Chittapur Taluk in Kalaburagi district on Tuesday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X