ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Kalyana Karnataka Utsav 2023 : ಫೆಬ್ರವರಿ 24 ರಿಂದ ಮೂರು ದಿನ ಕಲ್ಯಾಣ ಕರ್ನಾಟಕ ಉತ್ಸವ 2023

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ. ಫೆಬ್ರವರಿ 24 ರಿಂದ 26ರ ತನಕ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

|
Google Oneindia Kannada News

ಕಲಬುರಗಿ, ಫೆಬ್ರವರಿ 03; ಕಲ್ಯಾಣ ಕರ್ನಾಟಕ ಉತ್ಸವ 2023 ಫೆಬ್ರವರಿ 24 ರಿಂದ 26ರ ತನಕ ಕಲಬುರಗಿಯಲ್ಲಿ ನಡೆಯಲಿದೆ. ಉತ್ಸವದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿದೆ. ಉತ್ಸವದ ಸಂಪೂರ್ಣ ಖರ್ಚು-ವೆಚ್ಚವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಭರಿಸಲಿದೆ.

ಕಲ್ಯಾಣ ಕರ್ನಾಟಕದ ಕಲೆ, ಸಂಸ್ಕೃತಿ ಹಾಗೂ ಸ್ಥಳೀಯ ಪರಂಪರೆ ಅನಾವರಣಗೊಳಿಸುವ ಮೂರು ದಿನಗಳ ಕಲ್ಯಾಣ ಕರ್ನಾಟಕ ಉತ್ಸವವನ್ನು ಕಲಬುರಗಿಯಲ್ಲಿ ವಿಜೃಂಭಣೆಯಿಂದ ನಡೆಸಲು ನಿರ್ಧರಿಸಲಾಗಿದೆ. ಕಲಬುರಗಿಯಲ್ಲಿ ವಿ. ವಿ. ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಸ್ಥಳದಲ್ಲಿಯೇ ಈ ಉತ್ಸವ ನಡೆಯಲಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ಸಿಹಿಸುದ್ದಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ಸಿಹಿಸುದ್ದಿ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ. ಉತ್ಸವದ ಕುರಿತು ಮಾಹಿತಿ ನೀಡಿದ್ದಾರೆ. ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಉತ್ಸವದ ಸಿದ್ಧತೆಗಳ ಬಗ್ಗೆ ಸಭೆ ನಡೆಸಿದ್ದಾರೆ. ಉತ್ಸವ ಯಶಸ್ಸಿಗೆ ರಚನೆ ಮಾಡಿರುವ ವಿವಿಧ ಸಮಿತಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ 60 ಸೀಟು ಸಹಿತ ಬಿಎಸ್ಸಿ ಕೋರ್ಸ್ ಆರಂಭ: ಸರ್ಕಾರ ಆದೇಶ ಕಲ್ಯಾಣ ಕರ್ನಾಟಕದಲ್ಲಿ 60 ಸೀಟು ಸಹಿತ ಬಿಎಸ್ಸಿ ಕೋರ್ಸ್ ಆರಂಭ: ಸರ್ಕಾರ ಆದೇಶ

ಮೂರು ದಿನಗಳ ಉತ್ಸವಕ್ಕೆ ಕಲಬುರಗಿ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಜನರು ಆಗಮಿಸಲು ಸಾರಿಗೆ ವ್ಯವಸ್ಥೆ ಕಲ್ಪಿಸುವ ಕುರಿತು, ವೇದಿಕೆ ಸುತ್ತಮುತ್ತ ವಾಹನಗಳ ಪಾರ್ಕಿಂಗ್, ಪೊಲೀಸ್ ಬಂದೋಬಸ್ತ್ ಮತ್ತು ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಕಲಬುರಗಿ-ಬೆಂಗಳೂರು ಹೊಸ ರೈಲು, ಕೇಂದ್ರ ಸಚಿವರ ಸ್ಪಂದನೆ ಕಲಬುರಗಿ-ಬೆಂಗಳೂರು ಹೊಸ ರೈಲು, ಕೇಂದ್ರ ಸಚಿವರ ಸ್ಪಂದನೆ

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ಅನಿರುದ್ಧ ಶ್ರವಣ ಪಿ. ಕಲಬುರಗಿ ಉತ್ಸವ 2023ಕ್ಕಾಗಿ ರಚಿಸಲಾಗಿರುವ ವಿವಿಧ ಸಮಿತಿಗಳೊಂದಿಗೆ ಸಭೆ ನಡೆಸಿದರು. 100*60 ಚದುರ ಅಡಿ ಮುಖ್ಯ ವೇದಿಕೆ ಜೊತೆಗೆ ಡಾ. ಬಿ. ಆರ್.ಅಂಬೇಡ್ಕರ್ ಭವನ ಮತ್ತು ವಿ.ವಿ ಬಯಲು ರಂಗಮಂದಿರದಲ್ಲಿ ಎರಡು ಉಪ ವೇದಿಕೆ ನಿರ್ಮಿಸಿ ಸಾಂಸ್ಕೃತಿಕ ಮತ್ತು ಜಾನಪದ ಕಾರ್ಯಕ್ರಮಗಳನ್ನು ಅಲ್ಲಿ ಆಯೋಜಿಸಲಾಗುತ್ತದೆ ಎಂದು ಹೇಳಿದರು.

ಉತ್ಸವ ಆಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಈ ಕಾರ್ಯಕ್ರಮವನ್ನು ಐತಿಹಾಸಿಕವನ್ನಾಗಿಸಬೇಕು. ಇತರೆ ಜಿಲ್ಲೆ, ರಾಜ್ಯಗಳಿಂದ ಬರುವ ಜನಪ್ರತಿನಿಧಿಗಳು, ಗಣ್ಯರು, ಕಲಾವಿದರು, ಬಾಲಿವುಡ್, ಸ್ಯಾಂಡಲ್‌ವುಡ್ ಕಲಾವಿದರ ಊಟ, ವಸತಿ, ಸಾರಿಗೆ ಹೀಗೆ ಪ್ರತಿಯೊಂದು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲು ವಿವಿಧ ಸಮಿತಿಗಳನ್ನು ರಚಿಸಿ, ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಅದರಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ

ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ

ಕಲ್ಯಾಣ ಕರ್ನಾಟಕ ಉತ್ಸವ 2023ರ ಆರಂಭದ ದಿನ ಪ್ರದೇಶದ ಏಳು ಜಿಲ್ಲೆಗಳ ಸಾಂಸ್ಕೃತಿ, ಜಾನಪದ ಕಲಾ ತಂಡಗಳು ಮತ್ತು ಕುಂಭಕಳಸದೊಂದಿಗೆ ಭವ್ಯ ಮೆರವಣಿಗೆ. ನಗರದ ನಿಗದಿತ ಸ್ಥಳದಿಂದ ವೇದಿಕೆ ಸ್ಥಳದ ವರೆಗೆ ಜಾನಪದ ಶೋಭಾ ಯಾತ್ರೆ ಸಾಗಲಿದೆ.

ಉತ್ಸವ ವೀಕ್ಷಿಸಲು ಸುಮಾರು 20 ರಿಂದ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ದಿನ ಖ್ಯಾತ ಚಲನಚಿತ್ರ ನಟರು, ಗಾಯಕರು, ಕಲಾವಿದರು ಬರುವುದರಿಂದ ಸುಮಾರು 1 ಲಕ್ಷ ಜನಸಂಖ್ಯೆ ಸೇರುವ ನಿರೀಕ್ಷೆ ಇದೆ.

ವೇದಿಕೆ ಮತ್ತು ಸುತ್ತಮುತ್ತಲಿನ ಸ್ಥಳದಲ್ಲಿ ತಕ್ಷಣದಿಂದಲೇ ಸ್ವಚ್ಚತಾ ಕಾರ್ಯ ಆರಂಭಿಸಬೇಕು. ವಿಶ್ವವಿದ್ಯಾಲಯದ ರಸ್ತೆ ರಿಪೇರಿ ಮಾಡಬೇಕು. ಮೂರು ದಿನ ಉತ್ಸವದಲ್ಲಿ ಕುಡಿಯವ ನೀರಿನ ವ್ಯವಸ್ಥೆ, ಬಯೋ ಶೌಚಾಲಯ ವ್ಯವಸ್ಥೆ ಮಾಡಬೇಕು. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಡಿದಂತೆ ಸ್ವಚ್ಛತಾ ಕಾರ್ಯ ತುಂಬಾ ಅಚ್ಚುಕಟಾಗಿ ನಿರ್ವಹಿಸಬೇಕು ಎಂದು ಸೂಚನೆ ಕೊಡಲಾಗಿದೆ.

ಶ್ವಾನ ಪ್ರದರ್ಶನ, ಕೃಷಿ ಮೇಳ, ಗಾಳಿಪಟ ಉತ್ಸವ

ಶ್ವಾನ ಪ್ರದರ್ಶನ, ಕೃಷಿ ಮೇಳ, ಗಾಳಿಪಟ ಉತ್ಸವ

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಶ್ವಾನ ಪ್ರದರ್ಶನ, ಕೃಷಿ ಮೇಳ, ಮಕ್ಕಳ ಮತ್ತು ಮಹಿಳೆಯರ ಹಬ್ಬ, ಗಾಳಿಪಟ ಉತ್ಸವ, ಚಿತ್ರಕಲೆ ಮತು ಶಿಲ್ಪ ಕಲೆಗಳ ಕಾರ್ಯಾಗಾರ, ಫಲಪುಷ್ಪ ಪ್ರದರ್ಶನ, ಚಿತ್ರ ಸಂತೆ, ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ.

ಕುಸ್ತಿ, ಮಲ್ಲಕಂಬ ಸೇರಿದಂತೆ ಗ್ರಾಮೀಣ ಮತ್ತು ಸಾಹಸ ಕ್ರೀಡೆಗಳು ಹಾಗೂ ಜಲ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ. ಕಲಬುರಗಿ ಕೋಟೆ ಸೇರಿದಂತೆ ಸ್ಥಳೀಯ ಪ್ರಮುಖ ಸರ್ಕಾರಿ ಕಚೇರಿಗಳು, ವೃತ್ತಗಳು, ಐತಿಹಾಸಿಕ ಸ್ಮಾರಕಗಳನ್ನು ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗುತ್ತದೆ.

ವಸ್ತು ಪ್ರದರ್ಶನ ಮಳಿಗೆಗೆ ಅವಕಾಶ ನೀಡಲಾಗಿದ್ದು, ಸ್ಥಳೀಯ ಕೈಗಾರಿಕೆ, ಆಹಾರ, ಕರಕುಶಲ ವಸ್ತುಗಳ ಪ್ರದರ್ಶನಕ್ಕೆ ಇಲ್ಲಿ ಅವಕಾಶ ನೀಡಲಾಗುವುದು. ಸ್ಥಳೀಯ ಪ್ರಕಾಶನ ಸಂಸ್ಥೆಗಳು ಹೊರತಂದಿರುವ ಪುಸ್ತಕ ಪ್ರದರ್ಶನಕ್ಕೂ ಅವಕಾಶವಿದೆ.

ಉತ್ಸವಕ್ಕೆ ವಿವಿಧ ಮೇಳಗಳ ಮೆರಗು

ಉತ್ಸವಕ್ಕೆ ವಿವಿಧ ಮೇಳಗಳ ಮೆರಗು

ಕಲ್ಯಾಣ ಕರ್ನಾಟಕದ ಮಾಮು ಮಾಲ್ ಪುರಿ, ಸುಸಲಾ ಭಜಿ ಸೇರಿದಂತೆ ಸ್ಥಳೀಯ ತಿಂಡಿ ತಿನುಸು ಖಾದ್ಯಗಳ ಜೊತೆಗೆ ಇತರೆ ಪ್ರದೇಶ ಹಾಗೂ ಹೊರ ರಾಜ್ಯದ ಖಾದ್ಯಗಳ ಮೇಳ ಆಯೋಜನೆ ಮಾಡಲಾಗುತ್ತಿದೆ. ಇದರ ಜೊತೆಗೆ ಮತ್ಸ್ಯ ಮೇಳ ಸಹ ಆಯೋಜಿಸಲಾಗುತ್ತಿದ್ದು, ರಂಗು-ರಂಗೀನ ಮೀನುಗಳ ಪ್ರದರ್ಶನ ನಡೆಯಲಿದೆ.

ಉತ್ಸವದಲ್ಲಿ ಪ್ರಮುಖವಾಗಿ ಹೆಲಿಕಾಪ್ಟರ್ ರೈಡ್ ಜನರ ಆಕರ್ಷಣೆಯಾಗಲಿದೆ. ಹೆಲಿಪ್ಯಾಡ್ ನಿರ್ಮಾಣ ಮತ್ತು ಹೆಲಿರೈಡ್‍ಗೆ ಸಿದ್ಧತೆ ಮಾಡಿಕೊಳ್ಳುವಂತೆ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ಚರ್ಚಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಮ್ಯಾರಥಾನ್, ಸೈಕಲ್ ಜಾಥಾ, ಹಾಟ್ ಏರ್ ಬಲೂನ್‍ಗಳ ಹಾರಾಟ ಸಹ ಆಯೋಜಿಸಲಾಗುತ್ತಿದೆ.

English summary
Kalyana Karnataka Region Development Board secretary Anirudh Sravan P. said that Three days Kalyana Karnataka Utsav 2023 will be held from February 24 to 26 at Kalaburagi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X