ಹಲವು ಜಿಲ್ಲೆಗಳ ಸರ್ಕಾರಿ ಕಚೇರಿ ಸಮಯ ಬದಲಾವಣೆ

ಬೆಂಗಳೂರು, ಮಾರ್ಚ್ 28 : ಕರ್ನಾಟಕ ಸರ್ಕಾರ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದ ಮೇ 31, 2019ರ ತನಕ ಕಚೇರಿಗಳ ಸಮಯದಲ್ಲಿನ ಬದಲಾವಣೆ ಜಾರಿಯಲ್ಲಿರುತ್ತದೆ.

ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಕಲಬುರಗಿ ವಿಭಾಗಗಳ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ. ಏಪ್ರಿಲ್ 1ರಿಂದ ನೂತನ ವೇಳಾಪಟ್ಟಿ ಜಾರಿಗೆ ಬರಲಿದೆ.

Government office timings changed in North Karnataka

ಏಪ್ರಿಲ್ 1 ರಿಂದ ಮೇ 31ರ ತನಕ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರ ತನಕ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಣೆ ಮಾಡಲಿವೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಾವಣೆ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯ ನಿರ್ವಹಣೆ ಮಾಡಲು ಸೂಚನೆ ನೀಡಿದರೆ ಸಮಯದ ಪರಿಮಿತಿ ಇಲ್ಲದೇ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+