• search

ಅಕ್ಟೋಬರ್‌ನಲ್ಲಿ ಕಲಬುರಗಿ ಬಯಲು ಶೌಚ ಮುಕ್ತ ಜಿಲ್ಲೆ

By Gururaj
Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಕಲಬುರಗಿ, ಜೂನ್ 26 : ಈ ವರ್ಷದ ಗಾಂಧಿ ಜಯಂತಿಯಂದು ಕಲಬುರಗಿ ಜಿಲ್ಲೆಯನ್ನು ಬಯಲು ಶೌಚಮುಕ್ತ ಜಿಲ್ಲೆಯಾಗಿ ಘೋಷಣೆ ಮಾಡಲು ಪ್ರಯತ್ನ ನಡೆದಿದೆ. ಜಿಲ್ಲಾ ಪಂಚಾಯಿತಿಯೊಂದಿಗೆ ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮನವಿ ಮಾಡಿದ್ದಾರೆ.

  2012ರಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕೈಗೊಂಡಿರುವ ಸಮೀಕ್ಷೆಯ ಪ್ರಕಾರ 240384 ಕುಟುಂಬಗಳಿದ್ದು, ಪ್ರತಿ ಕುಟುಂಬಕ್ಕೆ ಶೌಚಾಲಯ ನಿರ್ಮಿಸುವ ಗುರಿ ಹೊಂದಲಾಗಿತ್ತು. ಈವರೆಗೆ ಒಟ್ಟು 138737 ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇನ್ನುಳಿದ 101647 ಶೌಚಾಲಯಗಳನ್ನು ನವೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ.

  ಅ. 2ರೊಳಗೆ ಉತ್ತರ ಕರ್ನಾಟಕದ ಜಿಲ್ಲೆಗಳು ಬಯಲು ಶೌಚ ಮುಕ್ತ

  ಶೌಚಾಲಯ ನಿರ್ಮಾಣದಲ್ಲಿ ಚುರುಕು ತರಲು ಪ್ರತಿ 7 ರಿಂದ 8 ಗ್ರಾಮ ಪಂಚಾಯಿತಿಗಳಿಗೆ ಓರ್ವ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿ ಎಂದು ನೇಮಿಸಲಾಗಿದೆ. ಈ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಉಳಿದ ಶೌಚಾಲಯಗಳ ನಿರ್ಮಾಣಕ್ಕೆ ಪ್ರೇರೇಪಿಸುವ ಕಾರ್ಯ ಮಾಡುವಂತೆ ನಿರ್ದೇಶನ ನೀಡಲಾಗಿದೆ.

  Kalaburagi

  ಪ್ರಸಕ್ತ ವರ್ಷದಲ್ಲಿ 101647 ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 2306 ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಈವರೆಗೆ 34 ಗ್ರಾಮ ಪಂಚಾಯಿತಿ ವ್ಯಾಪ್ತಿಯ 209 ಹಳ್ಳಿಗಳನ್ನು ಬಯಲು ಶೌಚಮುಕ್ತ ಹಳ್ಳಿಗಳೆಂದು ಘೋಷಿಸಲಾಗಿದೆ.

  ಟಾಯ್ಲೆಟ್ ಮುಂದೆ ಸೆಲ್ಫಿ: ಸ್ವಚ್ಛಭಾರತಕ್ಕೆ ಹೊಸ ಐಡಿಯಾ!

  ಜುಲೈ ಅಂತ್ಯದೊಳಗಾಗಿ ಇನ್ನು 374 ಗ್ರಾಮಗಳನ್ನು ಬಯಲು ಶೌಚಮುಕ್ತ ಗ್ರಾಮಗಳೆಂದು ಘೋಷಿಸಲಾಗುವುದು. ಜಿಲ್ಲೆಯ ಕಲಬುರಗಿ, ಅಫಜಲಪುರ ಮತ್ತು ಸೇಡಂ ತಾಲೂಕುಗಳಲ್ಲಿ ತಲಾ ಕೇವಲ 10,000 ಕುಟುಂಬಗಳಿಗೆ ಶೌಚಾಲಯ ನಿರ್ಮಿಸಬೇಕಾಗಿದೆ. ಆದರೆ, ಆಳಂದ ತಾಲೂಕಿನಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ತುಂಬಾ ಮಂದಗತಿಯಲ್ಲಿದ್ದು, ಶೌಚಾಲಯವಿಲ್ಲದ ಕುಟುಂಬಗಳು ಹೆಚ್ಚಿವೆ.

  ಕಳೆದ ವರ್ಷ ರಾಜ್ಯದಲ್ಲೇ ಮಾದರಿಯಾದ ಕೂಸು ಮತ್ತು ಸಿರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅತೀ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಲಾಗಿತ್ತು. ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳು, ಅಂಗಡಿ ಮಾಲೀಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಗರ್ಭಿಣಿಯರು ಹಾಗೂ ಶಾಲಾ ಶಿಕ್ಷಕರ ಸಹಭಾಗಿತ್ವದಲ್ಲಿ ಈ ವರ್ಷ ಶೌಚಾಲಯ ನಿರ್ಮಿಸಲಾಗುತ್ತಿದೆ.

  ಮುಂದಿನ 15 ದಿನದೊಳಗಾಗಿ ಪ್ರತಿ ಗ್ರಾಮದಲ್ಲಿ ಕನಿಷ್ಠ 50 ಶೌಚಾಲಯಗಳನ್ನು ನಿರ್ಮಿಸುವ ಗುರಿ ನೀಡಲಾಗಿದೆ. ಜಿಲ್ಲೆಯ 248 ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಕ್ಲಿಷ್ಟಕರವಾಗಿದೆ. ಈ ಗ್ರಾಮಗಳಿಗೆ ಹೆಚ್ಚಿನ ಒತ್ತು ನೀಡಿ ಆಗಷ್ಟ್ 15ರೊಳಗಾಗಿ ಶೌಚಾಲಯ ನಿರ್ಮಾಣ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Kalaburagi district will become open defecation free district in October 2018. 101647 toilet yet to construct in the various taluks of the Kalaburagi district.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more