ಕನ್ನಡ ಸಾಹಿತ್ಯ ಸಮ್ಮೇಳನ; ಕಲಬುರಗಿ ಸ್ವಚ್ಛತೆಗೆ ಚಾಲನೆ
ಕಲಬುರಗಿ, ಜನವರಿ 24: ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5, 6 ಮತ್ತು 7 ರಂದು ನಡೆಯುವ 85 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಕಲಬುರಗಿ ನಗರವನ್ನು ಸಿಂಗರಿಸಲಾಗುತ್ತಿದೆ.
ಕಲಬುರಗಿ ನಗರದ ಸರ್ಕಾರಿ ಗೋಡೆಗಳಿಗೆ ಬಣ್ಣ ಬಳಿದು ಸೌಂದರ್ಯಗೊಳಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.
ಕಲಬುರಗಿ ನಗರದ ಕನ್ನಡ ಭವನದಲ್ಲಿ 85 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಲಂಕಾರ ಸಮಿತಿಯಿಂದ ಹಮ್ಮಿಕೊಂಡಿದ್ದ ನಗರ ಸೌಂದರ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗುಲ್ಬರ್ಗ ವಿಶ್ವವಿದ್ಯಾಲಯ, ಕೇಂದ್ರ ಬಸ್ ನಿಲ್ದಾಣದಲ್ಲಿರುವ ಸರ್ಕಾರಿ ಕಟ್ಟಡಗಳ ಗೋಡೆ ಮೇಲೆ ಸಮ್ಮೇಳನದ ಲಾಂಛನ ಹಾಗೂ ವಿವಿಧ ಆಕರ್ಷಕ ಚಿತ್ರಗಳನ್ನು ಬಿಡಿಸಲಾಗುವುದು ಎಂದು ತಿಳಿಸಿದರು.












Click it and Unblock the Notifications