ಲಿಂಗಾಯತರು ಕಾಂಗ್ರೆಸ್‌ಗೆ ಮತ ಹಾಕಿದರೆ ಅಪರಾಧ : ಯಡಿಯೂರಪ್ಪ

Recommended Video

      ಲಿಂಗಾಯತರು ಕಾಂಗ್ರೆಸ್ ಗೆ ಮತ ಹಾಕಿದರೆ ಅದು ಅಪರಾಧ ಅಂದ್ರು ಬಿ ಎಸ್ ಯಡಿಯೂರಪ್ಪ | Oneindia Kannada

      ಕಲಬುರಗಿ, ಮೇ 15 : 'ಲಿಂಗಾಯತರು ಕಾಂಗ್ರೆಸ್‌ಗೆ ಮತ ಹಾಕಿದರೆ ಅಪರಾಧ ಮಾಡಿದಂತೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

      ಕಲಬುರಗಿಯಲ್ಲಿ ಬುಧವಾರ ಯಡಿಯೂರಪ್ಪ ಅವರು ಈ ಹೇಳಿಕೆ ನೀಡಿದ್ದು ಉಪ ಚುನಾವಣೆ ಹಿನ್ನಲೆಯಲ್ಲಿ ಇದು ಕುತೂಹಲಕ್ಕೆ ಕಾರಣವಾಗಿದೆ. ಮೇ 19ರಂದು ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.

      ಉಪ ಚುನಾವಣೆಯ ಮತದಾನಕ್ಕೆ ಕೇವಲ ನಾಲ್ಕು ದಿನಗಳು ಬಾಕಿ ಇದೆ. ಇಂತಹ ಸಮಯದಲ್ಲಿ ಯಡಿಯೂರಪ್ಪ ಅವರು ಜಾತಿ ರಾಜಕಾರಣದ ದಾಳವನ್ನು ಉರುಳಿಸಿದ್ದಾರೆ. ಎರಡೂ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ಹೆಚ್ಚಿವೆ.

      Yeddyurappa

      ಚಿಂಚೋಳಿ ಕ್ಷೇತ್ರದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಲಿಂಗಾಯತ ಮತಗಳಿವೆ. ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಯಡಿಯೂರಪ್ಪ ಅವರು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಈ ಕುರಿತು ಚುನಾವಣಾ ಆಯೋಗಕ್ಕೂ ದೂರು ನೀಡಿದೆ.

      ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ಕೊಡಲು ಕಾಂಗ್ರೆಸ್-ಜೆಡಿಎಸ್ ಸಹ ತಂತ್ರ ರೂಪಿಸಿವೆ. ಚಿಂಚೋಳಿಯಲ್ಲಿ ಲಿಂಗಾಯತ ಸಮುದಾಯದ ಸಭೆಯನ್ನು ಕರೆಯಲಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗೃಹ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+