ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ: ಸರ್ಕಾರದ ವಿರುದ್ಧ ಬಿಜೆಪಿಯಿಂದ ಉಪವಾಸ ಸತ್ಯಾಗ್ರಹ

|
Google Oneindia Kannada News

ಕಲಬುರಗಿ, ನವೆಂಬರ್ 20: ರೈತರ ಸಮಸ್ಯೆ ಸೇರಿದಂತೆ ಬಗೆಹರಿಸುವುದು ಸೇರಿದಂತೆ ರಾಜ್ಯದ ಹಲವು ಸಮಸ್ಯೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಲಬುರಗಿಯಲ್ಲಿ ಬಿಜೆಪಿಯು ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ.

ಕಲಬುರಗಿ ಬಿಜೆಪಿ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ನೇತೃತ್ವದಲ್ಲಿ ಇಂದು ಬೆಳಿಗ್ಗೆ 11 ಗಂಟೆಯಿಂದ ಜೇವರ್ಗಿಯ ಮಿನಿ ವಿಧಾನಸೌಧದ ಆವರಣದಲ್ಲಿ ಬಿಜೆಪಿಯು ಉಪವಾಸ ಸತ್ಯಾಗ್ರಹ ಆರಂಭಿಸಲಿದೆ.

ಕಬ್ಬಿಗೆ ಬೆಂಬಲ ಬೆಲೆ ಸಿಗಲ್ಲ, ಬಾಕಿ ಮೊತ್ತ ದಕ್ಕಲ್ಲ, ರೈತರಿಗೆ ಕಹಿ, ಕಹಿ ಕಬ್ಬಿಗೆ ಬೆಂಬಲ ಬೆಲೆ ಸಿಗಲ್ಲ, ಬಾಕಿ ಮೊತ್ತ ದಕ್ಕಲ್ಲ, ರೈತರಿಗೆ ಕಹಿ, ಕಹಿ

ಜೇವರ್ಗಿಯನ್ನು ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದ್ದರೂ ಸಹ ಈ ವರೆಗೆ ಬರ ನಿರ್ಮೂಲನಾ ಕಾಮಗಾರಿಗಳು ಪ್ರಾರಂಭವಾಗಿಲ್ಲ, ಇಲ್ಲಿನ ರೈತರ ಸಂಕಷ್ಟಗಳ ಬಗ್ಗೆ ಪದೇ-ಪದೇ ಸರ್ಕಾರದ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಬೆಜೆಪಿ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.

Kalburagi BJP hunger protest against coalition government

ಜೇವರ್ಗಿಯ ಡಿಸಿಸಿ ಬ್ಯಾಂಕ್‌ನಲ್ಲಿ ರೈತರ ಸಾಲಮನ್ನಾ ಮಾಡುವಲ್ಲಿ ಅವ್ಯವಹಾರ ನಡೆದಿದ್ದು, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಸಹ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.

ರೈತ ಮಹಿಳೆಗೆ ಬೈಗುಳ, ವಿವಾದಕ್ಕೆ ಸ್ಪಷ್ಟನೆ ಕೊಟ್ಟರು ಕುಮಾರಸ್ವಾಮಿರೈತ ಮಹಿಳೆಗೆ ಬೈಗುಳ, ವಿವಾದಕ್ಕೆ ಸ್ಪಷ್ಟನೆ ಕೊಟ್ಟರು ಕುಮಾರಸ್ವಾಮಿ

ಉಪವಾಸಕ್ಕೆ ಬಿಜೆಪಿ ಕಾರ್ಯಕರ್ತರು, ಸ್ಥಳೀಯ ಮುಖಂಡರು, ಬಿಜೆಪಿ ಮುಖಂಡ ಮಾಲಿಕಯ್ಯ ಗುತ್ತೇದಾರ್ ಅವರುಗಳು ಭಾಗವಹಿಸಲಿದ್ದಾರೆ

English summary
Kalburgi BJP wing doing hunger protest against coalition government for not solving farmers problems. BJP party workers and leaders doing hunger protest in Jevargi, front of mini vidhan soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X