ಕಲಬುರಗಿಯಲ್ಲಿ ಸಾಮೂಹಿಕ ಪ್ರಾರ್ಥನೆ: 15 ಮಂದಿ ಬಂಧನ
ಕಲಬುರಗಿ, ಏಪ್ರಿಲ್ 30: ಕಲಬುರಗಿಯಲ್ಲಿ ಲಾಕ್‌ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
Recommended Video
ರಂಜಾನ್ ತಿಂಗಳು ಆಗಿರುವ ಕಾರಣ ಸೇಡಂ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಿದ್ದರು. ಆದರೆ, ಲಾಕ್‌ಡೌನ್ ಸಮಯದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಿದ್ದು, ನಿಯಮ ಪಾಲಿಸದ ಕಾರಣ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.
ಬೊಮ್ಮನಹಳ್ಳಿಯಲ್ಲಿ 15 ಮಂದಿ ಮಸೀದಿಗೆ ತೆರಳಿ ಪ್ರಾರ್ಥನೆ ಮಾಡಿದ್ದರು. ಈ ವೇಳೆ ಅದನ್ನು ಗಮನಿಸಿದ ಸ್ಥಳೀಯರು ಪೊಲೀಸರ ಗಮನಕ್ಕೆ ತಂದರು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಲಾಟಿ ಏಟು ನೀಡಿ, ಎಲ್ಲರನ್ನು ಬಂಧಿಸಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಕಲಬುರಗಿಯಲ್ಲಿ ಈವರೆಗೆ 44 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. 7 ಜನರು ಇದರಿಂದ ಗುಣಮುಖರಾಗಿದ್ದರು, 32 ಜನರನ್ನು ಕ್ವಾರಂಟೈನ್‌ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಈ ಹಿಂದೆಯೇ ಮೆಕ್ಕಾ ಮಸೀದಿಯ ಮುಖ್ಯಸ್ಥರಾದ ಮೊಹಮ್ಮದ್ ಅಬ್ದುಲ್ ಖಾದಿರ್ ಸಿದ್ದಿಕಿ ರಂಜಾನ್ ಆಚರಣೆಗೆ ಬಗ್ಗೆ ತಿಳಿಸಿದ್ದಾರೆ. ಎಲ್ಲ ಮುಸ್ಲಿಮರಿಗೆ ಮನೆಯಲ್ಲಿಯೇ ದೇವರನ್ನು ಪ್ರಾರ್ಥನೆ ಮಾಡುವಂತೆ ಹೇಳಿದ್ದಾರೆ. ಕೊರೊನಾ ವೈರಸ್‌ನಿಂದ ಸಾವು, ನೋವು ಸಂಭವಿಸಿದ್ದು, ಅವರ ನಿವಾರಣೆಗೆ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications