ಕಲಬುರಗಿ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌

ಕಲಬುರಗಿ, ಮಾರ್ಚ್ 25: ಈ ಬಿರುಬೇಸಿಗೆಯ ಸಮಯದಲ್ಲಿ ಬೆಳೆ ಇಲ್ಲದೇ ಕಂಗಾಲಾಗಿದ್ದ ಕಲಬುರಗಿ ಜಿಲ್ಲೆಯ ರೈತರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ ಸೇರಿದಂತೆ 2,36,933 ರೈತರಿಗೆ ಒಟ್ಟು ₹667.73 ಕೋಟಿ ಪರಿಹಾರ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಚಿವರು, ಕಲಬುರಗಿ ರೈತರಿಗೆ ₹667.73 ಕೋಟಿ ಪರಿಹಾರ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರದಿಂದ ಜಿಲ್ಲೆಯ ರೈತರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ನೀಡುವ ಮೂಲಕ ನೂತನ ದಾಖಲೆ ಸೃಷ್ಟಿಸಲಾಗಿದೆ ಎಂದಿದ್ದಾರೆ.

Good News for Kalaburagi Farmers 667 73 Crore Relief Announced

ತೊಗರಿ, ಹೆಸರು, ಉದ್ದು, ಸೋಯಾಬೀನ್, ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು, ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಾವಣೆ ಮಾಡಿಕೊಂಡಿದ್ದು, ₹575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ.

ಜಿಲ್ಲೆಯಲ್ಲಿ 4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್, ಹತ್ತಿ ಮತ್ತಿತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರುಗಳನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ₹76.34 ಕೋಟಿ ಪರಿಹಾರ ಈಗಾಗಲೇ ನೀಡಲಾಗಿದೆ.

ಜಿಲ್ಲೆಯ ರೈತರು ಬೆಳೆಯುತ್ತಿರುವ ತೊಗರಿಗೆ ಕ್ವಿಂಟಾಲ್ ಒಂದಕ್ಕೆ ₹7550 ಬೆಂಬಲ ಬೆಲೆ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ ₹450 ಪ್ರೋತ್ಸಾಹ ಧನವನ್ನು ನಿಗದಿ ಮಾಡಿದೆ. ಜಿಲ್ಲೆಯ 9,189 ರೈತರಿಗೆ ₹108.30 ಕೋಟಿ ಸಹಾಯ ಧನವನ್ನು ವಿತರಿಸಲಾಗಿದೆ.

Good News for Kalaburagi Farmers 667 73 Crore Relief Announced

2024-25 ನೇ ಸಾಲಿನಲ್ಲಿ ಆಗಸ್ಟ್ ಕೊನೆಯ ವಾರ ಹಾಗೂ ಸೆಪ್ಟೆಂಬರ್ ತಿಂಗಳ ಮೊದಲನೆ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16,373 ಹೆಕ್ಟೇರ್‌ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗ ಸೂಚಿಯಂತೆ 35,086 ರೈತರಿಗೆ ₹13.47 ಕೋಟಿ ಪರಿಹಾರವನ್ನು ನೀಡಲಾಗಿದೆ. ರೈತವಾರು ಮಾಹಿತಿಯನ್ನು ಸಂರಕ್ಷಣಾ ಪೋರ್ಟಲ್‌ನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ರೈತರ ಹಿತ ಕಾಯುವುದಕ್ಕೆ ನಮ್ಮ ಸರ್ಕಾರ ಕಟಿಬದ್ಧವಾಗಿದ್ದು, ಅತಿವೃಷ್ಟಿ ಅಥವಾ ಅನಾವೃಷ್ಟಿಯಿಂದ ಬೆಳೆ ಹಾನಿ ಉಂಟಾಗಿ ನಷ್ಟ ಅನುಭವಿಸುವ ರೈತರಿಗೆ ಸೂಕ್ತ ಮತ್ತು ಸಕಾಲಿಕ ಪರಿಹಾರ ಒದಗಿಸುತ್ತಿದೆ. ಸಂಕಷ್ಟಕ್ಕೆ ಸಿಲುಕಿದ ಅನ್ನದಾತನಿಗೆ ಸದಾ ಒತ್ತಾಸೆಯಾಗಿ ನಿಲ್ಲುವ ಹೊಣೆಗಾರಿಕೆಯನ್ನು ಪ್ರದರ್ಶಿಸುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+