ಕಲಬುರಗಿಯಲ್ಲಿ ಸೆಪ್ಟೆಂಬರ್ 8ರಂದು ಉದ್ಯೋಗ ಮೇಳ

Posted By:
Subscribe to Oneindia Kannada

ಕಲಬುರಗಿ, ಸೆಪ್ಟೆಂಬರ್ 06 : ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಸೆಪ್ಟೆಂಬರ್ 8ರಂದು ಕಲಬುರಗಿ ಜಿಲ್ಲಾ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

5ಕ್ಕೂ ಅಧಿಕ ಪ್ರತಿಷ್ಠಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ಮೇಳವನ್ನು ಸೆಪ್ಟೆಂಬರ್ 8ರಂದು ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Job fair in Kalaburagi on Sept 08

ಬೆಂಗಳೂರಿನ ಹೆಡ್‍ಹೆಲ್ಡ್ ಹೈ ಫೌಂಡೇಶನ ಹಾಗೂ ಕಲಬುರಗಿಯ ಯುರೇಕಾ ಫೋರ್ ಬೇಸ್ ಲಿಮಿಟೆಡ್, ಡಾನ್ ಬಾಸ್ಕೋ ಪ್ಯಾರ್, ಸ್ಪಂದನಾ ಸ್ಫೂರ್ತಿ ಫೈನಾನ್ ಶಿಯಲ್ ಲಿಮಿಟೆಡ್ ಹಾಗೂ ಎಸ್.ಬಿ.ಐ. ಲೈಫ್ ಇನ್ಸುರೆನ್ಸ್ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.

ಈ ಭಾಗದ ಅಭ್ಯರ್ಥಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆಯಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Kalaburagi district organized Job fair Kalaburagi on September 08, 2017. More than 5 company will participate in the job fair.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ