ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲ್ಯಾಣ ಕರ್ನಾಟಕ ಉತ್ಸವ 2022; ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ

|
Google Oneindia Kannada News

ಕಲಬುರಗಿ, ಸೆಪ್ಟೆಂಬರ್ 15; ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸೆಪ್ಟೆಂಬರ್ 17ರಂದು ನಡೆಯಲಿದೆ. ಕಲ್ಯಾಣ ಕರ್ನಾಟಕದ ವ್ಯಾಪ್ತಿಗೆ ಸೇರುವ 7 ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಉತ್ಸವ ನಡೆಯಲಿದೆ.

ಕರ್ನಾಟಕ ಸರ್ಕಾರ ಕಲ್ಯಾಣ ಕರ್ನಾಟಕ ಉತ್ಸವದ ದಿನ ಯಾವ ಜಿಲ್ಲೆಗಳಲ್ಲಿ ಯಾವ ಸಚಿವರು ಧ್ವಜಾರೋಹಣ ಮಾಡಬೇಕು? ಎಂದು ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

KKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳುKKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳು

ಸೆಪ್ಟೆಂಬರ್ 17ರಂದು ನಗರದ ಎನ್. ವಿ. ಮೈದಾನದಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳಲಿದ್ದು, ಅವರೇ ಧ್ವಜಾರೋಹಣ ಮಾಡಲಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಾದ ಸೂರ್ಯಕಾಂತಿ ಬೆಳೆಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಾದ ಸೂರ್ಯಕಾಂತಿ ಬೆಳೆ

Kalyana Karnataka Day 2022: List of Ministers Assigned to hoist Flag in 7 Districts

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳೂ ಆದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಕಲಬುರಗಿ ನಗರದ ಎನ್. ವಿ. ಮೈದಾನಕ್ಕೆ ಭೇಟಿ ನೀಡಿ, ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.

ಕಲ್ಯಾಣ ಕರ್ನಾಟಕಕ್ಕೆ ಮಹತ್ವದ ಸುದ್ದಿ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!ಕಲ್ಯಾಣ ಕರ್ನಾಟಕಕ್ಕೆ ಮಹತ್ವದ ಸುದ್ದಿ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

ಕಲ್ಯಾಣ ಕರ್ನಾಟಕದ ವ್ಯಾಪ್ತಿಗೆ ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳು ಒಳಪಡುತ್ತವೆ. ಮೊದಲು ಇದನ್ನು ಹೈದರಾಬಾದ್-ಕರ್ನಾಟಕ ಎಂದು ಕರೆಯಲಾಗುತ್ತಿತ್ತು. ಬಳಿಕ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದೆ.

ಯಾವ ಜಿಲ್ಲೆ, ಯಾವ ಸಚಿವರ ಧ್ವಜಾರೋಹಣ

1 ಕಲಬುರಗಿ - ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು

2 ರಾಯಚೂರು - ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ

3 ಬಳ್ಳಾರಿ - ಬಿ. ಶ್ರೀರಾಮುಲು

4 ಕೊಪ್ಪಳ - ಆನಂದ್ ಸಿಂಗ್

5 ಯಾದಗಿರಿ - ಪ್ರಭು ಚೌಹಾಣ್

6 ವಿಜಯನಗರ - ಶಶಿಕಲಾ ಜೊಲ್ಲೆ

7 ಬೀದರ್ - ಜಿಲ್ಲಾಧಿಕಾರಿ, ಬೀದರ್

ಕಲ್ಯಾಣ ಕರ್ನಾಟಕದ ಬಗ್ಗೆ; ಕೇಂದ್ರ ಯುಪಿಎ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದ ಡಾ. ಮಲ್ಲಿಕಾರ್ಜುನ ಖರ್ಗೆ ಮತ್ತು ಹಿಂದಿನ ಲೋಕಸಭಾ ಸದಸ್ಯರ ಪ್ರಯತ್ನದಿಂದ 2013ರಲ್ಲಿ ಅಂದಿನ ಯುಪಿಎ ಸರ್ಕಾರವು ಭಾರತ ಸಂವಿಧಾನಕ್ಕೆ ತಿದ್ದುಪಡಿ ತಂದು 371ಜೆ ಕಲಂ ಅಡಿಯಲ್ಲಿ ಕೆ. ಕೆ. ಆರ್. ಡಿ. ಬಿ ಮಂಡಳಿಯು ರಚನೆಯಾಯಿತು.

ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ 2013ರಲ್ಲಿ ಕರ್ನಾಟಕ ರಾಜ್ಯಪತ್ರ ಅಧಿಸೂಚನೆ ಹೊರಡಿಸಿ 6/11/2013ರ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯನ್ನು (ಕ. ಕ. ಪ್ರ. ಅ. ಮಂಡಳಿ) ಕಲಬುರಗಿಯಲ್ಲಿ ಸ್ಥಾಪಿಸಲಾಯಿತು.

ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿಮಂಡಳಿಯನ್ನು ಕರ್ನಾಟಕ ರಾಜ್ಯಪತ್ರ 6/11/2013ರಂದು ಸ್ಥಾಪಿಸಲಾಗಿತ್ತು. ದಿನಾಂಕ 7/9/2019ರಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ ಮಾಡಲಾಯಿತು.

ಸೆಪ್ಟೆಂಬರ್ 17ರಂದು ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ (ಕಲ್ಯಾಣ ಕರ್ನಾಟಕ ಉತ್ಸವ) ವಾಗಿ ಆಚರಣೆ ಮಾಡಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹೈದರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದವು. ಆಗಸ್ಟ್ 15ಮ 1947ರಲ್ಲಿ ದೇಶದಕ್ಕೆ ಸ್ವಾತಂತ್ರ್ಯ ದೊರೆಯಿತು. ಆದರೆ ಹೈದರಾಬಾದ್ ನಿಜಾಮ ತನ್ನ ಸಂಸ್ಥಾನವನ್ನು ಸ್ವತಂತ್ರ ಭಾರತದಲ್ಲಿ ವಿಲೀನಗೊಳ್ಳಲು ಒಪ್ಪಲಿಲ್ಲ. ಆದ್ದರಿಂದ ಈ ಭಾಗಕ್ಕೆ ಸ್ವಾತಂತ್ರ್ಯ ದೊರೆಯಲಿಲ್ಲ.

ಅಂದಿನ ಕೇಂದ್ರ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್‌ ಅವರ ಬಿಗಿ ನಿಲುವಿನ ಕಾರಣ ಹೈದರಾಬಾದ್‌ನ ನಿಜಾಮ ಸಂಸ್ಥಾನ 1948 ಸೆಪ್ಟೆಂಬರ್ 17ರಂದು ಭಾರತ ಒಕ್ಕೂಟದಲ್ಲಿ ಲೀನವಾಯಿತು. ಹೀಗಾಗಿ ಪ್ರತಿ ವರ್ಷ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನವನ್ನು ಸೆಪ್ಟೆಂಬರ್ 17ರಂದು ಆಚರಣೆ ಮಾಡಲಾಗುತ್ತದೆ.

ಹೈದರಾಬಾದ್ ಕರ್ನಾಟಕ ಹೆಸರಿನಲ್ಲಿಯೇ ದಾಸ್ಯ ಇದೆ. ಆದ್ದರಿಂದ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂಬ ಬೇಡಿಕೆ ಇತ್ತು. 2019ರಲ್ಲಿ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿದ್ದಂತೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಿದರು.

English summary
Kalyana Karnataka Day 2022: Here is the List of Ministers Assigned to hoist Flag in Kalaburagi, Raichur, Ballari, Koppal, Bidar, Yadgir and Vijayanagara Districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X