ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಂಗೋಲಿಯಲ್ಲಿ ಅರಳಿದ ಕನ್ನಡದ ಸಂಸ್ಕೃತಿ, ಇತಿಹಾಸ

|
Google Oneindia Kannada News

ಕಲಬುರಗಿ, ಜನವರಿ 25 : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಂಗೋಲಿ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಕನ್ನಡ ನಾಡಿನ ಇತಿಹಾರ, ಕಲೆ, ಸಂಸ್ಕೃತಿ ಮತ್ತು ಪರಂಪರೆ ರಂಗೋಲಿಯಲ್ಲಿ ಅರಳಿ ನಿಂತು ಜನರನ್ನು ಸೆಳೆಯಿತು.

ಶನಿವಾರ ಕನ್ನಡ ಸಾಹಿತ್ಯ ಸಮ್ಮೇಳನದ ಆರೋಗ್ಯ ಸಮಿತಿ ಕಲಬುರಗಿ ನಗರದ ಗುಲಬರ್ಗಾ ಇನ್ಸ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆವರಣದಲ್ಲಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜನೆ ಮಾಡಿತ್ತು.

ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆ ನಿರ್ಮಾಣಕ್ಕೆ ಚಾಲನೆಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆ ನಿರ್ಮಾಣಕ್ಕೆ ಚಾಲನೆ

ರಂಗೋಲಿ ಸ್ಪರ್ಧೆಯಲ್ಲಿ 50 ವಿದ್ಯಾರ್ಥಿನಿಯರು ಹಾಗೂ ಓರ್ವ ವಿದ್ಯಾರ್ಥಿ ಸೇರಿದಂತೆ 51 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತುಂಬಾ ಕುತೂಹಲದಿಂದ ರಂಗೋಲಿ ಸ್ಪರ್ಧೆ ವೀಕ್ಷಿಸಿದರು, ಮೆಚ್ಚುಗೆ ವ್ಯಕ್ತಪಡಿಸಿದರು.

85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬದಲಾವಣೆ85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬದಲಾವಣೆ

ರಂಗೋಲಿ ಸ್ಪರ್ಧೆಯಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಆಶಾ ಜ್ಯೋತಿ ಪ್ರಥಮ ಸ್ಥಾನ ಪಡೆದರು. ಡಿಪ್ಲೊಮಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರಾದ ಅನಿತಾ ಮತ್ತು ಅಂಬಿಕಾ ಎರಡನೇ ಸ್ಥಾನವನ್ನು ಹಂಚಿಕೊಂಡರು. ಮೂರನೇ ಸ್ಥಾನಕ್ಕೆ ಡಿಪ್ಲೋಮಾ ಕಾಲೇಜಿನ ಪ್ರತಿಕ್ಷಾ ಮತ್ತು ಬಿಎಸ್ಸಿ ನರ್ಸಿಂಗ್ ಕಾಲೇಜಿನ ಶಶಾಂಕ ತೃಪ್ತಿಪಟ್ಟುಕೊಂಡರು.

85ನೇ ಕನ್ನಡ ಸಾಹಿತ್ಯ ಸಮ್ಮೇಳನ; ಲಾಂಛನದ ವಿಶೇಷತೆಗಳು85ನೇ ಕನ್ನಡ ಸಾಹಿತ್ಯ ಸಮ್ಮೇಳನ; ಲಾಂಛನದ ವಿಶೇಷತೆಗಳು

ಜನರ ಗಮನ ಸೆಳೆದ ರಂಗೋಲಿ

ಜನರ ಗಮನ ಸೆಳೆದ ರಂಗೋಲಿ

ರಂಗೋಲಿ ಸ್ಪರ್ಧೆಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ, ಜ್ಞಾನಪೀಠ ಪ್ರಶಸ್ತಿ ವಿಜೇತರ ಕಲಾಕೃತಿಗಳು, ಭ್ರೂಣ ಹತ್ಯೆ ನಿಷೇಧ ಸೇರಿದಂತೆ ಇನ್ನಿತರ ಸಾಮಾಜಿಕ ಸಂದೇಶ ಸಾರುವ ರಂಗೋಲಿಗಳು ವೈವಿಧ್ಯಮಯ ಬಣ್ಣದಲ್ಲಿ ಮೂಡಿ ಬಂದವು, ನೋಡುಗರ ಗಮನ ಸೆಳೆದವು.

ವಿವಿಧ ಬಗೆಯ ರಂಗೋಲಿ

ವಿವಿಧ ಬಗೆಯ ರಂಗೋಲಿ

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ 50 ವಿದ್ಯಾರ್ಥಿನಿಯರು ಹಾಗೂ ಓರ್ವ ವಿದ್ಯಾರ್ಥಿ ಸ್ಪರ್ಧಿಗಳಾಗಿದ್ದರು. ಜಿಲ್ಲಾಧಿಕಾರಿ ಶರತ್ ಬಿ. ತುಂಬಾ ಕುತೂಹಲದಿಂದ ರಂಗೋಲಿ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಬುರಗಿ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಇದುವರೆಗೂ 21030 ಪ್ರತಿನಿಧಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮತ್ತು ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರಭದ್ರ ಸಿಂಪಿ ಈ ಕುರಿತು ಮಾಹಿತಿ ನೀಡಿದ್ದಾರೆ. ರಾಯಚೂರಿನಲ್ಲಿ 12,500, ಮೈಸೂರಿನಲ್ಲಿ 13,000 ಹಾಗೂ ಧಾರವಾಡದಲ್ಲಿ 13,500 ಜನ ನೋಂದಣಿ ಮಾಡಿಕೊಂಡಿದ್ದರು. ಈಗ 21030 ಪ್ರತಿನಿಧಿಗಳ ನೋಂದಣಿ ದಾಖಲೆಯಾಗಿದೆ.

ಪ್ರಚಾರ ರಥಕ್ಕೆ ಚಾಲನೆ

ಪ್ರಚಾರ ರಥಕ್ಕೆ ಚಾಲನೆ

ಫೆಬ್ರವರಿ 5, 6 ಮತ್ತು 7ರಂದು ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಾಹಿತ್ಯಾಸಕ್ತರು ಸಮ್ಮೇಳನದಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವ ಪ್ರಚಾರ ರಥಕ್ಕೆ ಚಾಲನೆ ನೀಡಲಾಗಿದೆ.

English summary
Rangoli art competition organized in Kalaburagi ahead of the 85th Kannada Sahitya Sammelana. Kannada culture and history represented in rangoli. Sahitya sammelana will be held on February 5, 6 and 7.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X