Get Updates
Get notified of breaking news, exclusive insights, and must-see stories!

kalaburagi Lok Sabha Election 2024: ಕಲಬುರಗಿ ಲೋಕಸಭಾ ಕ್ಷೇತ್ರ: ಸೋಲಿಲ್ಲದ ಸರದಾರ ಬಿರುದು ಯಾರಿಗೆ?

ಕಲ್ಯಾಣ ಕರ್ನಾಟಕ ಭಾಗದ ಗುಲ್ಬರ್ಗಾ ಮೀಸಲು ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶತಪ್ರಯತ್ನದ ಹಿನ್ನೆಲೆಯಲ್ಲಿ ಇಲ್ಲಿ ಬಿಜೆಪಿಯ ಡಾ ಉಮೇಶ್ ಜಾಧವ್ ಗೆಲಯವಿನ ನಗೆ ಬೀರಿದ್ದರು.

ಆದರೀಗ ಐದು ವರ್ಷ ಕಳೆದಿದೆ. ಮೊದಲ ಬಾರಿ ಸೋಲಿನ ರುಚಿ ನೋಡಿದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಈಗ ತಮ್ಮ ಅಳಿಯನ ಮೂಲಕ ಕ್ಷೇತ್ರವನ್ನು ಮತ್ತೆ ತಮ್ಮ ತೆಕ್ಕೆಗೆ ತರಲು ಪ್ರಯತ್ನ ನಡೆಸಿದ್ದಾರೆ.

kalaburagi lok sabha election 2024 results who will win

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾಗಿರುವುದರಿಂದ ಕಲಬುರಗಿ ಲೋಕಸಭಾ ಕ್ಷೇತ್ರ ಭಾರೀ ಮಹತ್ವ ಪಡೆದುಕೊಂಡಿದೆ. ಕಳೆದ ಬಾರಿ ಸೋಲು ಕಂಡಿದ್ದ ಕಾಂಗ್ರೆಸ್ ಈ ಬಾರಿ ಗೆಲ್ಲುವ ವಿಶ್ವಾಸ ಹೊಂದಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿ ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕಣಕ್ಕೆ ಇಳಿಸಿದ್ದಾರೆ. ಇನ್ನೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಾ. ಉಮೇಶ್ ಜಾಧವ್ ಅವರು ಎರಡನೇ ಬಾರಿಗೆ ಸ್ಪರ್ಧಿಸಿದ್ದಾರೆ.

ಕಲಬುರಗಿ ವಿಧಾನಸಭಾ ಕ್ಷೇತ್ರಗಳು:

ಕಲಬುರಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಗುಲಬರ್ಗಾ ದಕ್ಷಿಣ, ಗುಲಬರ್ಗಾ ಉತ್ತರ, ಗುಲಬರ್ಗಾ ಗ್ರಾಮೀಣ, ಸೇಡಂ ಮತ್ತು ಯಾದಗಿರಿ ಜಿಲ್ಲೆಯ ಗುರುಮಠಕಲ್ ವಿಧಾನ ಕ್ಷೇತ್ರಗಳು ಬರಲಿವೆ.

ಆದರೆ ಜಿಲ್ಲೆಯ ಆಳಂದ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳು ಬೀದರ್ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತವೆ. ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಕಾಂಗ್ರೆಸ್ ಶಾಸಕರೇ ಪ್ರತಿನಿಧಿಸುತ್ತಿದ್ದಾರೆ. ತಲಾ ಒಂದೊಂದು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿದ್ದಾರೆ.

ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ

ಅಂದಹಾಗೆ ರಾಧಾಕೃಷ್ಣ ದೊಡ್ಡಮನಿ ಅವರಿಗೆ ರಾಜಕಾರಣವೇನೂ ಹೊಸದಲ್ಲ. ಈ ಹಿಂದೆ ಖರ್ಗೆ ಅವರ ರಾಜಕೀಯ ಬದುಕಿಗೆ ಬೆನ್ನೆಲುಬಾಗಿ ಪರದೆಯ ಹಿಂದೆ ನಿಂತು ತಂತ್ರಗಾರಿಕೆ ರೂಪಿಸಿದ್ದ ಅವರು ಇದೇ ಮೊದಲ ಬಾರಿ ನೇರವಾಗಿ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ಅಲ್ಲದೆ ಕ್ಷೇತ್ರದಲ್ಲಿ ಸಾಕಷ್ಟು ಪ್ರಚಾರ ಕೂಡ ಮಾಡಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತ ಈ ಎಸ್‌ಸಿ-ಮೀಸಲಾತಿ ಸ್ಥಾನವನ್ನು ಗೆಲ್ಲಲು ಅವರು ತಮ್ಮ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಕಲಬುರಗಿ ಕ್ಷೇತ್ರ ಖರ್ಗೆ ಅವರ ಕರ್ಮ ಭೂಮಿಯಾಗಿದ್ದು 10 ಬಾರಿ ವಿಧಾನಸಭೆಗೆ ಮತ್ತು ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

kalaburagi lok sabha election 2024 results who will win

ಸೋಲಿಲ್ಲದ ಸರದಾರನನ್ನು ಸೋಲಿಸಿದ ಉಮೆಶ್ ಮತ್ತೆ ಗೆಲ್ಲಲು ಶತ ಪ್ರಯತ್ನ

ಇನ್ನೂ ಬಿಜೆಪಿಯಿಂದ 2019ರ ಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಹಾಲಿ ಸಂಸದ ಉಮೆಶ್ ಜಾಧವ್ ಅವರನ್ನು ಗುಲ್ಬರ್ಗಾ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ಮತ್ತೆ ಕಣಕ್ಕಿಳಿಸಿದೆ. ಕ್ಷೇತ್ರ ಗೆಲ್ಲುವುದಕ್ಕಾಗಿ ಬಿಜೆಪಿ ತನ್ನೆಲ್ಲಾ ತಂತ್ರಗಳನ್ನು ಬಳಸಿ ಚುನಾವಣೆಯನ್ನು ದಾಟಿ ಬಂದಿದೆ.

ಮಾರ್ಚ್ 16ರಿಂದ ಕರ್ನಾಟಕದಲ್ಲಿ ತನ್ನ ಪ್ರಚಾರ ಆರಂಭಿಸಿದ ಕೇಸರಿ ಪಕ್ಷ ಕಲಬುರಗಿಯಲ್ಲೂ ಅಭ್ಯರ್ಥಿಯೊಂದಿಗೆ ಸಾಕಷ್ಟು ಪ್ರಚಾರ ಮಾಡಿದೆ.

ಪ್ರಧಾನಿ ಮೋದಿ ಕಳೆದ ವರ್ಷ ಜಿಲ್ಲೆಯಲ್ಲಿ ಮೆಗಾ ಜವಳಿ ಪಾರ್ಕ್‌ ಮತ್ತು ಇತ್ತೀಚೆಗೆ ಬೆಂಗಳೂರು ಮತ್ತು ಕಲಬುರಗಿ ನಡುವೆ ಎರಡು ನೇರ ರೈಲುಗಳನ್ನು ಪ್ರಾರಂಭಿಸಿದರು. ಮೋದಿ ಅವರ ಕಾರ್ಯಗಳಿಗಾಗಿ ಮತ ಚಲಾಯಿಸುವಂತೆ ಜಾಧವ್ ಕೂಡ ಸಾಕಷ್ಟು ಪ್ರಚಾರ ಮಾಡಿದ್ದಾರೆ. ಮತದಾರರು ಕೈಹಿಡಿಯುವ ನಿರೀಕ್ಷೆಯಲ್ಲಿ ಇದ್ದಾರೆ.

ಕಲಬುರಗಿ ಕ್ಷೇತ್ರ ಪರಿಚಯ

ಕಲಬುರಗಿ ಎಂದು ಹೆಸರು ಹೊಂದಿರುವ ಈ ಕ್ಷೇತ್ರ ಗುಲ್ವರ್ಗಾ ಲೋಕಸಭಾ ಕ್ಷೇತ್ರವಾಗಿಯೇ ಗುರುತಿಸಿಕೊಂಡಿದೆ. ಕಲಬುರಗಿಗೆ ತೊಗರಿ ಕಣಜ ಎಂಬ ಹೆಸರೂ ಇದೆ. ಕೃಷ್ಣಾ ಮತ್ತು ಭೀಮಾ ನದಿಗಳು ಇಲ್ಲಿನ ಕೃಷಿ ಮತ್ತು ಕುಡಿಯುವ ನೀರಿಗೆ ಇರುವ ಮೂಲಗಳಾಗಿವೆ.

ಬಹುಮನಿ ಕೋಟೆ, ಬುದ್ಧ ವಿಹಾರ, ರಾಮತೀರ್ಥ ದೇವಸ್ಥಾನ, ಖ್ವಾಜಾ ಬಂದೇ ನವಾಜ ದುರ್ಗಾ ಮುಂತಾದ ಪ್ರೇಕ್ಷಣೀಯ ಸ್ಥಳಗಳು ಇಲ್ಲಿವೆ. ರಾಷ್ಟ್ರಕೂಟರು, ಚಾಲುಕ್ಯರು, ದೇವಗಿರಿಯ ಯಾದವರು, ದ್ವಾರಸಮುದ್ರದ ಹೊಯ್ಸಳರು, ಮೊಘಲರು ಹೀಗೆ ಇತಿಹಾಸದಲ್ಲಿ ಅನೇಕ ರಾಜ್ಯದ ಆಶ್ವಿಕೆಗೆ ಒಳಪಟ್ಟ ಗುಲ್ಬರ್ಗಾ, ಸ್ವಾತಂತ್ರ್ಯ ನಂತರವೂ ಹೈದರಾಬಾದ್ ಸಂಸ್ಥಾನದ ಅಧೀನದಲ್ಲಿತ್ತು. 1948ರ ಸೆಪ್ಟೆಂಬರ್‌ನಲ್ಲಿ ಭಾರತ ಗಣರಾಜ್ಯಕ್ಕೆ ಸೇರ್ಪಡೆಯಾಯಿತು.

kalaburagi lok sabha election 2024 results who will win

ಗುಲ್ಬರ್ಗಾ ಲೋಕಸಭೆ ಚುನಾವಣೆ ಹಾದಿ

ಕಲಬುರಗಿ ಲೋಕಸಭಾ ಕ್ಷೇತ್ರ 1951ರ ಮೊದಲ ಸಾರ್ವತ್ರಿಕ ಚುನಾವಣೆಗೂ ಮುನ್ನವೇ ರಚನೆಯಾಗಿತ್ತು. ಇಲ್ಲಿನ ಕಾಂಗ್ರೆಸ್ ಪಾರುಪತ್ಯಕ್ಕೆ ಬ್ರೇಕ್ ಹಾಕಿದ್ದು ಜನತಾದಳದಿಂದ 1996ರಲ್ಲಿ ಸ್ಪರ್ಧಿಸಿದ್ದ ಖಮರುಲ್ಲ ಇಸ್ಲಾಂ. ಇನ್ನೂ 1998ರಲ್ಲಿ ಬಸವರಾಜ ಪಾಟೀಲ್ ಸೇಡಂ ಬಿಜೆಪಿಗೆ ಇಲ್ಲಿ ಚೊಚ್ಚಲ ಗೆಲುವು ತಂದುಕೊಟ್ಟರು.

ಬಳಿಕ 2019ರಲ್ಲಿ ಮತ್ತೆ ಉಮೆಶ್ ಜಾಧವ್ ಬಿಜೆಪಿಗೆ ಗೆಲುವು ತಂದುಕೊಟ್ಟರು. ಈ ಮೂರು ನಿದರ್ಶನಗಳನ್ನು ಹೊರತುಪಡಿಸಿ ಕಲಬುರಗಿಯಲ್ಲಿ ಉಳಿದ ಯಾವ ಚುನಾವಣೆಯಲ್ಲಿಯೂ ಬೇರೆ ಪಕ್ಷ ತನ್ನ ಗುರುತು ಮೂಡಿಸಲು ಸಾಧ್ಯವಾಗಿಲ್ಲ. ಒಟ್ಟು 18 ಚುನಾವಣೆಗಳಲ್ಲಿ 15ರಲ್ಲಿ ಕಾಂಗ್ರೆಸ್ ಜಯ ಸಾಧಿಸಿ ಕಲಬುರಗಿಯನ್ನು ತನ್ನ ಭದ್ರಕೋಟೆ ಮಾಡಿಕೊಂಡಿದೆ.

ಯಾರು ಗೆಲ್ಲುವ ಸಾಧ್ಯತೆ?

2019 ರ ಲೋಕಸಭಾ ಚುನಾವಣೆಯ ಆ ಆಘಾತಕಾರಿ ಸೋಲು ಮಲ್ಲಿಖಾರ್ಜುನ ಖರ್ಗೆ ಅವರ ಸೋಲಿಲ್ಲದ ಸರದಾರ ಎಂಬ ಬಿರುದನ್ನು ಕಸಿದುಕೊಂಡಿದೆ. ತಮ್ಮ ಸ್ಥಾನ ಮತ್ತು ಪ್ರತಿಷ್ಠಿಯನ್ನು ಮರಳಿ ಪಡೆಯಲು ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕಣಕ್ಕಿಳಿಸಿದ್ದಾರೆ. ಕಳೆದ ಬಾರಿ ಬಿಜೆಪಿಗೆ ಮತ ಚಲಾಯಿಸಿದ್ದ ಮತದಾರರು ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಮೆಚ್ಚಿ ಈ ಬಾರಿ ರಾಧಾಕೃಷ್ಣ ದೊಡ್ಡಮನಿ ಅವರ ಕೈ ಹಿಡಿಯುವ ಸಾಧ್ಯತೆಗಳು ದಟ್ಟವಾಗಿವೆ.

ಇನ್ನೂ ಇತ್ತ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಉಮೇಶ್ ಜಾಧವ್ ಬಿಜೆಪಿಗೆ ಗೆಲುವು ತಂದು ಕೊಟ್ಟಿದ್ದರು. ಈ ಬಾರಿಯೂ ಅದೇ ವಿಶ್ವಾಸದಿಂದ ಹೈಕಮಾಂಡ್ ಉಮೇಶ್ ಜಾಧವ್ ಅವರನ್ನು ಕಣಕ್ಕೆ ಇಳಿಸಿದ್ದು ಮತದಾರರು ಕೈ ಬಿಡುವುದಿಲ್ಲ ಎನ್ನುವ ವಿಶ್ವಾಸದಲ್ಲಿ ಇದೆ.

ಒಟ್ಟಿನಲ್ಲಿ ಇಬ್ಬರೂ ಅಭ್ಯರ್ಥಿಗಳು ಗೆಲ್ಲುವ ಭರವಸೆಯನ್ನು ಹೊಂದಿದ್ದಾರೆ. ಮತದಾರರು ಯಾರ ಕೈ ಹಿಡಿಯುತ್ತಾರೆಂದು ಜೂನ್ 4ರವರೆಗೆ ಕಾದು ನೋಡಲೇಬೇಕು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+