ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 10; ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜೊತೆಗೆ ಉಷ್ಣಾಂಶ ಸಹ ಕುಸಿತವಾಗಲಿದೆ ಎಂದು ಇಲಾಖೆ ಹೇಳಿದೆ.

ಈ ಬಾರಿ ನೈಋತ್ಯ ಮುಂಗಾರು ಅವಧಿಯಿಂದಲೂ ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಲೇ ಇದೆ. ಅಕ್ಟೋಬರ್, ನವೆಂಬರ್ ತಿಂಗಳಿನಲ್ಲಿಯೂ ಅಕಾಲಿಕ ಮಳೆಯಾಗಿದೆ. 'ಜವಾದ್' ಚಂಡಮಾರುತದ ಪ್ರಭಾವ ದೇಶದಲ್ಲಿ ಕಡಿಮೆಯಾಗಿದೆ.

ನಿರಂತರ ಅಕಾಲಿಕ ಮಳೆ: ದಕ್ಷಿಣ ಭಾರತದಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ ನಿರಂತರ ಅಕಾಲಿಕ ಮಳೆ: ದಕ್ಷಿಣ ಭಾರತದಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ

ಭಾರತೀಯ ಹವಾಮಾನ ಇಲಾಖೆ ಆಂಧ್ರ ಪ್ರದೇಶ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆಯಲ್ಲಿ ಮುಂದಿನ ದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ.

ಅನ್ನದಾತನ ಅನ್ನ ಕಿತ್ತುಕೊಂಡ ಮಳೆ; ಚಿತ್ರದುರ್ಗ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿಅನ್ನದಾತನ ಅನ್ನ ಕಿತ್ತುಕೊಂಡ ಮಳೆ; ಚಿತ್ರದುರ್ಗ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ

IMD Issues Rain Fall Alert In southern Indian States For Five Days

ಕರ್ನಾಟಕ ಮತ್ತು ತೆಲಂಗಾಣದದಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ದಕ್ಷಿಣ ಭಾರತದಲ್ಲಿ ಮಾತ್ರ ಮಳೆಯಾಗಲಿದ್ದು, ದೇಶದ ಉತ್ತರ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ.

ಅಕಾಲಿಕ ಮಳೆ; ಬೆಳೆ ಹಾನಿ ಪರಿಹಾರ ನೇರ ರೈತರ ಖಾತೆಗೆ ಅಕಾಲಿಕ ಮಳೆ; ಬೆಳೆ ಹಾನಿ ಪರಿಹಾರ ನೇರ ರೈತರ ಖಾತೆಗೆ

ದಕ್ಷಿಣ ಭಾರತದ ರಾಜ್ಯಗಳಲ್ಲಿ ವಾಡಿಕೆಗಿಂತಲೂ ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಳೆಯ ಜೊತೆಗೆ ಉಷ್ಣಾಂಶ ಸಹ ಕುಸಿತವಾಗಲಿದ್ದು, ಚಳಿಯ ಅನುಭವವಾಗಲಿದೆ. ಉತ್ತರ ಭಾರತದದಲ್ಲಿ ಉಷ್ಣಾಂಶದಲ್ಲಿ ಯಾವುದೇ ಕುಸಿತವಾಗುವುದಿಲ್ಲ.

ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರದಲ್ಲಿ ಮುಂದಿನ 24 ಗಂಟೆಗಳ ಕಾಲ ಮಂಜು ಕವಿದ ವಾತಾವರಣ ಇರಲಿದೆ. ಶನಿವಾರದ ಬಳಿಕ ವಾತಾವರಣ ಸಹಜ ಸ್ಥಿತಿಗೆ ಮರಳಲಿದೆ.

ಜೂನ್ ತಿಂಗಳಿನಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಪ್ರವಾಹ ಮತ್ತು ಭೂ ಕುಸಿತದ ಪ್ರಕರಣಗಳು ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಉತ್ತರಾಖಂಡ್ ರಾಜ್ಯಗಳಲ್ಲಿ ವರದಿಯಾಗಿವೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸಹ ಈ ವರ್ಷ ವಾಡಿಕೆಗಿಂತಲೂ ಅಧಿಕ ಮಳೆಯಾಗಿದೆ.

ಯಾವ ಜಿಲ್ಲೆಗಳಲ್ಲಿ ಮಳೆ; ಕರ್ನಾಟಕದಲ್ಲಿ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸೂಚನೆ ಇದೆ. ವಿವಿಧ ಜಿಲ್ಲೆಗಳಲ್ಲಿ ಮಂಜು, ಮೋಡ ಕವಿದ ವಾತಾವರಣ ಶುಕ್ರವಾರ ಇರಲಿದೆ ಎಂದು ಅಂದಾಜಿಸಲಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಕಡಿಮೆಯಾಗಿದೆ. ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯಕ್ಕೆ 6544 ಕ್ಯುಸೆಕ್, ಲಿಂಗನಮಕ್ಕಿಗೆ 2550 ಕ್ಯುಸೆಕ್, ತುಂಗಭದ್ರಾ ಜಲಾಶಯಕ್ಕೆ 5457 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಬಾರಿ ಸುರಿದ ಅಕಾಲಿಕ ಮಳೆಗೆ ಭತ್ತ, ಅಡಕೆ, ರಾಗಿ, ಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ತರಕಾರಿ ಬೆಲೆಗಳಿಗೆ ಹಾನಿಯಾಗಿದ್ದು, ದರ ಏರಿಕೆಯಾಗಿದೆ.

ವಿವಿಧ ಜಿಲ್ಲೆಗಳಲ್ಲಿ ಭತ್ತದ ಕಟಾವು ಈಗ ಆರಂಭವಾಗಿದೆ. ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲು ಕರ್ನಾಟಕ ಸರ್ಕಾರ ನಿಗದಿಪಡಿಸಿದ ದರದಂತೆ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.

ಯಂತ್ರಕ್ಕೆ ದರ ನಿಗದಿ; ಬಳ್ಳಾರಿ ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ ರೂ. 2100 ಮೀರದಂತೆ ಬಾಡಿಗೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ತಿಳಿಸಿದ್ದಾರೆ. ತಪ್ಪಿದ್ದಲ್ಲಿ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ವರ್ಷ ಅಕಾಲಿಕ ಮಳೆಯಿಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಭತ್ತ ಬೆಳೆದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿರುವುದನ್ನು ಗಮನಿಸಿ ಈ ಆದೇಶ ಹೊರಡಿಸಲಾಗಿದೆ.

2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 88516 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಆವರಿಸಿದೆ. ಈಗಾಗಲೇ ಹಲವು ಕಡೆ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಶೇ.95ರಷ್ಟು ರೈತರು ಭತ್ತದ ಕಟಾವನ್ನು ಭತ್ತ ಕಟಾವು ಯಂತ್ರಗಳ ಮೂಲಕ ಮಾಡುತ್ತಿದ್ದು, ರೈತರು ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನ ಪಡೆಯಬಹುದು ಎಂದು ಹೇಳಿದ್ದಾರೆ.

ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ ರೂ. 2500 ರಿಂದ 3 ಸಾವಿರಗಳವರೆಗೆ ಬಾಡಿಗೆ ಹಣ ನಿಗದಿಪಡಿಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅಕಾಲಿಕ ಮಳೆಯಿಂದ ರೈತರು ಸಂಕಷ್ಟಕ್ಕಿಡಾದ ಹಿನ್ನೆಲೆ ಈ ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.

English summary
The India Meteorological Department (IMD) has predicted light to moderate rains in several parts of southern India for Five days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X