ನಾನು ಸಚಿವ ಸ್ಥಾನದ ಆಕಾಂಕ್ಷಿ : ಕನೀಜ್ ಫಾತಿಮಾ

ಕಲಬುರಗಿ, ಮೇ 28 : 'ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡುತ್ತೇನೆ' ಎಂದು ಗುಲ್ಬರ್ಗಾ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಕನೀಜ್ ಫಾತಿಮಾ ಹೇಳಿದರು.

ಕಲಬುರಗಿಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವ ದಿ.ಖಮರುಲ್ ಇಸ್ಲಾಂ ಪತ್ನಿ ಕನೀಜ್ ಫಾತಿಮಾ ಅವರು, 'ವಿಧಾನಸಭೆಗೆ ಆಯ್ಕೆಯಾಗಿರುವ ಮುಸ್ಲಿಂ ಮಹಿಳಾ ಸದಸ್ಯೆ ನಾನಾಗಿದ್ದೇನೆ. ಹೀಗಾಗಿ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡುವೆ' ಎಂದರು.

I am aspirant for minister post says Kaneez Fatima

'ಲಕ್ಷ್ಮೀ ಹೆಬ್ಬಾಳ್ಕರ್, ನನಗೆ ಸಚಿವ ಸ್ಥಾನ ನೀಡಿದರೆ ಸ್ವಾಗತ. ಈ ಕುರಿತು ಮಲ್ಲಿಕಾರ್ಜು ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವೆ. ಸಚಿವ ಸ್ಥಾನ ಸಿಗುತ್ತದೆ, ಹೈಕಮಾಂಡ್ ಮೇಲೆ ನನಗೆ ನಂಬಿಕೆ ಇದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನೀಜ್ ಫಾತಿಮಾ ಅವರು 2018ರ ಚುನಾವಣೆಗೆ ಗುಲ್ಬರ್ಗಾ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 64,311 ಮತಗಳನ್ನು ಪಡೆದು ಅವರು ಚುನಾವಣೆಯಲ್ಲಿ ಜಯಗಳಿಸಿದ್ದಾರೆ.

7ಮಹಿಳೆಯರು ವಿಧಾನಸಭೆಗೆ : 2018ರ ಚುನಾವಣೆಯಲ್ಲಿ ಜಯಗಳಿಸಿ 7 ಮಹಿಳೆಯರು ವಿಧಾನಸೌಧ ಪ್ರವೇಶಿಸಿದ್ದಾರೆ. ಮಹಿಳಾ ಕೋಟಾದಡಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ? ಎಂದು ಕಾದು ನೋಡಬೇಕು.

ಕಾಂಗ್ರೆಸ್‌ನಿಂದ ಅಂಜಲಿ ನಿಂಬಾಳ್ಕರ್ (ಖಾನಾಪುರ), ಲಕ್ಷ್ಮೀ ಹೆಬ್ಬಾಳ್ಕರ್ (ಬೆಳಗಾವಿ ಗ್ರಾಮೀಣ), ರೂಪಾ ಶಶಿಧರ್ (ಕೆಜಿಎಫ್), ಕನೀಜ್ ಫಾತಿಮಾ (ಗುಲ್ಬರ್ಗಾ ಉತ್ತರ) ಆಯ್ಕೆಯಾಗಿದ್ದಾರೆ.

ಬಿಜೆಪಿಯಿಂದ ರೂಪಾಲಿ ನಾಯಕ್ (ಕಾರವಾರ), ಶಶಿಕಲಾ ಜೊಲ್ಲೆ (ನಿಪ್ಪಾಣಿ), ಪೂರ್ಣಿಮಾ ಶ್ರೀನಿವಾಸ್ (ಹಿರಿಯೂರು) ಶಾಸಕರಾಗಿ ಆಯ್ಕೆಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+