ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಂದೂವರೆ ತಿಂಗಳಲ್ಲಿ ಕಲಬುರಗಿಯಲ್ಲಿ ವಿಮಾನ ಹಾರಾಟ

By Gururaj
|
Google Oneindia Kannada News

ಕಲಬುರಗಿ, ಜೂನ್ 19 : 'ಮುಂದಿನ ಒಂದೂವರೆ ತಿಂಗಳಿನಲ್ಲಿ ಕಲಬುರಗಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಕಾರ್ಯನಿರ್ವಹಿಸುವಂತೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು' ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಸೂಚನೆ ನೀಡಿದ್ದಾರೆ.

ಮಂಗಳವಾರ ಶ್ರೀನಿವಾಸ ಸರಡಗಿ ಹತ್ತಿರದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು, 'ವಿಮಾನ ನಿಲ್ದಾಣದ 3.25 ಕಿ.ಮೀ. ರನ್‌ ವೇ ಕಾಮಗಾರಿ ಪೂರ್ಣಗೊಂಡಿದೆ' ಎಂದರು.

ಚಿತ್ರಗಳು : ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆಚಿತ್ರಗಳು : ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ

'ರನ್‌ ವೇಗೆ ಮಾರ್ಕಿಂಗ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ವಿಮಾನ ನಿಲ್ದಾಣದ ಎಟಿಸಿ ಕಟ್ಟಡ, ಫೈರ್ ಸ್ಟೇಶನ್ ಹಾಗೂ ಟರ್ಮಿನಲ್ ಬಿಲ್ಡಿಂಗ್ ನಿರ್ಮಾಣ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ರನ್‍ವೇ ಕಾಮಗಾರಿ ಹಾಗೂ ಕಾಂಪೌಂಡ್ ಗೋಡೆ ಸಂಪೂರ್ಣವಾಗಿ ನಿರ್ಮಿಸಿ' ಎಂದು ಸೂಚನೆ ನೀಡಿದರು.

kalaburagi

ಕಾಮಗಾರಿಗಳು ಬೇಗ ಪೂರ್ಣಗೊಂಡರೆ ರಾಜ್ಯ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಗಿಕವಾಗಿ ವಿಮಾನ ಹಾರಾಟ ನಡೆಸಲು ಅನುಮತಿ ಸಿಗಲಿದೆ. ಕಾಮಗಾರಿಯ ಮೊತ್ತವನ್ನು 175 ಕೋಟಿ ರೂ.ಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಹಾಸನದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಖಚಿತ: ಸಚಿವ ರೇವಣ್ಣಹಾಸನದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಖಚಿತ: ಸಚಿವ ರೇವಣ್ಣ

ಈಗಾಗಲೇ ವಿಮಾನ ನಿಲ್ದಾಣ ಕಾಮಗಾರಿಗೆ 92 ಕೋಟಿ ರೂ.ಗಳನ್ನು ಪಾವತಿಸಲಾಗಿದ್ದು, ಹಣಕಾಸಿನ ಯಾವುದೇ ತೊಂದರೆ ಇರುವುದಿಲ್ಲ. ಒಂದು ತಿಂಗಳ ಕಾಲಾವಧಿಯಲ್ಲಿ ವಿಮಾನ ನಿಲ್ದಾಣದ ಉಳಿದ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.

Kalaburagi airport

ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಜೀಜುದ್ದೀನ್ ಮುಂತಾದ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

English summary
The decades old dream of the residents of Kalaburagi is becoming a reality soon. Kalaburagi Deputy commissioner R.Venkatesh Kumar said that, Kalaburagi airport will be ready to service in one and half months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X