Lok Sabha Election 2024 Result: ಸೋಲಿಲ್ಲದ ಸರದಾರನಿಗೆ ಜಯ- ಕಲಬುರಗಿಯಲ್ಲಿ ಕಾಂಗ್ರೆಸ್ ಗೆಲುವಿನ ಕಹಳೆ
ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯಲ್ಲಿ ಗೆಲುವಿನ ಧ್ವಜ ಹಾರಿಸಿದ್ದಾರೆ. ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಅಖಾಡಕ್ಕೆ ಕಾಂಗ್ರೆಸ್ ಇಳಿಸಿತ್ತು. ಕಾಂಗ್ರೆಸ್ ಭದ್ರಕೋಟೆಯಾದ ಕಲಬುರಗಿಯನ್ನು ಮತ್ತೆ ತನ್ನ ತೆಕ್ಕೆಗೆ ಪಡೆದಿದೆ.
ಅಲ್ಲದೆ ಮಲ್ಲಿಕಾರ್ಜುನ ಖರ್ಗೆ ಅವರು ತಮಗಿದ್ದ ಬಿರುದನ್ನು ವಾಪಸ್ ಪಡೆದುಕೊಂಡಿದ್ದಾರೆ. ಇಂದು ಈವರೆಗೆ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೊಡ್ಡಮನಿ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಹೌದು.. ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ 2,73,291 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ 2,59,677 ಮತಗಳನ್ನು ಪಡೆದಿದ್ದಾರೆ ಇನ್ನೂ ಪಕ್ಷೇತರ ಅಭ್ಯರ್ಥಿ ಹುಚ್ಚೇಶ್ವರ 3050 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿ ಇದ್ದಾರೆ. ಮತ ಎಣಿಕೆ ಕಾರ್ಯ ಮುಂದುವರೆದಿದ್ದು ಸಂಜೆಗೆ ಅಂತಿಮ ಫಲಿತಾಂಶ ಬಿಡುಗಡೆಯಾಗಲಿದೆ. ಆದರೆ ಮೇಲ್ನೋಟಕ್ಕೆ ಕಲಬುರಗಿಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ.
ಅಂದಹಾಗೆ ರಾಧಾಕೃಷ್ಣ ದೊಡ್ಡಮನಿ ಅವರಿಗೆ ರಾಜಕಾರಣವೇನೂ ಹೊಸದಲ್ಲ. ಈ ಹಿಂದೆ ಖರ್ಗೆ ಅವರ ರಾಜಕೀಯ ಬದುಕಿಗೆ ಬೆನ್ನೆಲುಬಾಗಿ ಪರದೆಯ ಹಿಂದೆ ನಿಂತು ತಂತ್ರಗಾರಿಕೆ ರೂಪಿಸಿದ್ದ ಅವರು ಇದೇ ಮೊದಲ ಬಾರಿ ನೇರವಾಗಿ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ಅಲ್ಲದೆ ಕ್ಷೇತ್ರದಲ್ಲಿ ಸಾಕಷ್ಟು ಪ್ರಚಾರ ಕೂಡ ಮಾಡಿದ್ದಾರೆ.
2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತ ಈ ಎಸ್‌ಸಿ-ಮೀಸಲಾತಿ ಸ್ಥಾನವನ್ನು ಗೆಲ್ಲಲು ಅವರು ತಮ್ಮ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಕಲಬುರಗಿ ಕ್ಷೇತ್ರ ಖರ್ಗೆ ಅವರ ಕರ್ಮ ಭೂಮಿಯಾಗಿದ್ದು 10 ಬಾರಿ ವಿಧಾನಸಭೆಗೆ ಮತ್ತು ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.
ಇನ್ನೂ ಬಿಜೆಪಿಯಿಂದ 2019ರ ಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಹಾಲಿ ಸಂಸದ ಉಮೆಶ್ ಜಾಧವ್ ಅವರನ್ನು ಗುಲ್ಬರ್ಗಾ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ಮತ್ತೆ ಕಣಕ್ಕಿಳಿಸಿದೆ. ಕ್ಷೇತ್ರ ಗೆಲ್ಲುವುದಕ್ಕಾಗಿ ಬಿಜೆಪಿ ತನ್ನೆಲ್ಲಾ ತಂತ್ರಗಳನ್ನು ಬಳಸಿ ಚುನಾವಣೆಯನ್ನು ದಾಟಿ ಬಂದಿದೆ. ಮಾರ್ಚ್ 16ರಿಂದ ಕರ್ನಾಟಕದಲ್ಲಿ ತನ್ನ ಪ್ರಚಾರ ಆರಂಭಿಸಿದ ಕೇಸರಿ ಪಕ್ಷ ಕಲಬುರಗಿಯಲ್ಲೂ ಅಭ್ಯರ್ಥಿಯೊಂದಿಗೆ ಸಾಕಷ್ಟು ಪ್ರಚಾರ ಮಾಡಿದೆ.












Click it and Unblock the Notifications