ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿ ಜಿಲ್ಲಾ ನ್ಯಾಯಾಲಯ ಆಗಸ್ಟ್ 5ರ ತನಕ ಸೀಲ್ ಡೌನ್

|
Google Oneindia Kannada News

ಕಲಬುರಗಿ, ಆಗಸ್ಟ್ 03 : ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ. ಆಗಸ್ಟ್ 3 ರಿಂದ 5ರ ತನಕ ನ್ಯಾಯಾಲಯ ಸೀಲ್‌ ಡೌನ್ ಮಾಡಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಜುಲೈ 31ರಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರು ನಿವೃತ್ತರಾಗಿದ್ದರು. ಅವರಿಗೆ ಕೋವಿಡ್ - 19 ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ನ್ಯಾಯಾಲಯವನ್ನು ಸೀಲ್ ಡೌನ್ ಮಾಡಲಾಗಿದ್ದು, ಸ್ಯಾನಿಟೈಸ್ ಮಾಡಲಾಗುತ್ತಿದೆ.

ಕಲಬುರಗಿ: ಕೊರೊನಾ ಜೊತೆಗೆ ಎದುರಾಯ್ತು ಮತ್ತೊಂದು ಆತಂಕ!ಕಲಬುರಗಿ: ಕೊರೊನಾ ಜೊತೆಗೆ ಎದುರಾಯ್ತು ಮತ್ತೊಂದು ಆತಂಕ!

ನಿವೃತ್ತರಾದ ನ್ಯಾಯಾಧೀಶರಿಗೆ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ಭಾನುವಾರ ರಾತ್ರಿ ಅವರ ವರದಿ ಬಂದಿದ್ದು, ಸೋಂಕು ತಗುಲಿರುವುದು ಖಚಿತವಾಗಿದೆ.

ಮದುವೆ ಕುರಿತು ಹೊಸ ಆದೇಶ ಹೊರಡಿಸಿದ ಕಲಬುರಗಿ ಜಿಲ್ಲಾಡಳಿತಮದುವೆ ಕುರಿತು ಹೊಸ ಆದೇಶ ಹೊರಡಿಸಿದ ಕಲಬುರಗಿ ಜಿಲ್ಲಾಡಳಿತ

Kalaburagi Sessions Court Seal Down Till August 5

ಕೊರೊನಾ ಪರಿಸ್ಥಿತಿ ಹಿನ್ನಲೆಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜನೆ ಮಾಡಲು ಸಹ ನ್ಯಾಯಾಲಯದ ಸಿಬ್ಬಂದಿ ಹಾಗೂ ವಕೀಲರ ಸಂಘದ ಪದಾಧಿಕಾರಿಗಳಿಗೆ ಅವಕಾಶವನ್ನು ನೀಡಿರಲಿಲ್ಲ.

ಭಯದ ನಡುವೆಯೂ ಕಲಬುರಗಿ ಜನರಿಗೊಂದು ಖುಷಿ ಸುದ್ದಿಭಯದ ನಡುವೆಯೂ ಕಲಬುರಗಿ ಜನರಿಗೊಂದು ಖುಷಿ ಸುದ್ದಿ

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾನುವಾರ ಜಿಲ್ಲೆಯಲ್ಲಿ 238 ಪ್ರಕರಣಗಳು ದಾಖಲಾಗಿದ್ದವು. ಜಿಲ್ಲೆಯಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 5,767ಕ್ಕೆ ಏರಿಕೆಯಾಗಿದೆ.

ಕೋವಿಡ್ - 19 ಸೋಂಕಿನಿಂದಾಗಿ ಕಲಬುರಗಿ ಜಿಲ್ಲೆಯಲ್ಲಿ 6 ಜನರು ಭಾನುವಾರ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿನಿಂದಾಗಿ ಜಿಲ್ಲೆಯಲ್ಲಿ ಇದೂವರೆಗೆ ಮೃತಪಟ್ಟವರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ.

English summary
Kalaburagi sessions court judge who retired on July 31, 2020 tested positive for COVID - 19. Court seal down till August 5 for sanitize work.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X