ಶೀಘ್ರವೇ ಗುಲ್ಬರ್ಗಾ ನಗರ ಸ್ಮಾರ್ಟ್ ಸಿಟಿ ?
ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿಲು ಈ ಹಿಂದೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸದಿರುವ ಕೇಂದ್ರ ಸರ್ಕಾರದ ವಿರುದ್ಧ ಬೇಸರ.
ಗುಲಬರ್ಗಾ, ಜನವರಿ 23: ಶೀಘ್ರದಲ್ಲೇ ಕಲಬುರಗಿ ನಗರ ಸ್ಮಾರ್ಟ್ ಸಿಟಿ ಆಗಲಿದೆ ಎಂದು ಕೇಂದ್ರದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಚಾರ ತಿಳಿಸಿದರು. ಕೇಂದ್ರ ಸರ್ಕಾರದ ಯೋಜನೆಯಲ್ಲಿ ರಾಜ್ಯದ ಕೆಲವು ನಗರಗಳು ಸ್ಮಾರ್ಟ್ ಸಿಟಿ ಯೋಜನೆಗೆ ಒಳಗಾಗಿವೆ. ಆದರೆ, ಕಲಬುರಗಿಗೆ ಆ ಅವಕಾಶ ಸಿಗಲಿಲ್ಲ. ಆದರೇನಂತೆ, ಕಲಬುರಗಿಯ ಕೆಲ ಸ್ಥಳೀಯ ಸಂಘ ಸಂಸ್ಥೆಗಳ ಸಹಾಯ ಪಡೆದು ಶೀಘ್ರವೇ ನಗರವನ್ನು ಸ್ಮಾರ್ಟ ಸಿಟಿ ಮಾಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಹಿಂದೆ, ಕೇಂದ್ರ ನಗರಾಭಿವೃದ್ಧಿ ಸಚಿವರಿಗೆ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿಸಲು ಮನವಿ ಮಾಡಲಾಗಿತ್ತು ಎಂದು ತಿಳಿಸಿದ ಅವರು, ಈವರೆಗೆ ಅವರಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದರು. ಆದರೆ, ಕೇಂದ್ರ ಸರ್ಕಾರವು ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿಸುವ ವಿಚಾರವು ವಿಶೇಷ ಮಹತ್ವದ್ದು ಎಂದು ಪರಿಗಣಸಿ ಈ ಬಗ್ಗೆ ಕಾರ್ಯೋನ್ಮುಖರಾಗಬೇಕು ಎಂದು ಅಭಿಪ್ರಾಯಪಟ್ಟರು.












Click it and Unblock the Notifications