ಬಸವಕಲ್ಯಾಣದಲ್ಲಿ ಸಚಿವ ಸಂಪುಟ ಸಭೆ : ಯಡಿಯೂರಪ್ಪ
ಕಲಬುರಗಿ, ಡಿಸೆಂಬರ್. 11 : 'ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಶರಣರ ನಾಡು ಬಸವ ಕಲ್ಯಾಣದಲ್ಲಿ ರಾಜ್ಯ ಸಚಿವ ಸಂಪುಟ ಸಭೆ' ನಡೆಸುತ್ತೇನೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದರು.
ಸೋಮವಾರ ಕಲಬುರಗಿಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಯ ವೀರಶೈವ ಲಿಂಗಾಯತ ನೌಕರರ ರಾಜ್ಯ ಮಟ್ಟದ ಸಭೆಯನ್ನು ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು.

'ಚುನಾವಣೆ ಪ್ರಚಾರಕ್ಕಾಗಿ ಕೈಗೊಂಡಿರುವ ಪರಿವರ್ತನಾ ಯಾತ್ರೆ ಈಗಾಗಲೇ 89 ಕ್ಷೇತ್ರಗಳಲ್ಲಿ ಪೂರ್ಣಗೊಂಡಿದ್ದು, ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ' ಎಂದು ಹೇಳಿದರು.
'ಜನ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಗೊಂಡಿರುವುದು ಯಾತ್ರೆಗೆ ಸೇರುತ್ತಿರುವ ಜನ ಸಾಗರವೇ ನಿರೂಪಿಸುತ್ತಿದೆ. 2018ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಬಸವಕಲ್ಯಾಣದಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತೇನೆ' ಎಂದರು.
'ಎನ್‌ಇಕೆಎಸ್‌ಆರ್‌ಟಿಸಿಗೆ ನೀಡಲಾಗುತ್ತಿದ್ದ ಮೋಟಾರು ವಾಹನ ತೆರಿಗೆ ವಿನಾಯಿತಿ ಮುಂದುವರಿಸಬೇಕು. ಈಗಿನ ಕಾಂಗ್ರೆಸ್ ಸರ್ಕಾರ ಮುಂದುವರೆಸದಿದ್ದಲ್ಲಿ ಮುಂದೆ ತಾವು ಅಧಿಕಾರಕ್ಕೆ ಬಂದ ತಕ್ಷಣ ಈ ಕುರಿತು ಆದೇಶ ಹೊರಡಿಸಲಾಗುವುದು' ಎಂದು ಭರವಸೆ ನೀಡಿದರು.












Click it and Unblock the Notifications