ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೆ.12ರಂದು ನೀಟ್ ಪರೀಕ್ಷೆ; ಹೆಚ್ಚುವರಿ ಬಸ್‌ಗಳ ಸಂಚಾರ

|
Google Oneindia Kannada News

ಕಲಬುರಗಿ, ಸೆಪ್ಟೆಂಬರ್ 10; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ. ಸೆಪ್ಟೆಂಬರ್ 12ರಂದು ಪಿಜಿ ನೀಟ್ ಪರೀಕ್ಷೆ ನಿಗದಿಯಾಗಿದೆ.

ಸೆಪ್ಟೆಂಬರ್ 12ರ ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚುವರಿ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ನೀಟ್ ಮತ್ತು ಇತರೆ ಸಾಮಾನ್ಯ ಪ್ರವೇಶ ಪರೀಕ್ಷೆ ರದ್ದು ಇಲ್ಲ: ಕೇಂದ್ರ ಸರ್ಕಾರ ನೀಟ್ ಮತ್ತು ಇತರೆ ಸಾಮಾನ್ಯ ಪ್ರವೇಶ ಪರೀಕ್ಷೆ ರದ್ದು ಇಲ್ಲ: ಕೇಂದ್ರ ಸರ್ಕಾರ

ಈ ಪರೀಕ್ಷೆಯು ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಬೆಂಗಳೂರು, ಮಂಗಳೂರು, ಮೈಸೂರು ಮತ್ತು ಉಡುಪಿ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿವೆ. ಈ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳು ಹೆಚ್ಚುವರಿ ಸಾರಿಗೆ ಸಂಚಾರದ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ನೀಟ್ ಮುಂದೂಡಿಕೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ನೀಟ್ ಮುಂದೂಡಿಕೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Kalyana Karnataka Road Transport Corporation To Run Additional Bus For NEET Exam

ಬಸ್‌ಗಳಲ್ಲಿ ಪ್ರಯಾಣಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ನೀಟ್ ಮುಂದೂಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ವೈದ್ಯರ ಅರ್ಜಿನೀಟ್ ಮುಂದೂಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ವೈದ್ಯರ ಅರ್ಜಿ

ಹಬ್ಬದ ವಿಶೇಷ ಬಸ್‌ಗಳು; ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸೆಪ್ಟೆಂಬರ್ 12ರಂದು ನಿಗಮದ ವ್ಯಾಪ್ತಿಯಿಂದ ಬೆಂಗಳೂರಿಗೆ ಹಾಗೂ ಇತರೆ ಸ್ಥಳಗಳಿಗೆ ಬೇಡಿಕೆಗನುಸಾರ ಹೆಚ್ಚುವರಿ ಬಸ್‍ಗಳನ್ನು ಓಡಿಸುತ್ತಿದೆ.

ನಿಗಮದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ಕೊಪ್ಪಳ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಿಂದ ಬೆಂಗಳೂರಿಗೆ ಮತ್ತು ಹೈದರಾಬಾದ್, ಶ್ರೀಶೈಲಂ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಹೊಸಪೇಟೆ ಹಾಗೂ ಬೆಳಗಾವಿ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‍ ಸಂಚಾರ ನಡೆಸಲಿವೆ.

ಪ್ರಯಾಣಿಕರಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಸಹ ಕಲ್ಪಿಸಲಾಗಿದೆ. ಜನರು ಕರ್ನಾಟಕ ಸೇರಿದಂತೆ ಅಂತರ ರಾಜ್ಯದಲ್ಲಿ ಇರುವ 16 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳಲ್ಲಿಯೂ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗುವ ಟಿಕೇಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ ಪಿಕ್ ಅಪ್ ಪಾಯಿಂಟ್‍ ಹೆಸರನ್ನು ಗಮನಿಸಬೇಕು ಎಂದು ಮನವಿ ಮಾಡಲಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯತಿ ನೀಡಲಾಗುವುದು. ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್‍ ಒಟ್ಟಿಗೆ ಕಾಯ್ದಿರಿಸಿದಲ್ಲಿ ಬರುವ ಪ್ರಯಾಣ ಟಿಕೆಟ್‌ನ ದರದಲ್ಲಿ ಶೇ 10 ರಿಯಾಯಿತಿ ನೀಡಲಾಗುತ್ತಿದೆ.

ರೈಲು ಸಂಚಾರದ ಅವಧಿ ಬದಲಾವಣೆ; ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ಹುಬ್ಬಳ್ಳಿ-ಗಂಗಾವತಿ ರೈಲು ಸಂಚಾರದ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 12ರಂದು ಹುಬ್ಬಳ್ಳಿಯಲ್ಲಿ ನೀಟ್ ಪರೀಕ್ಷೆ ನಡೆಯಲಿದೆ ಆದ್ದರಿಂದ ರೈಲು ಸಂಚಾರದ ಅವಧಿಯನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ವೇಳಾಪಟ್ಟಿ ಬದಲಾಗಿದೆ.

ಗಂಗಾವತಿಯಿಂದ ಹುಬ್ಬಳ್ಳಿಗೆ ಸೆಪ್ಟೆಂಬರ್ 12ರಂದು ಬೆಳಗ್ಗೆ ರೈಲು 6 ಗಂಟೆಗೆ ಹೊರಡಲಿದೆ. ಹುಬ್ಬಳ್ಳಿಯಿಂದ ಗಂಗಾವತಿಗೆ ಸಂಜೆ 5 ಗಂಟೆಗೆ ಬದಲು 6 ಗಂಟೆಗೆ ಹೊರಡಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ವೇಳಾಪಟ್ಟಿ ನೋಡಿಕೊಂಡು ಪ್ರಯಾಣ ಬೆಳೆಸಬಹುದಾಗಿದೆ.

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ನೀಟ್ ಪರೀಕ್ಷೆ ಮುಂದೂಡಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಪರೀಕ್ಷೆ ಮುಂದೂಡಿಕೆ ಮಾಡಲು ನಿರಾಕರಿಸಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರೀಕ್ಷೆ ಮುಂದೂಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.

ಪರೀಕ್ಷೆಯನ್ನು ಮುಂದೂಡಿ ಎಲ್ಲಾ ವಿದ್ಯಾರ್ಥಿಗಳು ನ್ಯಾಯ ಸಮ್ಮತವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಒತ್ತಾಯಿಸಿದ್ದರು.

English summary
Kalyana Karnataka Road Transport Corporation will run additional bus for NEET exam. NEET UG 2021 is scheduled on September 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X