ಕಲಬುರಗಿ: ಎನ್ ಕೌಂಟರ್ ನಲ್ಲಿ ರೌಡಿ ಶೀಟರ್ ಮಲ್ಲಿಕಾರ್ಜುನ್ ಬಲಿ
ಕಲಬುರ್ಗಿ, ಆಗಸ್ಟ್ 1: ಇಂದು (ಆಗಸ್ಟ್ 1) ಬೆಳಿಗ್ಗೆ ಕಲಬುರಗಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ರೌಡಿ ಶೀಟರ್ ಮಲ್ಲಿಕಾರ್ಜುನ ಅಲಿಯಾಸ್ ಕರಿಚಿರತೆ ಸಾವನ್ನಪ್ಪಿದ್ದಾನೆ.
ಅಪಹರಣ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಲಬುರಗಿಯ ನಂದೂರು ಗ್ರಾಮದ ನಿವಾಸಿ, ಮಲ್ಲಿಕಾರ್ಜುನನ ವಿರುದ್ಧ ಪ್ರಕರಣ ದಾಖಲಿಸಿದ್ದ ಪೊಲೀಸರು ಆತನ ಪತ್ತೆಗೆ ಬಲೆಬೀಸಿದ್ದರು. ಆತನನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಮಲ್ಲಿಕಾರ್ಜುನನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.

ಇದರಿಂದ ತೀವ್ರ ಗಾಯಗೊಂಡಿದ್ದ ಮಲ್ಲಿಕಾರ್ಜುನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.












Click it and Unblock the Notifications