ಕಲಬುರಗಿ; ಗೃಹಲಕ್ಷ್ಮಿ ಯೋಜನೆಗೆ 4,67,228 ಫಲಾನುಭವಿಗಳು

ಕಲಬುರಗಿ, ಆಗಸ್ಟ್ 24: ಕರ್ನಾಟಕ ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ನೀಡಿರುವ 5 ಗ್ಯಾರಂಟಿಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಆಗಸ್ಟ್ 30ರಂದು ಚಾಲನೆ ದೊರೆಯಲಿದೆ. ಕಲಬುರಗಿ ಜಿಲ್ಲೆಯಲ್ಲಿ 5,89,105 ಫಲಾನುಭವಿಗಳ ಪೈಕಿ ಇದುವರೆಗೂ 4,67,228 ಫಲಾನುಭವಿಗಳು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 'ಗೃಹಲಕ್ಷ್ಮಿ' ಯೋಜನೆಗೆ ಆಗಸ್ಟ್ 30ರ ಬುಧವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಗುರುವಾರ ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಮೈಸೂರಿನಲ್ಲಿ ಗುರುವಾರ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ನಡೆಯುತ್ತಿದೆ.

gruhalakshmi-scheme-beneficiaries

ಕಲಬುರಗಿ ಜಿಲ್ಲಾಧಿಕಾರಿ‌ ಬಿ. ಫೌಜಿಯಾ ತರನ್ನುಮ್ 'ಗೃಹಲಕ್ಷ್ಮಿ' ಕಾರ್ಯಕ್ರಮಕ್ಕೆ ಚಾಲನೆ ನೀಡುವ ಹಿನ್ನಲೆಯಲ್ಲಿ‌ ಕಾರ್ಯಕ್ರಮದ ಕುರಿತು ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ಸಹಾಯಕ ಆಯುಕ್ತೆ ಮಮತಾ ಕುಮಾರಿ, ಕಲಬುರಗಿ‌ ಮಹಾನಗರ ಪಾಲಿಕೆ ಉಪ ಆಯುಕ್ತ ಪ್ರಕಾಶ ರಜಪುತ್ ಮುಂತಾದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ನೇರ ಪ್ರಸಾರ; ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, "ಗೃಹ ಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಮುಖ್ಯಮಂತ್ರಿಗಳು ಚಾಲನೆ‌ ನೀಡಲಿದ್ದಾರೆ. ಈ ಕಾರ್ಯಕ್ರಮದ ನೇರ‌ ಪ್ರಸಾರವನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಾಡಬೇಕು. ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಎಲ್ಲಿಯೂ ಶಿಷ್ಟಾಚಾರಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು" ಎಂದರು.

"ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಸರ್ಕಾರದ ಪ್ರಮುಖ ಯೋಜನೆ ಇದಾಗಿದೆ. ಹೀಗಾಗಿ ಕಾರ್ಯಕ್ರಮ‌ ಹಿಂದಿನ ದಿನವೇ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸ್ವಚ್ಛತಾ ವಾಹಿನಿ, ಡಂಗುರ ಮೂಲಕ ಪ್ರಚಾರ ಮಾಡಬೇಕು. ಆಗಸ್ಟ್ 29ಕ್ಕೆ ಈ ಕುರಿತು ಡ್ರೈ-ರನ್ ಸಹ ಆಯೋಜಿಸಬೇಕು" ಎಂದು ಸೂಚಿಸಿದರು.

"ಈ ಕಾರ್ಯಕ್ರಮ ಸಂಘಟನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪ್ರತ್ಯೇಕ ಸುತ್ತೋಲೆ ಕಳುಹಿಸಿದ್ದು, ಅದರಂತೆ ಕಾರ್ಯಕ್ರಮ ಆಯೋಜಿಸಬೇಕು. ಶಾಲೆ‌ ಮತ್ತು ಶಾಲೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಬಾರದು ಎಂಬ ನಿರ್ದೇಶನವಿದ್ದು, ಸಮುದಾಯ ಭವನ, ಕಲ್ಯಾಣ ಮಂಟಪ, ಚೌಟ್ರಿಯಲ್ಲಿ ಇಲ್ಲವೇ ಬಯಲು ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಬೇಕು" ಎಂದು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನವೀನ್ ಯು. ಮಾತನಾಡಿ, 'ಜಿಲ್ಲೆಯ 261 ಗ್ರಾಮ ಪಂಚಾಯತಿ‌ ಕೇಂದ್ರ ಸ್ಥಾನದಲ್ಲಿ ಮತ್ತು ನಗರ, ಸ್ಥಳೀಯ ಸಂಸ್ಥೆಗಳ 52 ವಾರ್ಡ್ ಸೇರಿದಂತೆ ಒಟ್ಟು 313 ಕಡೆ ಗೃಹಲಕ್ಷ್ಮಿ ಚಾಲನಾ ಕಾರ್ಯಕ್ರಮ ನೇರ ಪ್ರಸಾರ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೂವರೆಗೆ ಜಿಲ್ಲೆಯಲ್ಲಿ ನಿಗದಿತ ಗುರಿ 5,89,105 ಪೈಕಿ 4,67,228 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ" ಎಂದರು.

"ಕಲಬುರಗಿ ಜಿಲ್ಲೆಯ ನೋಂದಾಯಿತ ಫಲಾನುಭವಿಗಳಿಗೆ ಡಿಬಿಟಿ ಮೂಲಕ 2,000 ರೂ. ಹಣ ವರ್ಗಾವಣೆ ಮಾಡಲು ಸಹ ಅನುದಾನ‌ ಜಿಲ್ಲೆಗೆ ಬಿಡುಗಡೆಯಾಗಿದೆ. ಕಾರ್ಯಕ್ರಮ ಸುಲಲಿತವಾಗಿ ನಡೆಯಲು ಪ್ರತಿ ಕಾರ್ಯಕ್ರಮ ಸ್ಥಳದಲ್ಲಿ ಓರ್ವ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿಸಿ ನೇಮಿಸಲಾಗಿದೆ" ಎಂದು ಹೇಳಿದರು.

'ಗೃಹಲಕ್ಷ್ಮಿ' ಯೋಜನೆಯಡಿ ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್‌ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ಗಳನ್ನು ನೀಡಲಿದೆ.

ಜುಲೈ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಯೋಜನೆಯ ನೋಂದಣಿಗೆ ಚಾಲನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ, ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರಲಿದೆ' ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+