ಏ. 16ರಿಂದ ಬೆಂಗಳೂರು-ಕಲಬುರಗಿ ವಿಮಾನ ಸೇವೆ, ವೇಳಾಪಟ್ಟಿ

ಕಲಬುರಗಿ, ಏಪ್ರಿಲ್ 13: ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಗರವಾದ ಕಲಬುರಗಿಗೆ ಹೆಚ್ಚಿನ ವಿಮಾನಗಳು ಬೇಕು ಎಂಬ ಬೇಡಿಕೆ ಇತ್ತು. ಅದರಲ್ಲೂ ಬೆಂಗಳೂರು-ಕಲಬುರಗಿ ನಡುವೆ ವಿಮಾನ ಬೇಕು ಎಂದು ಬೇಡಿಕೆ ಇಡಲಾಗಿತ್ತು. ಆದರೆ ಈ ಕುರಿತು ಕೇಂದ್ರ ಸರ್ಕಾರ ಗಮನ ಹರಿಸಿಲ್ಲ ಎಂದು ಆರೋಪಿಸಲಾಗಿತ್ತು. ಈಗ ಬೆಂಗಳೂರು-ಕಲಬುರಗಿ ನಡುವೆ ಏಪ್ರಿಲ್ 16ರಿಂದ ವಿಮಾನ ಸೇವೆ ಆರಂಭವಾಗಲಿದೆ.

ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಲೋಕಸಭೆಯಲ್ಲಿಯೂ ಬೆಂಗಳೂರು-ಕಲಬುರಗಿ ವಿಮಾನ ಸೇವೆ ಕುರಿತು ವಿಷಯ ಪ್ರಸ್ತಾಪಿಸಿದ್ದರು. ಈಗ ಕಲಬುರಗಿ-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸಲು ಪ್ರತಿನಿತ್ಯದ ವಿಮಾನ ಸಂಚಾರ ಆರಂಭವಾಗಲಿದೆ, ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

Kalaburagi Bangalore Flight From April 16 Schedule

ವಿಮಾನದ ವೇಳಾಪಟ್ಟಿ: ಸಂಸದ ರಾಧಾಕೃಷ್ಣ ದೊಡ್ಡಮನಿ ಕಲಬುರಗಿ-ಬೆಂಗಳೂರು ವಿಮಾನ ಸೇವೆ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈಗ ವಿಮಾನ ಸೇವೆ ಆರಂಭಿಸಲು ಒಪ್ಪಿಗೆಯನ್ನು ನೀಡಲಾಗಿದೆ.

ಸ್ಟಾರ್ ಏರ್ ಸಂಸ್ಥೆ ಏಪ್ರಿಲ್ 16ರಿಂದ ಕಲಬುರಗಿ-ಬೆಂಗಳೂರು ನಡುವೆ ಪ್ರತಿನಿತ್ಯದ ವಿಮಾನ ಸಂಚಾರವನ್ನು ಆರಂಭಿಸಲಿದೆ. ಇದರಿಂದಾಗಿ ಕಲಬುರಗಿ ಮತ್ತು ಸುತ್ತಮುತ್ತಲ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.

ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಶರಣು ಪಪ್ಪಾ ಮತ್ತು ಗೌರವ ಕಾರ್ಯದರ್ಶಿ ಶಿವರಾಜ್ ವಿ. ಇಂಗನಶೆಟ್ಟಿ ಮಾತನಾಡಿ, ಐದು ತಿಂಗಳ ಬಳಿಕ ಕಲಬುರಗಿ- ಬೆಂಗಳೂರು ನಡುವೆ ವಿಮಾನ ಸೇವೆ ಆರಂಭವಾಗಲಿದೆ. ನಿತ್ಯ ಈ ವಿಮಾನ ಸಂಚಾರ ನಡೆಸಲಿದ್ದು, ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಸ್ಟಾರ್ ಏರ್ ವಿಮಾನಯಾನ ಸಂಸ್ಥೆ ಈಗಾಗಲೇ ಮುಂಗಡ ಟಿಕೆಟ್‌ಗೆ ಚಾಲನೆ ನೀಡಿದೆ. ಬೆಂಗಳೂರು-ಕಲಬುರಗಿ ಹಗಲು ವಿಮಾನದಲ್ಲಿ ಸಂಚಾರ ನಡೆಸುವವರು ವೆಬ್‌ಸೈಟ್‌ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದೆ.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಕಲಬುರಗಿ ಸೇರಿದಂತೆ ರಾಜ್ಯದ 2ನೇ ಹಂತದ 6 ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಿದ್ದರು. ಈ ಸಭೆಯಲ್ಲಿ ಇಂಡಿಗೋ, ಸ್ಟಾರ್ ಏರ್, ಏರ್ ಇಂಡಿಯಾ, ಆಕಾಶ್, ಅಲೈಯನ್ಸ್ ಏರ್ ವೇಸ್, ಸ್ಪೈಸ್ ಜೆಟ್ ಸೇರಿದಂತೆ ಎಲ್ಲ ಪ್ರಮುಖ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಕಲಬುರಗಿ, ಮೈಸೂರು, ಬೀದರ್, ಹುಬ್ಬಳ್ಳಿ, ಬೆಳಗಾವಿ, ವಿದ್ಯಾನಗರ (ಜಿಂದಾಲ್ ಟೌನ್ ಶಿಪ್) ಮತ್ತು ಉದ್ಘಾಟನೆಗೆ ಸಿದ್ಧವಾಗಿರುವ ವಿಜಯಪುರ ವಿಮಾನ ನಿಲ್ದಾಣಗಳಿಂದ ಕರ್ನಾಟಕದ ವಿವಿಧ ನಿಲ್ದಾಣಗಳು ಹಾಗೂ ಇತರ ರಾಜ್ಯಗಳಿಗೆ ವಿಮಾನಯಾನ‌ ಸಂಪರ್ಕ ಕಲ್ಪಿಸುವ ಕುರಿತು ಚರ್ಚೆ ನಡೆಸಲಾಗಿತ್ತು.

ಈ ಸಭೆಯಲ್ಲಿ ಕಲಬುರಗಿ ವಿಮಾನ ನಿಲ್ದಾಣದ ಕುರಿತು ಚರ್ಚೆ ನಡೆದಿತ್ತು. ವಿಮಾನ ಸಂಚಾರಕ್ಕೆ ಕಲಬುರಗಿ ಹೆಚ್ಚು ಲಾಭದಾಯಕ ಮಾರ್ಗವಾಗಿದ್ದರೂ, ಅಲ್ಲಿಗೆ ಬೆಂಗಳೂರಿನಿಂದ ವಾರಕ್ಕೆ ಕೇವಲ ಮೂರು ದಿನ ವಿಮಾನ ಸಂಚಾರ ಇದೆ. ಈ ಮಾರ್ಗದಲ್ಲಿ ವಿಮಾನ ಸಂಚಾರವನ್ನು ಮತ್ತಷ್ಟು ಹೆಚ್ಚಿಸಬೇಕು. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರೆ ನಗರ ಹಾಗೂ ಬೇರೆ ರಾಜ್ಯಗಳ ಪ್ರಮುಖ ನಗರಗಳಿಗೂ ಸಂಪರ್ಕ ಕಲ್ಪಿಸಬೇಕು ಎನ್ನುವ ಬೇಡಿಕೆಯ ಕುರಿತು ಚರ್ಚಿಸಲಾಗಿತ್ತು.

ಮೈಸೂರು, ಕಲಬುರಗಿ, ಬೀದರ್, ವಿದ್ಯಾ ನಗರ ವಿಮಾನ ನಿಲ್ದಾಣಗಳ ಉಪಯೋಗ ಗರಿಷ್ಠ ಮಟ್ಟದಲ್ಲಿ ನಡೆಯುತ್ತಿಲ್ಲ. ಕಲಬುರಗಿ-ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ವಾರಕ್ಕೆ 3 ದಿನ ಮಾತ್ರ ವಿಮಾನ ಹಾರಾಡುತ್ತಿದೆ. ಸ್ಟಾರ್ ಮತ್ತು ಅಲೈಯನ್ಸ್ ವಿಮಾನಯಾನ ಸಂಸ್ಥೆಗಳು ಮೂರು ವರ್ಷಗಳಿಂದ ಸಂಚಾರ ನಿಲ್ಲಿಸಿವೆ. ಕಲಬುರಗಿ ಪ್ರವಾಸೋದ್ಯಮ ಕೇಂದ್ರವಾಗಿದೆ. ಇಲ್ಲಿಂದ ಪುಣೆ, ತಿರುಪತಿ, ಚೆನ್ನೈ, ಮುಂಬೈ ಹೀಗೆ ಹಲವು ಭಾಗಗಳಿಗೆ ವಿಮಾನ ಸಂಚಾರ ಆರಂಭಿಸಿದರೆ ಖಂಡಿತವಾಗಿಯೂ ಲಾಭ ತಂದುಕೊಡಲಿದೆ. ಇಂತಹ ಮಾರ್ಗಗಳಲ್ಲಿ ಸಂಸ್ಥೆಗಳು ಪ್ರಾಯೋಗಿಕ ಸೇವೆ ಕೈಗೊಂಡು ಪರೀಕ್ಷಿಸಬಹುದು ಎಂದು ಸಚಿವರು ಸಭೆಯಲ್ಲಿ ವಿವರಿಸಿದ್ದರು.

ಈ ಮೊದಲು ಸ್ಟಾರ್ ಏರ್ ಬೆಂಗಳೂರು-ಕಲಬುರಗಿ ನಡುವೆ ವಾರದಲ್ಲಿ 4 ದಿನ ವಿಮಾನ ಸೇವೆಯನ್ನು ನೀಡುತ್ತಿತ್ತು. ಬಳಿಕ ಒಂದು ದಿನದ ಸೇವೆಯನ್ನು ರದ್ದುಗೊಳಿಸಿತ್ತು. ಆದ್ದರಿಂದ ಭಾನುವಾರ, ಸೋಮವಾರ ಮತ್ತು ಮಂಗಳವಾರ ಮಾತ್ರ ವಿಮಾನ ಹಾರಾಟ ನಡೆಸುತ್ತಿತ್ತು.

ಅಂಕಿ ಸಂಖ್ಯೆಗಳ ಮಾಹಿತಿಯಂತೆ 2021ರಲ್ಲಿ ಕಲಬುರಗಿ ವಿಮಾನ ನಿಲ್ದಾಣದಿಂದ ಒಟ್ಟು 2,157 ವಿಮಾನಗಳು ಕಾರ್ಯನಿರ್ವಹಿಸುತ್ತಿದ್ದವು. ಆದರೆ 2024ರಲ್ಲಿ ಅದು 1,177ಕ್ಕೆ ಇಳಿಮುಖಗೊಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+