ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ನಾಲ್ವರು ನಿಧನ

ಕಲಬುರಗಿ, ಏಪ್ರಿಲ್ 14: ಕರ್ನಾಟಕದಲ್ಲಿ ಪತ್ತೆಯಾದ ಒಟ್ಟು ಹೊಸ ಪ್ರಕರಣಗಳ ಪೈಕಿ ಅತಿ ಹೆಚ್ಚು ಸೋಂಕಿತ ಪ್ರಕರಣಗಳು ಬೆಂಗಳೂರಿನಲ್ಲೇ ಇದ್ದರೂ, ಇತರೆ ಜಿಲ್ಲೆಗಳಲ್ಲಿ ಸಾವು-ನೋವಿನ ಸಂಖ್ಯೆ ಹೆಚ್ಚಾಗುತ್ತಿವೆ.

ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ನಾಲ್ವರು ನಿಧನರಾಗಿದ್ದಾರೆ, ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 368 ಜನ ನಿಧನರಾಗಿದ್ದಾರೆ ಎಂದು ಅರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ.

ತೀವ್ರ ಉಸಿರಾಟ ತೊಂದರೆ ಸಮಸ್ಯೆಯಿಂದ‌ ಬಳಲುತ್ತಿದ್ದ ಅಫಜಲಪೂರ ತಾಲೂಕಿನ ಬಂದರವಾಡ ಗ್ರಾಮದ 70 ವರ್ಷದ ವೃದ್ಧ ಏಪ್ರಿಲ್6 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.10 ರಂದು ನಿಧನ ಹೊಂದಿದ್ದಾರೆ.

Kalaburagi: Four people died due to corona infection

ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ‌ ನಗರದ ಉಮರ ಕಾಲೋನಿಯ 60 ವರ್ಷದ ವೃದ್ಧ ಏ.7 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.9 ರಂದು ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ‌ ನಗರದ ಶಹಾಬಜಾರ ಪ್ರದೇಶದ 45 ವರ್ಷದ ಮಹಿಳೆ ಏ.9 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.10 ರಂದು ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಆಳಂದ ತಾಲೂಕಿನ ದರ್ಗಶಿರೂರ ಗ್ರಾಮದ 45 ವರ್ಷದ ಪುರುಷ ಏ.9 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.10 ರಂದು ನಿಧನ ಹೊಂದಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 38 ಜನರು ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 13,046ಕ್ಕೆ ಏರಿಕೆಯಾಗಿದೆ. 4364 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 9,96,367 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೂ 85,480 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ ಅಂಶ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+