ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನತಾ ಕರ್ಫ್ಯೂಗೆ ಕಲಬುರ್ಗಿಯಲ್ಲಿ ದೊಡ್ಡ ಬೆಂಬಲ- ಯಡಿಯೂರಪ್ಪ

|
Google Oneindia Kannada News

ಕಲಬುರ್ಗಿ, ಮಾರ್ಚ್ 22: ಕೊರೊನಾ ವೈರಸ್‌ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಜನತಾ ಕರ್ಫ್ಯೂಗೆ ಕಲಬುರ್ಗಿಯಲ್ಲಿ ದೊಡ್ಡ ಬೆಂಬಲ ಸಿಕ್ಕಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಜನತಾ ಕರ್ಫ್ಯೂ ಬಗ್ಗೆ ಮಾತನಾಡಿದ್ದಾರೆ.

ಕಲಬುರ್ಗಿಯಲ್ಲಿ ಬೆಳಗ್ಗೆಯಿಂದಲೇ ನಗರದ ಕೇಂದ್ರ ಬಸ್ ನಿಲ್ದಾಣ, ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತ, ಜಗತ್ ವೃತ್ತ, ಸೂಪರ್ ಮಾರ್ಕೆಟ್, ಗಂಜ್ ಸೇರಿದಂತೆ ನಗರದ ಬಹುತೇಕ ಪ್ರಮುಖ ಪ್ರದೇಶಗಳು ವಾಹನ ಸಂಚಾರವಿಲ್ಲದೆ ಹಾಗೂ ಸಾರ್ವಜನಿಕರವಿಲ್ಲದೆ ಬಿಕೋ ಎನ್ನುತ್ತಿವೆ.

ಭಾನುವಾರ ಜನತಾ ಕರ್ಫ್ಯೂ; ಏನಿರುತ್ತೆ?, ಏನಿರಲ್ಲ?ಭಾನುವಾರ ಜನತಾ ಕರ್ಫ್ಯೂ; ಏನಿರುತ್ತೆ?, ಏನಿರಲ್ಲ?

Great Support From Kalaburgi Peoples For Janatha Curfew

ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕಫ್ಯೂ೯ಗೆ ಬೆಂಬಲ ವ್ಯಕ್ತಪಡಿಸಿ ಸಾರ್ವಜನಿಕರು ರಸ್ತೆಗಿಳಿಯದೇ ಮನೆಯಲ್ಲಿಯೇ ಉಳಿದುಕೊಂಡಿದ್ದು, ಮನೆಯಿಂದಲೇ ಚಪ್ಪಾಳೆ ತಟ್ಟುವ ಮೂಲಕ ಕೊರೋನಾ ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ವರ್ಗಕ್ಕೆ ಸಲಾಂ ಹೊಡೆಯಲು ನಿರ್ಧರಿಸಿದ್ದಾರೆ.

ಇನ್ನು ಜನತಾ ಕಫ್ಯೂ೯ಗೆ ಬೆಂಬಲ ವ್ಯಕ್ತಪಡಿಸಿ ನಗರದ ಎಲ್ಲಾ ವರ್ತಕರು ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿದ್ದು, ಇಡೀ ನಗರ ಸಂಪೂರ್ಣ ಸ್ಥಬ್ದವಾಗಿದೆ.

ಏನಿದು ಜನತಾ ಕರ್ಫ್ಯೂ? ವೈರಸ್ ಭೀತಿ ನಡುವೆ ಹೇಗೆ ವರ್ಕ್ ಆಗುತ್ತೆ?ಏನಿದು ಜನತಾ ಕರ್ಫ್ಯೂ? ವೈರಸ್ ಭೀತಿ ನಡುವೆ ಹೇಗೆ ವರ್ಕ್ ಆಗುತ್ತೆ?

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20ರ ಗಡಿ ದಾಟಿದೆ. ಇಂದು (ಮಾರ್ಚ್ 22) ಹುಬ್ಬಳ್ಳಿಯಲ್ಲಿ ಒಂದು ಹಾಗೂ ಧಾರವಾಡದಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಕಲಬುರ್ಗಿಯಲ್ಲಿ ಕೊರೊನಾದಿಂದ ವೃದ್ಧ ಮರಣ ಹೊಂದಿದ್ದು, ತೀವ್ರ ನಿಗಾ ವಹಿಸಲಾಗಿದೆ.

English summary
Great support from Kalaburgi peoples for Janatha Curfew says CM BS Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X