Breaking: ಕಲಬುರ್ಗಿ ಜಿಲ್ಲೆಯಲ್ಲಿ ಭಾರಿ ಮಳೆ: ಶಾಲಾ ಕಾಲೇಜುಗಳಿಗೆ ರಜೆ
ಬೆಂಗಳೂರು, ಜು.11: ಕಲಬುರ್ಗಿ ಜಿಲ್ಲೆಯಾದ್ಯಂತ ಭಾರಿ ಮಳೆಯ ಕಾರಣ ಸೋಮವಾರ (ಜು.11)ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜು.8ರಿಂದ 12ರವರೆಗೆ ಕಲಬುರ್ಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾನುವಾರ ಭಾರಿ ಮಳೆ ಸುರಿದಿದೆ.
ಕಲಬುರ್ಗಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವ ಪ್ರಯುಕ್ತ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಶಾಲಾ- ಕಾಲೇಜುಗಳು, ಅಂಗನವಾಡಿಗಳು ಮತ್ತು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಜು.11ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಆದೇಶ ಹೊರಡಿಸಿದ್ದಾರೆ.
Recommended Video
ಒಂದು ಆಟೋದಲ್ಲಿ 27 ಜನ ಕೂತಿದ್ದನ್ನು ನೋಡಿ ಬೆಚ್ಚಿಬಿದ್ದ ಪೊಲೀಸರು ಮಾಡಿದ್ದೇನು? | *India | OneIndia Kannada













Click it and Unblock the Notifications