15 ಕ್ಷೇತ್ರದ ಉಪ ಚುನಾವಣೆ; ಎಚ್. ಡಿ. ದೇವೇಗೌಡ ಭವಿಷ್ಯ

ಕಲಬುರಗಿ, ನವೆಂಬರ್ 12 : 15 ಕ್ಷೇತ್ರದ ಉಪ ಚುನಾವಣೆ ಬಗ್ಗೆ ರಾಜ್ಯಾದ್ಯಂತ ಚರ್ಚೆ ನಡೆಯುತ್ತಿದೆ. ಆಡಳಿತ ಪಕ್ಷ ಬಿಜೆಪಿಗೆ ಇದು ಮಹತ್ವದ ಚುನಾವಣೆಯಾಗಿದೆ. ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರು ಚುನಾವಣಾ ಫಲಿತಾಂಶದ ಬಗ್ಗೆ ಭವಿಷ್ಯ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು, "ಉಪ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆದರೆ, 5 ಕ್ಷೇತ್ರದಲ್ಲಿ ಮಾತ್ರ ನಾವು ಪ್ರಬಲ ಪೈಪೋಟಿ ನೀಡುತ್ತೇವೆ" ಎಂದರು.

HD Deve Gowda On 15 Seats By Elections

'ಸದ್ಯ ಯಡಿಯೂರಪ್ಪ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಅನ್ನಿಸುತ್ತಿದೆ. ಉಪ ಚುನಾವಣೆ ಫಲಿತಾಂಶ ಹೊರಬಿದ್ದ ಮೇಲೆ ಮಧ್ಯಂತರ ಚುನಾವಣೆ ಅನಿವಾರ್ಯ ಎಂದು ಕೆಲವರು ತಾಳೆ ಹಾಕುತ್ತಿದ್ದಾರೆ" ಎಂದು ದೇವೇಗೌಡ ಹೇಳಿದರು.

"ಮಧ್ಯಂತರ ಚುನಾವಣೆಗೆ ಹೋಗುವ ಶಕ್ತಿ ನಮಗೆ ಇಲ್ಲ. ಕಾಂಗ್ರೆಸ್-ಬಿಜೆಪಿಯ ಆಂತರಿಕ ಕಚ್ಚಾಟ ಮಿತಿಮೀರಿದರೆ ನಾವೇನು ಮಾಡಲು ಆಗುವುದಿಲ್ಲ" ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

"ಎಲ್ಲಾ 15 ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಅದು ತರ್ಕವಿಲ್ಲದ ಹೇಳಿಕೆ. ಬೆಳಗಾವಿ, ಹಳೆ ಮೈಸೂರು ಭಾಗದಲ್ಲಿನ ಕ್ಷೇತ್ರಗಳು ಜೆಡಿಎಸ್ ಪಾಲಾಗಲಿವೆ ಹೊರತು ಎಲ್ಲಾ ಕಡೆ ಗೆಲ್ಲುತ್ತೇವೆ ಎಂದು ನಾನು ಭ್ರಮೆಯಿಂದ ಹೇಳಲಾರೆ" ಎಂದರು.

ಡಿಸೆಂಬರ್ 5ರಂದು 15 ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ತೀರ್ಪು ಪ್ರಕಟವಾಗಲಿದೆ. 2018ರಲ್ಲಿ ಜೆಡಿಎಸ್ ಪಕ್ಷ ಗೆದ್ದಿದ್ದ ಮೂರು ಕ್ಷೇತ್ರಗಳಲ್ಲಿಯೂ ಉಪ ಚುನಾವಣೆ ಎದುರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+