ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲ್ಯಾಣ ಕರ್ನಾಟಕದ ಭಾಗದ ಭಕ್ತರು, ವಿದ್ಯಾರ್ಥಿಗಳಿಗೆ ವಿಶೇಷ ಬಸ್

|
Google Oneindia Kannada News

ಕಲಬುರಗಿ, ಸೆ.10: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಸೆಪ್ಟೆಂಬರ್ 9 ರಂದು ಬೆಂಗಳೂರಿನಿಂದ ಹಾಗೂ ಸೆಪ್ಟೆಂಬರ್ 12 ರಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಿಂದ ಬೆಂಗಳೂರಿಗೆ ಹಾಗೂ ಇತರೆ ಸ್ಥಳಗಳಿಗೆ ಬೇಡಿಕೆಗನುಸಾರ ಹೆಚ್ಚುವರಿ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಈ ನಿಗಮದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ, ಬೀದರ, ಯಾದಗಿರಿ, ಬಳ್ಳಾರಿ, ಕೊಪ್ಪಳ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಿಂದ ಬೆಂಗಳೂರಿಗೆ ಮತ್ತು ಹೈದ್ರಾಬಾದ, ಶ್ರೀಶೈಲಂ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಹೊಸಪೇಟೆ ಹಾಗೂ ಬೆಳಗಾವಿ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಸರು ಬದಲಾವಣೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಸರು ಬದಲಾವಣೆ

ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿ ಎಲ್ಲಾ ತಾಲ್ಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರಕ್ಕನುಗುಣವಾಗಿ ಹೆಚ್ಚುವರಿ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

 ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ

ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ

ಪ್ರಯಾಣಿಕರಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಕರ್ನಾಟಕ ಸೇರಿದಂತೆ ಅಂತರ ರಾಜ್ಯದಲ್ಲಿ ಇರುವ 16 ಗಣಕೀಕೃತ ಬುಕ್ಕಿಂಗ್ ಕೌಂಟರಗಳ ಮುಖಾಂತರ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸಬೇಕು.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯತಿ ನೀಡಲಾಗುವುದು. ಹೋಗುವ ಹಾಗೂ ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಬರುವ ಪ್ರಯಾಣ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10 ರಿಯಾಯಿತಿ ನೀಡಲಾಗುತ್ತದೆ.

 ನೀಟ್ ಪರೀಕ್ಷೆಗೆ ಹೆಚ್ಚುವರಿ ಬಸ್‍

ನೀಟ್ ಪರೀಕ್ಷೆಗೆ ಹೆಚ್ಚುವರಿ ಬಸ್‍

ನೀಟ್ ಪರೀಕ್ಷೆಗೆ ಹೆಚ್ಚುವರಿ ಬಸ್‍ಗಳ ಕಾರ್ಯಾಚರಣೆ: ಇದೇ ಸೆಪ್ಟೆಂಬರ್ 11 ರಂದು ನೀಟ್ (ಪಿಜಿ) ಹಾಗೂ ಸೆಪ್ಟೆಂಬರ್ 12 ರಂದು ನೀಟ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಗೌರಿ, ಗಣೇಶ ಹಬ್ಬ; ಬೆಂಗಳೂರಿನಿಂದ 1000 ಹೆಚ್ಚುವರಿ ಬಸ್ ವ್ಯವಸ್ಥೆಗೌರಿ, ಗಣೇಶ ಹಬ್ಬ; ಬೆಂಗಳೂರಿನಿಂದ 1000 ಹೆಚ್ಚುವರಿ ಬಸ್ ವ್ಯವಸ್ಥೆ

 ಹೆಚ್ಚುವರಿ ಸಾರಿಗೆ ಸಂಚರಿಸುವ ಸೌಲಭ್ಯ

ಹೆಚ್ಚುವರಿ ಸಾರಿಗೆ ಸಂಚರಿಸುವ ಸೌಲಭ್ಯ

ಈ ಪರೀಕ್ಷೆಯು ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಬೆಂಗಳೂರು, ಮಂಗಳೂರು, ಮೈಸೂರು ಮತ್ತು ಉಡುಪಿ ಜಿಲ್ಲಾ ಕೇಂದ್ರಗಳಲ್ಲಿ ನಡೆಸುತ್ತಿದ್ದು, ಈ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚುವರಿ ಸಾರಿಗೆ ಸಂಚರಿಸುವ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆಯಬೇಕು. ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಿಗಮದ ಬಸ್ಸುಗಳಿಗೆ ಪ್ರಯಾಣಿಸುವಾಗ ಕಡ್ಡಾಯವಾಗಿ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.

 ಹೆಚ್ಚಿನ ವಿವರಗಳು ವೆಬ್‌ಸೈಟ್‌ನಲ್ಲಿ ಲಭ್ಯ

ಹೆಚ್ಚಿನ ವಿವರಗಳು ವೆಬ್‌ಸೈಟ್‌ನಲ್ಲಿ ಲಭ್ಯ

ವೆಬ್‌ಸೈಟ್‌ನಲ್ಲಿ ವಿವರಗಳು ಲಭ್ಯವಿದೆ ಕಾರ್ಯಾಚರಣೆ ನಡೆಸುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾಪಟ್ಟಿ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡಾ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ.

Recommended Video

ಹಬ್ಬ ಮಾಡೋಕೆ ಹೆದರಿದ ಜನಸಾಮಾನ್ಯರು | Oneindia Kannada

English summary
Kalyana Karnataka KSRTC to run special buses during Ganesha chaturthi festival and NEET Students from September 9 and 12, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X