ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷೆ ದಿನಾಂಕ ಪ್ರಕಟ

ಕಲಬುರಗಿ, ಜುಲೈ 20; ಕೋವಿಡ್ ಕಾರಣದಿಂದಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಈಗ ಪರೀಕ್ಷೆಗಳ ದಿನಾಂಕಗಳನ್ನು ಘೋಷಣೆ ಮಾಡಲಾಗಿದೆ.

ಮಂಗಳವಾರ ಗುಲಬರ್ಗಾ ವಿವಿಯ ಕುಲಪತಿ ಪ್ರೊ. ದಯಾನಂದ ಅಗಸರ್ ಪರೀಕ್ಷೆಗಳ ದಿನಾಂಕವನ್ನು ಘೋಷಣೆ ಮಾಡಿದರು. ಬಿಎ, ಬಿಎಸ್ಸಿ, ಬಿಕಾಂ ಹಾಗೂ ಸ್ನಾತಕೋತ್ತರ ಪದವಿ ಸೇರಿ ಇನ್ನಿತರ ಪದವಿ ಕೋರ್ಸ್‍ಗಳ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಆಗಸ್ಟ್ 2 ರಿಂದ ನಡೆಸಲಾಗುತ್ತದೆ ಎಂದರು.

ಉನ್ನತ ಶಿಕ್ಷಣ ಪರಿಷತ್ ಹಾಗೂ ಯುಜಿಸಿಯ ಮಾರ್ಗಸೂಚಿಗಳ ಅನ್ವಯ ಪರೀಕ್ಷೆ ನಡೆಸಲಾಗುತ್ತಿದ್ದು, 4 ಜಿಲ್ಲೆಗಳ ಸುಮಾರು 150 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1 ಲಕ್ಷ 20 ಸಾವಿರ ಪದವಿ ಹಾಗೂ 12 ಸಾವಿರ ಸ್ನಾತಕೋತ್ತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

Gulbarga University Announced Exam Date

ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಆಧರಿಸಿ 2 ಹಾಗೂ 4ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳನ್ನು ಹಾಗೂ 2 ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪ್ರಮೋಟ್ ಮಾಡಲಾಗುವುದರ ಮೂಲಕ ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. 6ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ ಹಾಗೂ 4 ನೇ ಸೆಮಿಸ್ಟರ್ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುತ್ತದೆ.

ಬಿಎಡ್ ವಿದ್ಯಾರ್ಥಿಗಳಿಗೆ ಸಹ ಜುಲೈ 28 ರಿಂದ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ವಿವಿ ವ್ಯಾಪ್ತಿಯ 4 ಜಿಲ್ಲೆಗಳ 9200 ವಿದ್ಯಾರ್ಥಿಗಳು ಬಿಎಡ್ ಪರೀಕ್ಷೆ ಎದುರಿಸಲಿದ್ದು, 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಪರೀಕ್ಷೆಗೆ ಮೊದಲು ವಿದ್ಯಾರ್ಥಿಗಳು, ಬೋಧಕರು ಲಸಿಕೆ ಪಡೆಯಬೇಕು. ಈಗಾಗಲೇ ಶೇ. 70 ರಷ್ಟು ವಿದ್ಯಾರ್ಥಿಗಳು ಹಾಗೂ ಶೇ. 90 ರಷ್ಟು ಶಿಕ್ಷಕರು ಕೋವಿಡ್ ಲಸಿಕೆ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರೂ ಸಹ ಕನಿಷ್ಠ ಪಕ್ಷ ಒಂದು ಡೋಸ್ ಆದರೂ ಪಡೆದಿರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+