ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

|
Google Oneindia Kannada News

ಕಲಬುರಗಿ, ಜುಲೈ 10: ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ತಮ್ಮ ಬೇಡಿಕೆಯನ್ನು ಈಡೇರಿಸಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

Recommended Video

ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಕಾಮೇಗೌಡರು | KameGowda | Oneindia Kannada

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಚ್‌ಓ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುತ್ತಿದೆ. ಮಾಸಿಕ 12 ಸಾವಿರ ಗೌರವಧನ, ಕೋವಿಡ್ ಸುರಕ್ಷಾ ಸಾಮಾಗ್ರಿಗಳ ವಿತರಿಸಲು ಆಗ್ರಹಿಸಲಾಗಿದೆ.

ಕೊಪ್ಪಳದಲ್ಲಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟ ಅವಧಿ ಹೋರಾಟಕೊಪ್ಪಳದಲ್ಲಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟ ಅವಧಿ ಹೋರಾಟ

ಬೇಡಿಕೆ ಈಡೇರುವವರೆಗೆ ಇಂದಿನಿಂದಲೇ ಕೆಲಸ ಸ್ಥಗೀತಗೊಳಿಸಲು ಆಶಾ ಕಾರ್ಯಕರ್ತೆಯರ ನಿರ್ಧಾರ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ 2 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರಿದ್ದಾರೆ. ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ AIUTUC ಸಂಘಟನೆ ಸಾಥ್ ನೀಡಿದೆ.

Kalaburagi District Asha Workers Protesting Against Government To Fulfill Their Demands

ಈಗಾಗಲೇ 10ಕ್ಕೂ ಹೆಚ್ಚು ಬಾರಿ ಮನವಿಗೆ ಸರ್ಕಾರ ಸ್ಪಂದಿಸಿಲ್ಲ ಎನ್ನುವುದು ಆಶಾ ಕಾರ್ಯಕರ್ತೆಯರ ಆರೋಪವಾಗಿದೆ. ಜನವರಿ ತಿಂಗಳಿನಲ್ಲಿ ಈ ಬಗ್ಗೆ ಬೆಂಗಳೂರಿನಲ್ಲಿ ದೊಡ್ಡ ಪ್ರತಿಭಟನೆ ಮಾಡಲಾಗಿತ್ತು.

ಕೊರೊನಾ ಸಮಯದಲ್ಲಿ ತಾವು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದು, ಸರ್ಕಾರ ತಮ್ಮ ಕಡೆ ಗಮನ ಹರಿಸಿ, ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

English summary
Kalaburagi District Asha Workers Protesting Against Government To Fulfill Their Demands.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X