ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವ: ಕಲಬುರಗಿಯಲ್ಲಿ ಸಿಎಂ ಧ್ವಜಾರೋಹಣ

|
Google Oneindia Kannada News

ಕಲಬುರಗಿ ಸೆಪ್ಟಂಬರ್ 17: ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವ ದಿನಾಚರಣೆಯ ಅಂಗವಾಗಿ ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಸನರಾಜ್ ಬೊಮ್ಮಾಯಿ ಧ್ವಜಾರೋಹಣ ಮಾಡಿದರು.

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಸಮಿತಿ ಕಲಬುರಗಿ ಇವರ ವತಿಯಿಂದ ಪೊಲೀಸ್ ಪೆರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವ ದಿನಾಚರಣೆ -2022ರ ಅಂಗವಾಗಿ ಆಯೋಜಿಸಿರುವ ಧ್ವಜಾರೋಹಣ ಕಾರ್ಯವನ್ನು ನೆರವೇರಿಸಿ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Kalyan Karnatakas Amrutha Mahotsava: CM hoists flag at Kalaburagi

ಎಸ್‌.ವಿ.ಪಿ ವೃತ್ತದಲ್ಲಿ ಹೈದ್ರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ ವಲ್ಲಭಭಾಯ್ ಪಟೇಲ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಸಚಿವ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಮದ್ರ, ಸಚಿವ ಮುರುಗೇಶ್ ನಿರಾಣಿ, ಕೆಕೆಆರ್ ಡಿ ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಹಾಗೂ ಆ ಭಾಗದ ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Kalyan Karnatakas Amrutha Mahotsava: CM hoists flag at Kalaburagi

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳು ಭಾರತಕ್ಕೆ ಸೇರಿ ಇಂದಿಗೆ 75 ವರ್ಷಗಳು ಪೂರ್ಣಗೊಂಡಿವೆ. ಕಲ್ಯಾಣ ಕರ್ನಾಟಕ ಭಾಗವೆಂದೇ ಕರೆಯುವ ಹೈದರಾಬಾದ್ ಕರ್ನಾಟಕದ ಕೇಂದ್ರ ಭಾಗವಾಗಿರುವ ಕಲಬುರಗಿಯಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿದೆ.

English summary
Chief Minister Basanraj Bommai hoisted the flag in Kalaburagi today as part of the Amrita Mahotsava Day celebrations of Kalyana Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X