ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೇವರ್ಗಿ ಕಾಂಗ್ರೆಸ್ ಶಾಸಕ ಡಾ.ಅಜಯ್ ಸಿಂಗ್ ರಿಗೆ ಕೊರೊನಾವೈರಸ್

|
Google Oneindia Kannada News

ಕಲಬುರಗಿ, ಜುಲೈ.10: ಕೊರೊನಾವೈರಸ್ ಸೋಂಕಿನ ಭೀತಿ ರಾಜಕೀಯ ಮುಖಂಡರು ಮತ್ತು ಜನಪ್ರತಿನಿಧಿಗಳಿಗೂ ಕಾಡುತ್ತಿದೆ. ಜಿಲ್ಲೆಯ ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಅಜಯ್ ಸಿಂಗ್ ಅವರಿಗೂ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.

Recommended Video

Negative ಇದ್ರು Positive ಇದೆ ಬನ್ನಿ ಅಂತಾರೆ ಹುಷಾರ್ | Victoria Hospital | Oneindia Kannada

ತಮಗೆ ಕೊರೊನಾವೈರಸ್ ಸೋಂಕು ತಗಲಿರುವ ಬಗ್ಗೆ ಸ್ವತಃ ಶಾಸಕ ಡಾ.ಅಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಕೊವಿಡ್-19 ಸೋಂಕಿತ ಲಕ್ಷಣಗಳು ಕಂಡು ಬಂದ ಹಿನ್ನೆಲೆ ವೈದ್ಯಕೀಯ ತಪಾಸಣೆ ನಡೆಸಿದ್ದು, ಈ ವೇಳೆ ಸೋಂಕು ತಗಲಿರುವುದು ದೃಢಪಟ್ಟಿದೆ. ಮುಂದಿನ 2 ವಾರಗಳವರೆಗೂ ಕ್ವಾರೆಂಟೈನ್ ನಲ್ಲಿ ಇರುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಕೊರೊನಾ ಸೋಂಕಿತರಿಗಾಗಿ 6,000 ಹಾಸಿಗೆ ಮೀಸಲು: ಸುಧಾಕರ್ಕೊರೊನಾ ಸೋಂಕಿತರಿಗಾಗಿ 6,000 ಹಾಸಿಗೆ ಮೀಸಲು: ಸುಧಾಕರ್

ಇನ್ನು, ತಮ್ಮ ಜೊತೆಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ ಜನರು ಕಡ್ಡಾಯವಾಗಿ ಕೊವಿಡ್ ಟೆಸ್ಟಿಂಗ್ ಸೆಂಟರ್ ಗೆ ತೆರಳಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವಂತೆ ಶಾಸಕರು ತಮ್ಮ ಬೆಂಬಲಿಗರಿಗೆ ಟ್ವಿಟ್ಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

Jevargi Congress MLA Dr Ajay Singh Tests Positive For Coronavirus

ಕಲಬುರಗಿಯಲ್ಲೇ ಒಟ್ಟು 1901 ಪ್ರಕರಣಗಳು:

ಕಲಬುರಗಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲೇ 85 ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 1901ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 1392 ಸೋಂಕಿತರು ಗುಣಮುಖರಾಗಿದ್ದು, 477 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಇನ್ನು, 32 ಮಂದಿ ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದಾರೆ.

English summary
Jevargi Congress MLA Dr Ajay Singh Tests Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X