ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನಂತ್ ಕುಮಾರ್ ಹೆಗಡೆ ರಾಜ್ಯಕ್ಕೇನು ಮಾಡಿದ್ದಾರೆ: ಎಚ್ಡಿಕೆ ಪ್ರಶ್ನೆ

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಕಲಬುರಗಿ, ಜನವರಿ 19: ಉತ್ತರಕನ್ನಡ ಜಿಲ್ಲೆಯ ಜನರು ಅನಂತ್ ಕುಮಾರ್ ಅವರನ್ನು ನಾಲ್ಕೈದು ಬಾರಿ ಸಂಸದರನ್ನಾಗಿ ಮಾಡಿದ್ದರು ಆದರೆ ಅವರದೇ ಜಿಲ್ಲೆಯಲ್ಲಿ ಎಷ್ಟರ ಮಟ್ಟಿಗೆ ಅಭಿವೃದ್ಧಿ ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಚ ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಮಾಡಲ ರಾಜಕಾರಣಿಗಳು ನಾಲಾಯಕ್ ಎಂದು ಟೀಕಿಸಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿಯವರು ರಾಜ್ಯಕ್ಕೆ ಸಚಿವ ಹೆಗಡೆ ಕೊಡುಗೆ ಏನು, ಇದುವರೆಗೆ ರಾಜ್ಯದಲ್ಲಿ ಒಂದೇ ಒಂದು ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ತೆರೆದಿಲ್ಲ ಇವೆಲ್ಲವನ್ನು ಗಮನಿಸಿದರೆ ನಾಲಾಯಕ್ ಯಾರೆಂಬುದು ನೀವೇ ಅರ್ಥಮಾಡಿಕೊಳ್ಳಿ ಎಂದರು.

ಅಭಿಮಾನಿಗಳ ಪಾಲಿನ ಅಣ್ಣ ಎಚ್ ಡಿ ಕುಮಾರಸ್ವಾಮಿ ವ್ಯಕ್ತಿಚಿತ್ರಅಭಿಮಾನಿಗಳ ಪಾಲಿನ ಅಣ್ಣ ಎಚ್ ಡಿ ಕುಮಾರಸ್ವಾಮಿ ವ್ಯಕ್ತಿಚಿತ್ರ

ಸರ್ಕಾರದ ನಿಧಿಯಲ್ಲಿ ಸಿಎಂ ಸಿದ್ದರಾಮಯ್ಯ ಸಾಧನಾ ಸಮಾವೇಶಗಳನ್ನು ಮಾಡುತ್ತಿದ್ದಾರೆ ಒಂದು ಕಡೆ ಬಿಜೆಪಿಯುಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸದೆ ಪರಿವರ್ತನಾ ಸಮಾವೇಶ ಮಾಡುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಹಿಂದುತ್ವ ಮತ್ತು ಜಾತ್ಯಾತೀತ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ.

HDK questions Hegde contribution to state

ಅಮಿತ್ ಶಾ ಅವರು ಬೆಂಗಳೂರಿಗೆ ರಾಜಕೀಯ ವ್ಯಾಪಾರಿಕರಣಕ್ಕೆ ಬರುತ್ತಿದ್ದಾರೆ ಆದರೆ ರಾಜ್ಯದ ಸಮಸ್ಯೆಗಳ ಬಗ್ಗೆ ಇದುವರೆಗೆ ತುಟಿ ಬಿಚ್ಚಿಲ್ಲ ಎಲ್ಲಾ ರಾಜಕೀಯ ಪಕ್ಷಗಳು ಸಮಸ್ಯೆಗಳು ಮರೆತು ಚುನಾವಣೆ ಮೂಡಿನಲ್ಲಿವೆ ಎಂದು ಕಿಡಿಕಾರಿದರು.

English summary
Former chief minister HD Kumaraswamy questioned union minister Anantkumar Hegde that what was the contribution of him as skill Development minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X