ಕಲಬುರಗಿ ಮಹಾನಗರ ಪಾಲಿಕೆ ಸ್ಕೋಚ್ ಗೋಲ್ಡ್ ಅವಾರ್ಡ್
ಕಲಬುರಗಿ, ಸೆಪ್ಟೆಂಬರ್ 26: ಕಲಬುರಗಿ ಮಹಾನಗರ ಪಾಲಿಕೆಗೆ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಪ್ರತಿಷ್ಠಿತ ಸ್ಕೋಚ್ ಗೋಲ್ಡ್ ಪ್ರಶಸ್ತಿ ಲಭಿಸಿದೆ. ಸ್ವಚ್ಛ ಭಾರತ ಅಭಿಯಾನದ ಭಾಗವಾಗಿ ದೆಹಲಿಯ ಸಂಸ್ಥೆ ನೀಡುವ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ.
ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ವಾರ್ಡ್ ವಾರು ಸಣ್ಣ ಯೋಜನೆಗಳ ಅನುಷ್ಠಾನದಲ್ಲಿ ಆದ ಪ್ರಗತಿಗಾಗಿ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಆಯ್ಕೆಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಮತದಾನ ಮಾಡಲು ಜನಜಾಗೃತಿ ಮೂಡಿಸಲಾಗಿತ್ತು.

ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಿನ್ನೆ ನವದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್ ಪೋಖ್ರಿಯಾಲ್ ಅವರಿಂದ ಪ್ರಶಸ್ತಿ ಸ್ವೀಕರಿಸಲಾಯಿತು.












Click it and Unblock the Notifications