ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶೈಕ್ಷಣಿಕ ಸ್ವಾಯತ್ತತೆ, ಆಡಳಿತ ವಿಕೇಂದ್ರೀಕರಣ!

|
Google Oneindia Kannada News

ಕಲಬುರಗಿ, ಆ. 24: "ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್.ಇ.ಪಿ.-2020) ಶೈಕ್ಷಣಿಕ ಸಂಸ್ಥೆಗಳ ಸ್ವಾಯತ್ತತೆಯ ಜೊತೆಗೆ ಸಂಬಂಧಿಸಿದ ಆಡಳಿತಾತ್ಮಕ ವಿಕೇಂದ್ರಕರಣಕ್ಕೂ ಒತ್ತು ನೀಡುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ ಹೇಳಿದರು.

ಮಂಗಳವಾರ ಕಲಬುರಗಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಾಹಿತಿಗಳೊಂದಿಗೆ ಸಂವಾದ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ, "ಜಾಗತಿಕ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವುದೇ ಈ ಸ್ವಾಯತ್ತತೆ ಮತ್ತು ವಿಕೇಂದ್ರಕರಣದ ಆಶಯವಾಗಿದೆ" ಎಂದರು.

ಸುಮಾರು ಐದೂವರೆ ವರ್ಷಗಳ ದೀರ್ಘಕಾಲದ ಸಮಾಲೋಚನೆ ಹಾಗೂ 3 ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಕ್ರೋಡೀಕರಿಸಿ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ರೂಪಿಸಲಾಗಿದೆ. ಇದು ನಮ್ಮ ತನವನ್ನು ಉಳಿಸಿಕೊಂಡೇ ಜಾಗತಿಕ ಪೈಪೋಟಿಯಲ್ಲಿ ಯಶಸ್ವಿಯಾಗಬೇಕೆಂಬ ಆಶಯ ಹೊಂದಿದೆ ಎಂದು ವಿವರಿಸಿದರು.

ಮಾತೃಭಾಷೆಗೆ ಧಕ್ಕೆಯಿಲ್ಲ!

ಮಾತೃಭಾಷೆಗೆ ಧಕ್ಕೆಯಿಲ್ಲ!

"ಕನ್ನಡ ಭಾಷೆಗಾಗಲೀ ಅಥವಾ ನಮ್ಮ ಭಾರತದ ಇನ್ನಿತರ ಭಾಷೆಗಾಗಲೀ ಇದರಿಂದ ಧಕ್ಕೆಯಾಗುವುದಿಲ್ಲ. ಪದವಿ ಹಂತದಲ್ಲಿ ಎರಡು ವರ್ಷಗಳ ಅವಧಿಗೆ ಕನ್ನಡ ಕಲಿಕೆಯನ್ನು ಕಡ್ಡಾಯ ಮಾಡಿರುವುದರ ಜೊತೆಗೆ ಉನ್ನತ ಶಿಕ್ಷಣದ ಕೋರ್ಸ್ ಗಳನ್ನು ಪ್ರಾದೇಶಿಕ ಭಾಷೆಯಲ್ಲೂ ಕಲಿಸುವ ವ್ಯವಸ್ಥೆ ಜಾರಿಗೊಳ್ಳಲಿದೆ. ಈ ಕ್ರಮಗಳಿಂದಾಗಿ, ನಮ್ಮ ಭಾಷೆಗಳು ಮತ್ತಷ್ಟು ಬಲಗೊಳ್ಳಲಿವೆ" ಎಂದು ಅಶ್ವಥ್ ನಾರಾಯಣ ವಿವರಿಸಿದರು.

ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶ ಹೆಚ್ಚಳ

ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶ ಹೆಚ್ಚಳ

"ಸರ್ಕಾರಿ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಈ ನೀತಿಯು ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶಗಳನ್ನು ಹೆಚ್ಚಿಸುತ್ತದೆ. ಹಾಗೆಯೇ ಬೋಧಕರಿಗೆ ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲೂ ಚಲನಶೀಲತೆಯನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆಗೆ ಕೌಶಲಗಳನ್ನು ಬೆಳೆಸಲು ಸಹಕಾರಿ. ಒಟ್ಟಾರೆ ವಿದ್ಯಾರ್ಥಿಗಳನ್ನು ಪರಿಪೂರ್ಣ ವ್ಯಕ್ತಿಗಳನ್ನಾಗಿಸುವ ಆಶಯ ಹೊಂದಿದ ಸಮಗ್ರ ದೃಷ್ಟಿಕೋನದ ನೀತಿ ಇದಾಗಿದೆ" ಎಂದು ಉನ್ನತ ಶಿಕ್ಷಣ ಸಚಿವರು ಹೇಳಿದ್ದಾರೆ.

ಹಲವು ಸಲಹೆ ನೀಡಿದ ಸಾಹಿತಿಗಳು!

ಹಲವು ಸಲಹೆ ನೀಡಿದ ಸಾಹಿತಿಗಳು!

ಸಚಿವ ಡಾ. ಅಶ್ವಥ್ ನಾರಾಯಣ ಅವರೊಂದಿಗೆ ಚರ್ಚೆ ನಡೆಸಿದ ಸಾಹಿತಿಗಳು ಕೆಲವು ಬೇಡಿಕೆಗಳಿರುವ ಮನವಿ ಪತ್ರವನ್ನು ಸಚಿವರಿಗೆ ನೀಡಿದರು. ಜೊತೆಗೆ ಯಾವ ರೀತಿಯಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಬೇಕು ಎಂದು ವಿವರಿಸಿದರು. ವಿಕ್ರಮ ವಿಸಾಜಿ, ಶಂಕರಯ್ಯ ಆರ್.ಘಂಟಿ, ಬಸವರಾಜ ಡೋಣೂರ, ಎಚ್.ಟಿ. ಪೋತೆ, ಪ್ರಭಾಕರ ಜೋಶಿ, ಡಾ. ಸುಜಾತಾ ಜಂಗಮಶೆಟ್ಟಿ ಮತ್ತಿತರರು ಇದ್ದರು.

ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರ!

ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರ!

ಇದೇ ಸಂದರ್ಭದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಒಂದು‌ ದಿನದ ಕಾರ್ಯಾಗಾರವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಉದ್ಘಾಟಿಸಿದರು.

ಬೆಂಗಳೂರಿಗೆ ಹೊರತಾದ ಭಾಗದವರು ಕೂಡ ಇಂದು ಉದ್ಯಮಿಗಳಾಗಿ ಗಮನ ಸೆಳೆದಿದ್ದಾರೆ. ಇಂಥವರ ಯಶಸ್ಸಿನ ಕಥನಗಳು ಉದ್ಯಮಶೀಲರಿಗೆ ಸ್ಫೂರ್ತಿ ಹಾಗೂ ಪ್ರೇರಣೆಯಾಗಬೇಕು. ಉದ್ಯಮಕ್ಕೆ ಮುಂದಾಗುವವರು ಯಾವ ಜಾಗ ಹಾಗೂ ಯಾವ ಸನ್ನಿವೇಶಕ್ಕೆ ಯಾವ ಉದ್ಯಮ ಸೂಕ್ತ ಎಂಬುದನ್ನು ಗುರುತಿಸಿಕೊಳ್ಳುವ ಜೊತೆಗೆ ಮಾರುಕಟ್ಟೆಯ ಬೇಡಿಕೆ-ಪೂರೈಕೆ ಕುರಿತು ಅರಿವು ಬೆಳೆಸಿಕೊಳ್ಳಬೇಕು. ಪರಿಸರಕ್ಕೆ ಹೊರೆಯಾಗದ ಸುಸ್ಥಿರ ಉದ್ದಿಮೆಗಳ ಸ್ಥಾಪನೆಗೆ ಮುಂದಾಗಬೇಕು ಎಂದು ಅಭಿಪ್ರಾಯಪಟ್ಟರು.

ಶಾಸಕ ಬಸವರಾಜ ಮತ್ತಿಮೂಡ, ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದೇವರು ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಡಾ. ತಿಮ್ಮೇಗೌಡ, ಕುಲಪತಿ ದಯಾನಂದ ‌ಅಗಸರ ಸೇರಿದಂತೆ ಇತರರು ಇದ್ದರು.

English summary
The National Education Policy (NEP-2020) implemented by the government paves way for administrative decentralisation in addition to providing greater autonomy to educational institutions, Dr.C.N. Ashwatha Narayana, stated on Tuesday. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X