Get Updates
Get notified of breaking news, exclusive insights, and must-see stories!

ಕಲಬುರಗಿ; ವಿಮಾನ ನಿಲ್ದಾಣಕ್ಕೆ ಚಾಲನೆ ಕೊಟ್ಟ ಯಡಿಯೂರಪ್ಪ

Recommended Video

      IATA gives Green signal to public aviation in Kalaburagi airport | Oneindia Kannada

      ಕಲಬುರಗಿ, ನವೆಂಬರ್ 22: IATAನಿಂದ ಕಲಬುರಗಿಯಲ್ಲಿ ಸಾರ್ವಜನಿಕ ವಿಮಾನಯಾನ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇಂದು ಕಲಬುರಗಿಯ ವಿಮಾನ ನಿಲ್ದಾಣ ಲೋಕಾರ್ಪಣೆಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದಲ್ಲಿ ಕಲಬುರಗಿಗೆ ಆಗಮಿಸುವ ಮೂಲಕ ಪ್ರಯಾಣಕ್ಕೆ ಚಾಲನೆ ನೀಡಿದ್ದಾರೆ.

      ಬೆಂಗಳೂರಿನ‌ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ OG-117 ಸಂಖ್ಯೆಯ 50 ಸೀಟರ್ ವಾಣಿಜ್ಯ ವಿಮಾನದಿಂದ ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ ಕಾಂಪ್ಲೆಕ್ಸ್ ಎದುರು ಸಾರ್ವಜನಿಕ ಸಮಾರಂಭವನ್ನೂ ಏರ್ಪಡಿಸಲಾಗಿದೆ.

      ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಪ್ರಥಮ ವಾಣಿಜ್ಯ ಸಂಚಾರವಾಗಿ ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ನೀರು‌ ಚಿಮ್ಮುವ ಮೂಲಕ ಪ್ರಯಾಣಿಕರಿಗೆ ವಾಟರ್ ಸಲ್ಯೂಟ್ ನೀಡಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಕಿ ಪೋಲೀಸರಿಂದ ಮುಖ್ಯಮಂತ್ರಿಗಳಿಗೆ ಗೌರವ ರಕ್ಷೆ ಸಲ್ಲಿಸಲಾಯಿತು.

      ಕಲಬುರ್ಗಿ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, "ಕಲ್ಯಾಣ ಕರ್ನಾಟಕದ ಅಭಿವೃದ್ಧಿಕ್ಕೆ ಕಲಬುರಗಿ ವಿಮಾನ ನಿಲ್ದಾಣ ಹೊಸ ಆಯಾಮ ನೀಡಲಿದೆ. ರಾಜ್ಯದ ಈಶಾನ್ಯ ಭಾಗಕ್ಕೆ ವಿಮಾನಯಾನ ಸಂಪರ್ಕ ಹೊಂದಿರುವುದರಿಂದ ದೇಶ, ವಿದೇಶದಿಂದ ಉದ್ಯಮಿಗಳು ಇಲ್ಲಿ ಹಣ ಹೂಡಿಕೆ ಮಾಡಲಿದ್ದಾರೆ. 2008ರಲ್ಲಿ ನನ್ನಿಂದಲೇ ಅಡಿಗಲ್ಲು ಹಾಕಿದ ವಿಮಾನ ನಿಲ್ದಾಣವನ್ನು ನಾನೇ ಲೋಕಾರ್ಪಣೆ ಮಾಡುತ್ತಿರುವುದು ಯಾವುದೋ ಜನ್ಮದ ಪುಣ್ಯ"ಎಂದರು.

      ಈ ಭಾಗಕ್ಕೆ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಿ ಕಲ್ಬುರ್ಗಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಸಮಗ್ರ ಅಭಿವೃದ್ದಿಗೊಳಿಸಿ ಕಲ್ಯಾಣ ಪದದ ನಿಜ ಅರ್ಥದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದೂ ತಿಳಿಸಿದರು.

      3.175 ಕಿ.ಮಿ. ಉದ್ದದ ರನ್ ವೇ ಹೊಂದಿರುವ ಕಲಬುರಗಿ ವಿಮಾನ ನಿಲ್ದಾಣ ರಾಜ್ಯದ 2ನೇ ಹಾಗೂ ದೇಶದ 10ನೇ ಅತಿ ಉದ್ದದ ರನ್ವೆ ಆಗಲಿದೆ ಎಂದರು.

      ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ 1980ರಿಂದಲೇ ಕೂಗು ಆರಂಭಗೊಂಡಿತ್ತು.

      Kalaburagi Airport Starts Operation From Today

      ಅಕ್ಟೋಬರ್ 30, 2019ರಂದು ಕಲಬುರಗಿ ವಿಮಾನ ನಿಲ್ದಾಣದಿಂದ ವಾಣಿಜ್ಯ ಸಂಚಾರ ನಡೆಸಲು AAIಗೆ ಏರೀಡ್ರೋಮ್ ಪರವಾನಗಿ ನೀಡಿದ್ದು, ಗ್ರೀನ್ ಸಿಗ್ನಲ್ ದೊರೆತಿತ್ತು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+