• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಲಬುರಗಿಯಲ್ಲಿ ವೈದ್ಯರು ಗುಣಮುಖರಾದ್ರು, ಈಗ ಪತ್ನಿಗೆ ಕೊರೊನಾ

|

ಕಲಬುರಗಿ, ಏಪ್ರಿಲ್ 1: ಕಲಬುರಗಿಯಲ್ಲಿ ವೈದ್ಯರು ಕೊರೊನಾದಿಂದ ಗುಣಮುಖರಾಗುತ್ತಿದ್ದು, ಇದೀಗ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕಲಬುರಗಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗೆ ಮೊದಲು ಚಿಕಿತ್ಸೆ ನೀಡಿದ್ದ ವೈದ್ಯರು ಇವರಾಗಿದ್ದರು. ಕೆಲವು ದಿನಗಳ ಬಳಿಕ ವೈದ್ಯರಿಗೂ ಕೊರೊನಾ ತಗುಲಿತ್ತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದು, ಪತ್ನಿಗೂ ಕೊರೊನಾ ಸೋಂಕು ತಗುಲಿದೆ.

ಕೊರೊನಾ ವಿರುದ್ಧ ಹೋರಾಡಿ ಗೆದ್ದ ಕಲಬುರಗಿ ವೈದ್ಯ

ಜಿಲ್ಲಾಡಳಿತ ಅಧಿಕೃತ ಪ್ರಕಟನೆ ಹೊರಡಿಸಿದೆ. ಆರಂಭದಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯರಲ್ಲಿ ಕೊರೊನಾ ಲಕ್ಷಣಗಳ ಕಂಡು ಬಂದ ಹಿನ್ನೆಲೆಯಲ್ಲಿ ಐಸೋಲೇಷನ್ ನಲ್ಲಿರಿಸಲಾಗಿತ್ತು. ಮೊದಲ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು.

ಹೀಗಾಗಿ 14 ದಿನಗಳ ಕಾಲ ಕಲಬುರಗಿಯ ಇಎಸ್‍ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ವೈದ್ಯನ ಕಫ ಹಾಗೂ ರಕ್ತದ ಮಾದರಿಯನ್ನು ಎರಡನೇ ಬಾರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಎರಡನೇ ವರದಿಯಲ್ಲಿ ಕೊರೊನಾ ನೆಗಟಿವ್ ಎಂದು ಬಂದಿದೆ.

ಇತ್ತ ವೈದ್ಯರ ಪತ್ನಿಯನ್ನು 14 ದಿನಗಳಿಂದ ಹೋಮ್ ಕ್ವಾರಂಟೈನ್ ಮಾಡಿ, ಕಫ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಮಹಿಳೆಯ ವರದಿ ಪಾಸಿಟಿವ್ ಬಂದು ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಹಿಳೆಯನ್ನು ಕಲಬುರಗಿಯ ಇಎಸ್‍ಐ ಆಸ್ಪತ್ರೆಗೆ ಕಳುಹಿಸಲಾಗಿದೆ.

English summary
After Kalaburagi Doctor Report Come Corona Negative Now His Wife Report Come positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X