ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿ ಮೇಯರ್, ಉಪ ಮೇಯರ್ ಚುನಾವಣೆ ಯಾವಾಗ?

|
Google Oneindia Kannada News

ಕಲಬುರಗಿ, ಸೆಪ್ಟೆಂಬರ್ 10; ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಅತಂತ್ರ ಫಲಿತಾಂಶ ಬಂದಿದ್ದು ಮೇಯರ್ ಮತ್ತು ಉಪ ಮೇಯರ್ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಸೋಮವಾರದ ಬಳಿಕ ಕಲಬುರಗಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಅಧಿಸೂಚನೆ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಪಾಲಿಕೆಯ 55 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 27, ಬಿಜೆಪಿ 23, ಜೆಡಿಎಸ್ 4, ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

 ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಸ್ಥಾನಕ್ಕೆ ಬೇಡಿಕೆಯಿಟ್ಟ ಜೆಡಿಎಸ್ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಸ್ಥಾನಕ್ಕೆ ಬೇಡಿಕೆಯಿಟ್ಟ ಜೆಡಿಎಸ್

ಕಾಂಗ್ರೆಸ್‌ ಮತ್ತು ಬಿಜೆಪಿ ಮೇಯರ್ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿವೆ. ಆದರೆ ಯಾರಿಗೂ ಸಹ ಮೇಯರ್ ಗದ್ದುಗೆ ಏರಲು ಮ್ಯಾಜಿನ್ ನಂಬರ್ ಇಲ್ಲ. 4 ಸ್ಥಾನದಲ್ಲಿ ಗೆದ್ದಿರುವ ಜೆಡಿಎಸ್‌ ಬೆಂಬಲ ಅತ್ಯಗತ್ಯವಾಗಿದೆ. ಬೆಂಬಲ ನೀಡಿದರೆ ಮೇಯರ್ ಪಟ್ಟ ತನಗೆ ಕೊಡಬೇಕು ಎಂದು ಪಕ್ಷ ಬೇಡಿಕೆ ಇಟ್ಟಿದೆ.

ಕಲಬುರಗಿ ಪಾಲಿಕೆ ಫಲಿತಾಂಶ; ಬೆಂಗಳೂರಿಗೆ ಬಂದ ಜೆಡಿಎಸ್ ಸದಸ್ಯರು! ಕಲಬುರಗಿ ಪಾಲಿಕೆ ಫಲಿತಾಂಶ; ಬೆಂಗಳೂರಿಗೆ ಬಂದ ಜೆಡಿಎಸ್ ಸದಸ್ಯರು!

Kalaburagi Mayor And Deputy Mayor Election Notification Next Week

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಸದಸ್ಯರಾದ ಸಾಜಿದ್ ಕಲ್ಯಾಣಿ, ವಿಜಯಲಕ್ಷ್ಮೀ ರಮೇಶ ಸಿ., ವಿಶಾಲ ಕುಮಾರ ನವರಂಗ್, ಅಲಿಮುದ್ದೀನ್ ಪಟೇಲ್ ಜೆಡಿಎಸ್ ಮುಖಂಡರಾದ ನಾಸೀರ್ ಹುಸೇನ್ ಜೊತೆ ಬೆಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದಾರೆ.

 ಕಲಬುರಗಿ ಅತಂತ್ರ ಪಾಲಿಕೆ: ಜೆಡಿಎಸ್ ಬೆಂಬಲ ಯಾರಿಗೆ? ಮಾಜಿ ಪ್ರಧಾನಿ ಒಲವೇನು? ಕಲಬುರಗಿ ಅತಂತ್ರ ಪಾಲಿಕೆ: ಜೆಡಿಎಸ್ ಬೆಂಬಲ ಯಾರಿಗೆ? ಮಾಜಿ ಪ್ರಧಾನಿ ಒಲವೇನು?

ಶುಕ್ರವಾರ ಬಿಡದಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತೋಟದ ಮನೆಯಲ್ಲಿ ಗಣೇಶ ಚತುರ್ಥಿ ಪೂಜೆಯಲ್ಲಿ ಎಲ್ಲರೂ ಭಾಗಿಯಾಗಿದ್ದರು. ಮೇಯರ್ ಆಯ್ಕೆ ವಿಚಾರದಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂದು ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಎಚ್. ಡಿ. ದೇವೇಗೌಡರು ಕುಮಾರಸ್ವಾಮಿಗೆ ನೀಡಿದ್ದಾರೆ.

ಮೇಯರ್ ಚುನಾವಣೆ ಮೈತ್ರಿ ಕುರಿತು ಮಾತನಾಡಿರುವ ಜೆಡಿಎಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಉಸ್ತಾದ ನಾಸೀರ್ ಹುಸೇನ್, "ಈಗಾಗಲೇ ನಮ್ಮ ತೀರ್ಮಾನವನ್ನು ಪ್ರಕಟಸಿದ್ದೇವೆ. ಯಾರು ನಮ್ಮ ಬೇಡಿಕೆಗೆ ಒಪ್ಪುತ್ತಾರೋ ಅವರನ್ನು ಒಳಗೊಂಡ ಪಕ್ಷ ಪಾಲಿಕೆ ಅಧಿಕಾರ ಹಿಡಿಯಲಿದೆ" ಎಂದು ಹೇಳಿದ್ದಾರೆ.

ಬಿಜೆಪಿ ಮೇಯರ್ ಸ್ಥಾನವನ್ನು ಯಾರಿಗೂ ಬಿಟ್ಟುಕೊಡದೇ ಅಧಿಕಾರ ಹಿಡಿಯಲು ದಾರಿಯನ್ನು ಹುಡುಕುತ್ತಿದೆ. ಮಾಜಿ ಸಚಿವ ಎಚ್. ಡಿ. ರೇವಣ್ಣ ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿಲ್ಲ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೀಡಿದ "ಜೆಡಿಎಸ್ ಮುಳುಗುವ ಹಡಗು" ಹೇಳಿಕೆ ಪಕ್ಷಕ್ಕೆ ಹಿನ್ನಡೆ ಉಂಟು ಮಾಡುತ್ತಿದೆ.

27 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್‌ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆಯೇ? ಕಾದು ನೋಡಬೇಕು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ ಜೊತೆಗೆ ಮೈತ್ರಿಗೆ ಆಸಕ್ತಿ ತೋರಿಸಿಲ್ಲ. ಮೇಯರ್ ಪಟ್ಟ ಜೆಡಿಎಸ್‌ಗೆ ನೀಡಲು ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ಸಿದ್ಧವಿಲ್ಲ.

ಸೋಮವಾರದ ಬಳಿಕ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಚುನಾವಣೆ ದಿನಾಂಕ ಘೋಷಣೆಯಾದರೆ ಯಾರು ಯಾರ ಜೊತೆ ಕೈ ಜೋಡಿಸಲಿದ್ದಾರೆ ಎಂಬ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆ ಇದೆ.

ಮಹಾನಗರ ಪಾಲಿಕೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ, ಉಪ ಮೇಯರ್ ಸ್ಥಾನ ಒಬಿಸಿಗೆ ನಿಗದಿಯಾಗಿದೆ. ಈ ಅರ್ಹತೆ ಇರುವ ಅಭ್ಯರ್ಥಿಗಳು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷದಲ್ಲಿದ್ದಾರೆ.

ಲೆಕ್ಕಾಚಾರ; ಕಲಬುರಗಿ ಪಾಲಿಕೆಯಲ್ಲಿ 23 ಸ್ಥಾನಗಳಲ್ಲಿ ಜಯಗಳಿಸಿರುವ ಬಿಜೆಪಿ ಜೆಡಿಎಸ್‌ನ ನಾಲ್ಕು ಸದಸ್ಯರ ಬೆಂಬಲ ಪಡೆದರೆ ಒಂದು ಸಂಸದ, ಮೂವರು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಬೆಂಬಲದೊಂದಿಗೆ ಅಧಿಕಾರ ಪಡೆಯಬಹುದು.

ಜೆಡಿಎಸ್‌ ಪಕ್ಷ ಒಂದು ವೇಳೆ ಕಾಂಗ್ರೆಸ್‌ಗೆ ಬೆಂಬಲ ನೀಡಿದರೆ ಕಾಂಗ್ರೆಸ್‌ ಸಂಖ್ಯಾಬಲ 31ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ. ಆದರೆ ಮೇಯರ್ ಸ್ಥಾನ ಜೆಡಿಎಸ್‌ಗೆ ಕೊಡಲು ನಾಯಕರು ಒಪ್ಪಲಿದ್ದಾರೆಯೇ? ಎಂಬುದು ಪ್ರಶ್ನೆ.

English summary
Kalaburagi Municipal Corporation mayor and deputy mayor election notification will be issued after September 13, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X