ಮಹಾರಾಷ್ಟ್ರದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ಕಡ್ಡಾಯ
ಕಲಬುರಗಿ, ಫೆಬ್ರವರಿ 22: ಮಹಾರಾಷ್ಟ್ರ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಲಬುರಗಿ ಜಿಲ್ಲಾಡಳಿತ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿದ್ದು, ಚೆಕ್ ಪೋಸ್ಟ್ ನಿರ್ಮಾಣ ಮಾಡಿದೆ.
ಮಹಾರಾಷ್ಟ್ರದಿಂದ ಕಲಬುರಗಿ ಜಿಲ್ಲೆ ಪ್ರವೇಶ ಮಾಡುವಾಗ ಕಡ್ಡಾಯವಾಗಿ 72 ಗಂಟೆಗಳ ಹಿಂದಿನ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸಾರ್ವಜನಿಕರ ತಪಾಸಣೆಗಾಗಿ ಚೆಕ್ ಪೋಸ್ಟ್ ಸ್ಥಾಪನೆ ಮಾಡಲಾಗಿದೆ.

ಅಳಂದ ತಾಲೂಕಿನಲ್ಲಿ ಹಿರೋಳಿ, ಖಜೂರಿ, ನಿಂಬಾಳದಲ್ಲಿ ಚೆಕ್ ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ಅಫಜಲಪೂರ ತಾಲೂಕಿನಲ್ಲಿ ಬಳ್ಳೂರ್ಗಿ ಮತ್ತು ಮಾಶಾಳ ಗ್ರಾಮದಲ್ಲಿ ಚೆಕ್ ಪೋಸ್ಟ್ ಸ್ಥಾಪನೆ ಮಾಡಲಾಗಿದೆ.
ಚೆಕ್ ಪೋಸ್ಟ್‌ಗಳಲ್ಲಿ ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲಾ ಜನರನ್ನು ತಪಾಸಣೆ ಮಾಡಲಾಗುತ್ತದೆ. ಆಗ ಕಡ್ಡಾಯವಾಗಿ ಕೋವಿಡ್ ನಗೆಟಿವ್ ವರದಿ ಹಾಜರುಪಡಿಸಬೇಕು. ಇಲ್ಲವಾದಲ್ಲಿ ಕಲಬುರಗಿ ಜಿಲ್ಲೆಯೊಳಗೆ ಪ್ರವೇಶ ಮಾಡುವಂತಿಲ್ಲ.
ಭಾನುವಾರದ ವರದಿಯಂತೆ 6,971 ಹೊಸ ಕೋವಿಡ್ ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 21,00,884. ಇದುವರೆಗೂ ಮೃತಪಟ್ಟವರು 51,788, ಸಕ್ರಿಯ ಪ್ರಕರಣಗಳ ಸಂಖ್ಯೆ 52,956.












Click it and Unblock the Notifications