ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಲವು ಜಿಲ್ಲೆಗಳ ಸರ್ಕಾರಿ ಕಚೇರಿ ಸಮಯ ಬದಲಾವಣೆ

|
Google Oneindia Kannada News

ಬೆಂಗಳೂರು, ಮಾರ್ಚ್ 28 : ಕರ್ನಾಟಕ ಸರ್ಕಾರ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದ ಮೇ 31, 2019ರ ತನಕ ಕಚೇರಿಗಳ ಸಮಯದಲ್ಲಿನ ಬದಲಾವಣೆ ಜಾರಿಯಲ್ಲಿರುತ್ತದೆ.

ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಕಲಬುರಗಿ ವಿಭಾಗಗಳ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ. ಏಪ್ರಿಲ್ 1ರಿಂದ ನೂತನ ವೇಳಾಪಟ್ಟಿ ಜಾರಿಗೆ ಬರಲಿದೆ.

ಬೇಸಿಗೆ ವಿಮಾನ ವೇಳಾಪಟ್ಟಿ: ಕೆಐಎಯಿಂದ ಹೊಸ ಮಾರ್ಗಗಳಿಗೆ ವಿಮಾನಬೇಸಿಗೆ ವಿಮಾನ ವೇಳಾಪಟ್ಟಿ: ಕೆಐಎಯಿಂದ ಹೊಸ ಮಾರ್ಗಗಳಿಗೆ ವಿಮಾನ

Government office timings changed in North Karnataka

ಏಪ್ರಿಲ್ 1 ರಿಂದ ಮೇ 31ರ ತನಕ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರ ತನಕ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಣೆ ಮಾಡಲಿವೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ.

ದೇಶದಲ್ಲಿ ಅತಿ ಹೆಚ್ಚು ತಾಪಮಾನವಿರುವ ಪ್ರದೇಶಗಳೆಡೆಗೆ ಒಂದು ನೋಟದೇಶದಲ್ಲಿ ಅತಿ ಹೆಚ್ಚು ತಾಪಮಾನವಿರುವ ಪ್ರದೇಶಗಳೆಡೆಗೆ ಒಂದು ನೋಟ

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಾವಣೆ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಎಚ್ಚರ ! ತೀವ್ರ ಉಷ್ಣಾಂಶ, ಬೆಂಗಳೂರಲ್ಲಿ ಶೇ 15ರಷ್ಟು ವೈರಲ್ ಸೋಂಕುಎಚ್ಚರ ! ತೀವ್ರ ಉಷ್ಣಾಂಶ, ಬೆಂಗಳೂರಲ್ಲಿ ಶೇ 15ರಷ್ಟು ವೈರಲ್ ಸೋಂಕು

ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯ ನಿರ್ವಹಣೆ ಮಾಡಲು ಸೂಚನೆ ನೀಡಿದರೆ ಸಮಯದ ಪರಿಮಿತಿ ಇಲ್ಲದೇ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

English summary
Karnataka Government changed the office timings of North Karnataka from April 1 to May 31 due to summer. Office will open from morning 8 to evening 1.30 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X