Get Updates
Get notified of breaking news, exclusive insights, and must-see stories!

Kalaburagi Lok Sabha Election: ತೊಗರಿ ಕಣಜ ಕಲಬುರಗಿ ಲೋಕಸಭಾ ಕ್ಷೇತ್ರದ ಪರಿಚಯ

ರಾಜ್ಯದಲ್ಲಿ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರಗಳ ಪೈಕಿ ಕಲಬುರಗಿ ಕೂಡ ಒಂದು. ಕಲಬುರಗಿಗೆ ತೊಗರಿ ಕಣಜ ಎಂಬ ಕರೆಯಲಾಗುತ್ತದೆ. ಕೃಷ್ಣಾ ಮತ್ತು ಭೀಮಾ ನದಿಗಳು ಇಲ್ಲಿನ ಕೃಷಿ ಮತ್ತು ಕುಡಿಯುವ ನೀರಿಗೆ ಇರುವ ಮೂಲಗಳು. ಇದು ಸಾಂಸ್ಕೃತಿಕ, ಪರಂಪರೆ ಮತ್ತು ವಾಸ್ತುಶಿಲ್ಪದ ಅದ್ಬುತಗಳಿಗೆ ಹೆಸರುವಾಸಿಯಾಗಿದೆ. ಸದ್ಯ ಕೇಂದ್ರ ಚುನಾವಣಾ ಆಯೋಗ ಕಲಬುರಗಿ ಲೋಕಸಭೆ ಕ್ಷೇತ್ರದ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಕಲಬುರಗಿಯಲ್ಲಿ ಮೇ 7ರಂದು ಮತದಾನ ನಡೆಯಲ್ಲಿದ್ದು ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಬಿಜೆಪಿಯಿಂದ ಈಗಾಗಲೇ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಕಾಂಗ್ರೆಸ್ ಮಾತ್ರ ಇನ್ನೂ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ.

Kalaburagi Lok Sabha Elections 2024 Analysis Candidates List Results and Probable Winners

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಸ್ವಾತಂತ್ರ್ಯ ನಂತರದಲ್ಲಿ ನಾಲ್ಕು ದಶಕಗಳ ಕಾಲ ಕಾಂಗ್ರೆಸ್ ತೆಕ್ಕೆಯಲ್ಲಿತ್ತು. 1996ರಲ್ಲಿ ಅಭೇದ್ಯ ಕೋಟೆ ಎನಿಸಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರುಪತ್ಯಕ್ಕೆ ಬ್ರೇಕ್ ಹಾಕಿದ್ದು ಜನತಾದಳದ ಖಮರುಲ್ ಇಸ್ಲಾಂ.

ಇದಾದ ಬಳಿಕ ಒಮ್ಮೆ ಬಿಜೆಪಿ ಕೂಡ ಕ್ಷೇತ್ರದಲ್ಲಿ ಜಯ ಸಾಧಿಸಿದೆ. ಮತ್ತೆ ಈ ಕ್ಷೇತ್ರ ಎರಡು ದಶಕಗಳ ಕಾಲ ಕಾಂಗ್ರೆಸ್‌ ಕೈ ಸೇರಿತು. ಈಗ ಬಿಜೆಪಿ ಹಿಡಿತಕ್ಕೆ ಸಿಕ್ಕಿದೆ. ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಧರಂ ಸಿಂಗ್ ಮತ್ತು ವೀರೇಂದ್ರ ಪಾಟೀಲ್ ಕೂಡ ಈ ಕ್ಷೇತ್ರದಿಂದಲೇ ಲೋಕಸಭೆಗೆ ಆಯ್ಕೆಯಾಗಿದ್ದರು. ಎಂ. ಯಶವಂತಪ್ಪ, ಬಿ.ಜಿ. ಜವಳಿ, ಇಕ್ಬಾಲ್ ಅಹಮ್ಮದ್ ಸರಡಗಿ ಮತ್ತು ಮಲ್ಲಿಕಾರ್ಜುನ ಖರ್ಗೆ ಈ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದಾರೆ.

Kalaburagi Lok Sabha Elections 2024 Analysis Candidates List Results and Probable Winners

ಬಹಮನಿ ಕೋಟೆ, ಬುದ್ಧ ವಿಹಾರ, ರಾಮತೀರ್ಥ ದೇವಸ್ಥಾನ, ಖ್ವಾಜಾ ಬಂದೇ ನವಾಜ ದರ್ಗಾ ಮುಂತಾದ ಪ್ರೇಕ್ಷಣೀಯ ಸ್ಥಳಗಳು ಇಲ್ಲಿವೆ. ರಾಷ್ಟ್ರಕೂಟರು, ಚಾಲುಕ್ಯರು, ಕಳಚೂರಿ ಅರಸರು, ದೇವಗಿರಿಯ ಯಾದವರು, ದ್ವಾರಸಮುದ್ರದ ಹೊಯ್ಸಳರು, ವಾರಂಗಲ್ಲಿನ ಕಾಕತೀಯರು, ಬಹಮನಿ ಸುಲ್ತಾನರು, ಮೊಘಲರು ಹೀಗೆ ಇತಿಹಾಸದಲ್ಲಿ ಅನೇಕ ರಾಜ್ಯರ ಆಳ್ವಿಕೆಗೆ ಒಳಪಟ್ಟ ಗುಲ್ಬರ್ಗಾ, ಸ್ವಾತಂತ್ರ್ಯ ನಂತರವೂ ಹೈದರಾಬಾದ್ ಸಂಸ್ಥಾನದ ಅಧೀನದಲ್ಲಿತ್ತು. 1948ರ ಸೆಪ್ಟೆಂಬರ್‌ನಲ್ಲಿ ಭಾರತ ಗಣರಾಜ್ಯಕ್ಕೆ ಸೇರ್ಪಡೆಯಾಯಿತು.

ವಿಧಾನಸಭೆ ಕ್ಷೇತ್ರಗಳು:

ಕಲಬುರಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಗುಲಬರ್ಗಾ ದಕ್ಷಿಣ, ಗುಲಬರ್ಗಾ ಉತ್ತರ, ಗುಲಬರ್ಗಾ ಗ್ರಾಮೀಣ, ಸೇಡಂ ಮತ್ತು ಯಾದಗಿರಿ ಜಿಲ್ಲೆಯ ಗುರುಮಠಕಲ್ ವಿಧಾನ ಕ್ಷೇತ್ರಗಳು ಬರಲಿವೆ. ಆದರೆ ಜಿಲ್ಲೆಯ ಆಳಂದ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳು ಬೀದರ್ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತವೆ.

Kalaburagi Lok Sabha Elections 2024 Analysis Candidates List Results and Probable Winners

2019 ರ ಲೋಕಸಭಾ ಚುನಾವಣೆ

ಗುಲಬರ್ಗ ಕರ್ನಾಟಕ ಲೋಕಸಭಾ ಕ್ಷೇತ್ರವು ಭಾರತದ ರಾಜಕಾರಣದಲ್ಲಿ ಹೆಸರುವಾಸಿಯಾದ ರಾಜಕೀಯ ಶಕ್ತಿ ಕೇಂದ್ರವಾಗಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ, ಇದು ತೀವ್ರ ಪೈಪೋಟಿಯ ಕದನಕ್ಕೆ ಸಾಕ್ಷಿಯಾಯಿತು. ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ 95,452 ಮತಗಳ ಗೆಲುವಿನ ಅಂತರದಿಂದ ಗೆದ್ದರು. 6,20,192 ಮತಗಳನ್ನು ಗಳಿಸಿದರು. 5,24,740 ಮತಗಳನ್ನು ಪಡೆದ ಐ ಎನ್ ಸಿ ಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಮೇಶ್ ಜಾಧವ್ ಸೋಲಿಸಿದರು. ಗುಲಬರ್ಗ ವೈವಿಧ್ಯಮಯ ಜನಸಮೂದಾಯವನ್ನು ಪ್ರತಿಬಿಂಬಿಸುತ್ತದೆ ಮತ್ತು ಕರ್ನಾಟಕ ನ ನಿರ್ಣಾಯಕ ಕ್ಷೇತ್ರವಾಗಿ ಉಳಿದಿದೆ. ಈ ಕ್ಷೇತ್ರದಲ್ಲಿ 2019 ವರ್ಷದಲ್ಲಿ 60.89 ಮತದಾನವಾಗಿದೆ. ಈಗ 2024 ನಲ್ಲಿ, ಮತದಾರರು ತಮ್ಮ ಮತದ ಶಕ್ತಿಯನ್ನು ತೋರಿಸಲು ಇನ್ನಷ್ಟು ಉತ್ಸುಕರಾಗಿದ್ದಾರೆ.

ಕ್ಷೇತ್ರ : ಕಲಬುರಗಿ

ಸಂಸದರು :ಡಾ.ಉಮೇಶ ಜಾದವ್

ಪಡೆದ ಮತಗಳು : 6,20,192

ಸಮೀಪದ ಸ್ಪರ್ಧಿ : ಮಲ್ಲಿಕಾರ್ಜುನ ಖರ್ಗೆ-ಕಾಂಗ್ರೆಸ್‌

ಅಸೆಂಬ್ಲಿ ಕ್ಷೇತ್ರಗಳ ಸಂಖ್ಯೆ : 08

ಒಟ್ಟು ಚಲಾವಣೆಯಾದ ಮತ : 11,89,361

ಬಿಜೆಪಿ ಸ್ಪರ್ಧಿ ಡಾ.ಉಮೇಶ ಜಾಧವ

2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆಯಿಂದ ಕಾಂಗ್ರೆಸ್ ವರಿಷ್ಠ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಣಿಸಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದ ಡಾ.ಉಮೇಶ ಜಾಧವ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಘೋಷಿಸಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಉಮೇಶ ಜಾಧವ ಅವರು ಕ್ಷೇತ್ರದಲ್ಲಿ ತಮ್ಮ ಒಡನಾಟ ಚನ್ನಾಗಿ ಇಟ್ಟಿಕೊಂಡಿದ್ದು ಅಲ್ಲದೆ ಒಂದಿಷ್ಟು ಅಭಿವೃದ್ಧಿ ಕೆಲಸಗಳು ಮಾಡಿದ್ದಾರೆ. ಸಂಸದ ಡಾ.ಜಾಧವ್‌ ಅವರಿಗೆ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಅಷ್ಟಾಗಿ ಇಲ್ಲದಿರುವ ಕಾರಣಕ್ಕೆ ಪಕ್ಷ ಮತ್ತೆ ಕೈ ಹಿಡಿದು ಎರಡನೇ ಬಾರಿಗೆ ಸ್ಪರ್ಧಿಸಲು ಟಿಕೆಟ್‌ ನೀಡಿದೆ.

ಕಾಂಗ್ರೆಸ್ ಟಿಕೆಟ್ ಯಾರಿಗೆ?

ಇದೀಗ ಖರ್ಗೆಯವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಲೋಕಸಭಾ ಟಿಕೆಟ್‌ ಕೊಟ್ಟು ಕಣಕ್ಕಿಳಿಸಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಶಿಕ್ಷಣ ಸಂಸ್ಥೆಗಳನ್ನೂ ನಿರ್ವಹಿಸುತ್ತಿರುವ ಉದ್ಯಮಿ ದೊಡ್ಡಮನಿ ಕಲಬುರಗಿ ಕ್ಷೇತ್ರದ ಮುಂಚೂಣಿಯಲ್ಲಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ನಾಯಕರೊಂದಿಗೆ ಸಮಾಲೋಚಿಸಿ ಚುನಾವಣೆಯಲ್ಲಿ ಸ್ಪರ್ಧಿಸಬೇಕೆ ಅಥವಾ ಬೇಡವೇ ಎಂಬುದರ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುತ್ತಾರಾ?

ಇನ್ನು ಕಾಂಗ್ರೆಸ್‌ನಿಂದ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯರೂ ಆದ ಡಾ. ಮಲ್ಲಿಕಾರ್ಜುನ ಖರ್ಗೆಯವರು ಈ ಬಾರಿ ಸ್ಪರ್ಧಿಸುವ ಬಗ್ಗೆ ಒಲವು ತೋರುತ್ತಿಲ್ಲ. ಬದಲಿಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಪ್ರಿಯಾಂಕ್‌ ಖರ್ಗೆಯವರು ರಾಜ್ಯ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಇದೀಗ ಖರ್ಗೆಯವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಲೋಕಸಭಾ ಟಿಕೆಟ್‌ ಕೊಟ್ಟು ಕಣಕ್ಕಿಳಿಸಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಮತದಾರರ ಸಂಖ್ಯೆ

2024ರ ಲೋಕಸಭಾ ಚುನಾವಣೆಗೆ ಕ್ಷೇತ್ರದ ಒಟ್ಟು ಮತದಾರರು 22.59 ಲಕ್ಷ ಮತದಾರರಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿರುವ ಲಿಂಗಾಯತರು ನಿರ್ಣಾಯಕರಾಗಿದ್ದಾರೆ. ಜೊತೆಗೆ ಮುಸ್ಲಿಂ, ಪ.ಜಾತಿ, ಪ.ಪಂಗಡ, ಲಂಬಾಣಿ, ಕಬ್ಬಲಿಗ, ಕುರುಬ ಸಮುದಾಯ ಸೇರಿದಂತೆ ಇತರೆ ಸಮುದಾಯದ ಮತದಾರರಿದ್ದಾರೆ.

ಕಲಬುರಗಿ ಸಮಸ್ಯೆಗಳು

ಕೃಷಿಯಷ್ಟು ಇಲ್ಲಿ ಕೈಗಾರಿಕಾ ಚಟುವಟಿಕೆಗಳು ಬೆಳೆದಿಲ್ಲ. ಕಾರಣ ಮೂಲಸೌಕರ್ಯದ ಕೊರತೆ. ತೊಗರಿ ಅತ್ಯಧಿಕ ಪ್ರಮಾಣದಲ್ಲಿ ಉತ್ಪಾದನೆಯಾದರೂ ಇಲ್ಲಿನ ಬೇಳೆಯ ಮಿಲ್‌ಗಳು ನಷ್ಟದಲ್ಲಿವೆ. ಅನೇಕ ಮಿಲ್‌ಗಳು ಮುಚ್ಚಿ ಹೋಗಿವೆ. ಇವು ಇನ್ನೂ ಅತ್ಯಾಧುನಿಕತೆಗೆ ಒಡ್ಡಿಕೊಳ್ಳದೆ ಇರುವುದು ಕಾರಣ. ಸಿಮೆಂಟ್ ಉದ್ಯಮಗಳೂ ಅಲ್ಲಲ್ಲಿ ಇವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+