ಕಲಬುರಗಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ
ಕಲಬುರಗಿ, ನವೆಂಬರ್ 03: ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿನ ಕೈಲಾಶ್ ನಗರದಲ್ಲಿ ಸೋಮವಾರ, ನ.2ರ ರಾತ್ರಿ ನಡೆದಿದೆ.
ಆಳಂದ ತಾಲೂಕಿನ ಕಡಗಂಚಿ ಗ್ರಾಮ ಪಂಚಾಯಿತಿ ಸದಸ್ಯ ಶಿವಲಿಂಗಪ್ಪ ಭೂಶೆಟ್ಟಿ (53) ಕೊಲೆಯಾದ ವ್ಯಕ್ತಿ. ಶಿವಲಿಂಗಪ್ಪ ಅವರು ಕೈಲಾಶ್ ನಗರದ ಬಾಡಿಗೆ ಮನೆಯಲ್ಲಿ ಕೆಲವು ತಿಂಗಳಿನಿಂದೀಚೆಗೆ ವಾಸವಿದ್ದರು. ನಿನ್ನೆ ರಾತ್ರಿ 11ರ ಸಮಯದಲ್ಲಿ ಮನೆಯ ಹೊರಗೆ ಇವರು ನಿಂತಿದ್ದಾಗ ಏಕಾಏಕಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಹಲ್ಲೆಯಿಂದಾಗಿ ತೀವ್ರ ರಕ್ತಸ್ರಾವ ಉಂಟಾದ ಪರಿಣಾಮ ಶಿವಲಿಂಗಪ್ಪ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಲೆ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹಳೆಯ ದ್ವೇಷದಿಂದ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.












Click it and Unblock the Notifications