ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷೆ ದಿನಾಂಕ ಪ್ರಕಟ

|
Google Oneindia Kannada News

ಕಲಬುರಗಿ, ಜುಲೈ 20; ಕೋವಿಡ್ ಕಾರಣದಿಂದಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಈಗ ಪರೀಕ್ಷೆಗಳ ದಿನಾಂಕಗಳನ್ನು ಘೋಷಣೆ ಮಾಡಲಾಗಿದೆ.

ಮಂಗಳವಾರ ಗುಲಬರ್ಗಾ ವಿವಿಯ ಕುಲಪತಿ ಪ್ರೊ. ದಯಾನಂದ ಅಗಸರ್ ಪರೀಕ್ಷೆಗಳ ದಿನಾಂಕವನ್ನು ಘೋಷಣೆ ಮಾಡಿದರು. ಬಿಎ, ಬಿಎಸ್ಸಿ, ಬಿಕಾಂ ಹಾಗೂ ಸ್ನಾತಕೋತ್ತರ ಪದವಿ ಸೇರಿ ಇನ್ನಿತರ ಪದವಿ ಕೋರ್ಸ್‍ಗಳ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಆಗಸ್ಟ್ 2 ರಿಂದ ನಡೆಸಲಾಗುತ್ತದೆ ಎಂದರು.

 ಪರೀಕ್ಷೆಗೆ ಹೆದರಿ ಮನೆಯಲ್ಲಿ ಕುಳಿತ ವಿದ್ಯಾರ್ಥಿನಿ; ಧೈರ್ಯ ತುಂಬಿ ಪರೀಕ್ಷೆ ಬರೆಸಿದ ಬಿಇಒ ಪರೀಕ್ಷೆಗೆ ಹೆದರಿ ಮನೆಯಲ್ಲಿ ಕುಳಿತ ವಿದ್ಯಾರ್ಥಿನಿ; ಧೈರ್ಯ ತುಂಬಿ ಪರೀಕ್ಷೆ ಬರೆಸಿದ ಬಿಇಒ

ಉನ್ನತ ಶಿಕ್ಷಣ ಪರಿಷತ್ ಹಾಗೂ ಯುಜಿಸಿಯ ಮಾರ್ಗಸೂಚಿಗಳ ಅನ್ವಯ ಪರೀಕ್ಷೆ ನಡೆಸಲಾಗುತ್ತಿದ್ದು, 4 ಜಿಲ್ಲೆಗಳ ಸುಮಾರು 150 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1 ಲಕ್ಷ 20 ಸಾವಿರ ಪದವಿ ಹಾಗೂ 12 ಸಾವಿರ ಸ್ನಾತಕೋತ್ತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

 SSLC ಪರೀಕ್ಷೆ ಬರೆದ 55 ವರ್ಷದ ಕೆಎಸ್‌ಆರ್‌ಪಿ ಸಿಬ್ಬಂದಿ SSLC ಪರೀಕ್ಷೆ ಬರೆದ 55 ವರ್ಷದ ಕೆಎಸ್‌ಆರ್‌ಪಿ ಸಿಬ್ಬಂದಿ

Gulbarga University Announced Exam Date

ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಆಧರಿಸಿ 2 ಹಾಗೂ 4ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳನ್ನು ಹಾಗೂ 2 ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪ್ರಮೋಟ್ ಮಾಡಲಾಗುವುದರ ಮೂಲಕ ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. 6ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ ಹಾಗೂ 4 ನೇ ಸೆಮಿಸ್ಟರ್ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುತ್ತದೆ.

ವಿದ್ಯಾರ್ಥಿಗಳೇ ಗಮನಿಸಿ: ಪದವಿ, ಡಿಪ್ಲೊಮಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ ಉನ್ನತ ಶಿಕ್ಷಣ ಇಲಾಖೆ!ವಿದ್ಯಾರ್ಥಿಗಳೇ ಗಮನಿಸಿ: ಪದವಿ, ಡಿಪ್ಲೊಮಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ ಉನ್ನತ ಶಿಕ್ಷಣ ಇಲಾಖೆ!

ಬಿಎಡ್ ವಿದ್ಯಾರ್ಥಿಗಳಿಗೆ ಸಹ ಜುಲೈ 28 ರಿಂದ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ವಿವಿ ವ್ಯಾಪ್ತಿಯ 4 ಜಿಲ್ಲೆಗಳ 9200 ವಿದ್ಯಾರ್ಥಿಗಳು ಬಿಎಡ್ ಪರೀಕ್ಷೆ ಎದುರಿಸಲಿದ್ದು, 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಪರೀಕ್ಷೆಗೆ ಮೊದಲು ವಿದ್ಯಾರ್ಥಿಗಳು, ಬೋಧಕರು ಲಸಿಕೆ ಪಡೆಯಬೇಕು. ಈಗಾಗಲೇ ಶೇ. 70 ರಷ್ಟು ವಿದ್ಯಾರ್ಥಿಗಳು ಹಾಗೂ ಶೇ. 90 ರಷ್ಟು ಶಿಕ್ಷಕರು ಕೋವಿಡ್ ಲಸಿಕೆ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರೂ ಸಹ ಕನಿಷ್ಠ ಪಕ್ಷ ಒಂದು ಡೋಸ್ ಆದರೂ ಪಡೆದಿರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

English summary
Gulbarga university announced exam date for BA, Bsc, Bcom. Exam postponed due to Covid situation. Now exam will be held from August 2nd, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X