ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನುಡಿದಂತೆ ನಡೆದ ಕುಮಾರಸ್ವಾಮಿ, ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಇಳಿಕೆ

|
Google Oneindia Kannada News

Recommended Video

ಪೆಟ್ರೋಲ್ ಬೆಲೆ 2 ರೂನಷ್ಟು ಇಳಿಕೆ ಮಾಡಿ ಘೋಷಿಸಿದ ಎಚ್ ಡಿ ಕುಮಾರಸ್ವಾಮಿ | Oneindia Kannada

ಕಲಬುರಗಿ, ಸೆಪ್ಟೆಂಬರ್ 17: ಸತತವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿನ ನಾಡಿನ ಜನತೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಂತಸದ ಸುದ್ದಿ ಕೊಟ್ಟಿದ್ದಾರೆ. ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 2 ರು ಇಳಿಸಲಾಗಿದೆ ಎಂದು ಕುಮಾರಸ್ವಾಮಿ ಘೋಷಿಸಿದರು.

ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿರುವ ಕುಮಾರಸ್ವಾಮಿ ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿದ್ದು, ಅಧಿಕೃತ ಆದೇಶ ಹೊರಬೀಳಬೇಕಿದೆ.

ಕುಮಾರಸ್ವಾಮಿ ಅವರು ಪೆಟ್ರೋಲ್ ಬೆಲೆ ಎಷ್ಟು ಇಳಿಸ್ಬಹುದು?ಕುಮಾರಸ್ವಾಮಿ ಅವರು ಪೆಟ್ರೋಲ್ ಬೆಲೆ ಎಷ್ಟು ಇಳಿಸ್ಬಹುದು?

ಆಂಧ್ರ ಪ್ರದೇಶ ಹಾಗೂ ರಾಜಸ್ಥಾನ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡಿದ ಬೆನ್ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ತಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನ ಇಳಿಕೆ ಮಾಡಿದ್ದರು.

ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಡೀಸೆಲ್ ಹಾಗೂ ಪೆಟ್ರೋಲ್ ಪ್ರತಿ ಲೀಟರ್ ಗೆ 2 ರೂಪಾಯಿ ಇಳಿಸಿದ್ದರು.

ರಾಜಸ್ಥಾನದ ಮುಖ್ಯಮಂತ್ರಿ ವಸುಂದರಾ ರಾಜೆ ಸಹ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 2.5 ರೂ.ಗೆ ಇಳಿಕೆ ಮಾಡಿದ್ದರು.

ಎಷ್ಟು ಇಳಿಸಲು ಸಾಧ್ಯವಿತ್ತು?

ಎಷ್ಟು ಇಳಿಸಲು ಸಾಧ್ಯವಿತ್ತು?

ಕೇಂದ್ರ ಸರ್ಕಾರ ಮಾತ್ರ ತನ್ನ ಪಾಲಿನ ವ್ಯಾಟ್ ತಗ್ಗಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು. ರಾಜ್ಯ ಸರ್ಕಾರಗಳು ತಮ್ಮ ಜನರ ಕಷ್ಟ ನಷ್ಟಗಳನ್ನು ಗಮನಿಸಿ ಹೆಚ್ಚುವರಿ ತೆರಿಗೆಗಳನ್ನು ಮನ್ನಾ ಮಾಡುವ ಅಧಿಕಾರ ಚಲಾಯಿಸಬಹುದು.

ಕುಮಾರಸ್ವಾಮಿ ಅವರು ಹೆಚ್ಚೆಂದರೆ ಶೇ 4 ರಷ್ಟು ಅಥವಾ 2 ರು ನಷ್ಟು ಬೆಲೆ ಇಳಿಸಬಹುದಾಗಿದೆ

Array

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಗಿಫ್ಟ್

ಕರ್ನಾಟಕದ ಏಕೀಕರಣಕ್ಕೆ ಹಾಗೂ ಈ ಭಾಗದ ವಿಮೋಚನೆಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಹಾಗೂ ಅನೇಕ ರೀತಿಯ ತ್ಯಾಗ ಬಲಿದಾನಗಳನ್ನು ಮಾಡಿದ ಸ್ವಾಮಿ ರಮಾನಂದ ತೀರ್ಥ, ಅಪ್ಪಾರಾವ್ ಪಾಟೀಲ್, ಚಂದ್ರಶೇಖರ ಪಾಟೀಲ್ ರಂತಹ ಪ್ರತಿಯೊಬ್ಬರನ್ನೂ ಈ ಸಂದರ್ಭದಲ್ಲಿ ನೆನೆಯುತ್ತೇನೆ ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

ಪೆಟ್ರೋಲ್ ದರ ನಿರ್ಧಾರ ಹೇಗೆ? ಯಾರಿಗೆಷ್ಟು ಪಾಲು? ಯಾವ ದೇಶದಲ್ಲೆಷ್ಟು?ಪೆಟ್ರೋಲ್ ದರ ನಿರ್ಧಾರ ಹೇಗೆ? ಯಾರಿಗೆಷ್ಟು ಪಾಲು? ಯಾವ ದೇಶದಲ್ಲೆಷ್ಟು?

ರಾಜ್ಯ ಸರ್ಕಾರಗಳು ವ್ಯಾಟ್, ಸೆಸ್ ಸೇರಿಸಬಹುದು

ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಮುಖ ಮೂರು ತೈಲ ಕಂಪನಿಗಳು ಪ್ರತಿದಿನದಂದು ಇಂಧನ ಬೆಲೆ ಪರಿಷ್ಕರಣೆ ಮಾಡಿದ ಬಳಿಕ ಆಯಾ ರಾಜ್ಯಗಳು ತಮ್ಮ ಆರ್ಥಿಕ ಮಾರ್ಗದರ್ಶನಕ್ಕೆ ಅನುಗುಣವಾಗಿ ವ್ಯಾಟ್, ಸೆಸ್ ಸೇರಿಸಬಹುದು. ಬೇರೆ ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿಮೆಯೇ ಇದೆ, ಆದರೂ ಸಾಧ್ಯವಾದಷ್ಟರ ಮಟ್ಟಿಗೆ ತೆರಿಗೆ ಇಳಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.

ಹೆಚ್ಚುವರಿ ತೆರಿಗೆಯನ್ನು ಇಳಿಸಬಹುದಾಗಿದೆ

ಹೆಚ್ಚುವರಿ ತೆರಿಗೆಯನ್ನು ಇಳಿಸಬಹುದಾಗಿದೆ

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ಸಿನ ವೀರಭದ್ರಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಶೇ.2ರಷ್ಟು ತೆರಿಗೆಯನ್ನು ಕಡಿತ ಗೊಳಿಸಲಾಗಿದೆ ಎಂದಿದ್ದಾರೆ. ರಾಜಸ್ಥಾನ ಹಾಗೂ ಆಂಧ್ರಪ್ರದೇಶದಲ್ಲಿ ತೆರಿಗೆ ಇಳಿಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದ ಎಚ್‌ಡಿ ಕುಮಾರಸ್ವಾಮಿ ಅವರು ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ತೆರಿಗೆಯನ್ನು 1.14 ರೂ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 1.12ರೂ.ನಷ್ಟು ಏರಿಕೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗ ಹೆಚ್ಚುವರಿ ತೆರಿಗೆಯನ್ನು ಇಳಿಸಬಹುದಾಗಿದೆ.

ಪೆಟ್ರೋಲ್, ಡಾಲರ್, ಪರಿಸರ ಎಲ್ಲಕ್ಕೂ ಇಥೆನಾಲ್ ಪರಿಹಾರ: ಏನೀ ವಿಚಾರ?ಪೆಟ್ರೋಲ್, ಡಾಲರ್, ಪರಿಸರ ಎಲ್ಲಕ್ಕೂ ಇಥೆನಾಲ್ ಪರಿಹಾರ: ಏನೀ ವಿಚಾರ?

English summary
Chief Minister Kumaraswamy in Kalauragi today announced slash in price of Petrol by Rs 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X