85ನೇ ಕನ್ನಡ ಸಾಹಿತ್ಯ ಸಮ್ಮೇಳನ; ವೇದಿಕೆ ನಿರ್ಮಾಣಕ್ಕೆ ಶುಕ್ರವಾರ ಪೂಜೆ

ಕಲಬುರಗಿ, ಜನವರಿ 16 : ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ 85ನೇ ಅಖಲಿ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಫೆಬ್ರವರಿ 5, 6 ಮತ್ತು 7 ರಂದು ನಡೆಯಲಿರುವ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಜನವರಿ 17ರಂದು ಚಾಲನೆ ಸಿಗಲಿದೆ.

ಸಮ್ಮೇಳನದ ವೇದಿಕೆ ನಿರ್ಮಾಣ ಕಾರ್ಯಕ್ಕೆ ಜನವರಿ 17 ರಂದು ಬೆಳಗ್ಗೆ 11.30ಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ. ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾಗಿರುವ ಜಿಲ್ಲಾಧಿಕಾರಿ ಶರತ್ ಬಿ. ಈ ಕುರಿತು ಮಾಹಿತಿ ನೀಡಿದ್ದಾರೆ.

ಈ ಹಿಂದ ವೇದಿಕೆ ನಿರ್ಮಾಣ ಕಾರ್ಯಕ್ಕೆ ಜನವರಿ 16 ರಂದು ಗುದ್ದಲಿ ಪೂಜೆ ನೆರವೇರಿಸಲು ತೀರ್ಮಾನಿಸಲಾಗಿತ್ತು. ಆದರೆ, ಕಾರಣಾಂತರದಿಂದ ಜನವರಿ 17ಕ್ಕೆ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

Kannada Sahitya Sammelana Stage Set Up Ground Breaking Ceremony On Jan 17

ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಈಗಾಗಲೇ ಬಿಡುಗಡೆ ಮಾಡಿದೆ.

ದೇಣಿಗೆ ನೀಡಲು ಮನವಿ : 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರ್ಥಿಕ ನೆರವು ನೀಡುವಂತೆ ಸರ್ಕಾರಿ ನೌಕರರು, ಸಂಘ-ಸಂಸ್ಥೆಗಳು, ವ್ಯಾಪಾರಸ್ಥರಲ್ಲಿ ಜಿಲ್ಲಾಡಳಿತ ಮನವಿ ಮಾಡಿದೆ. 1987ರ ಬಳಿಕ ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ.

ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿರುವುದು ನಮ್ಮ ಹೆಮ್ಮೆ. ಅದನ್ನು ಯಶಸ್ವಿಯಾಗಿ ನಡೆಸಿಕೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಮ್ಮೇಳನವನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಾಕಷ್ಟು ಅನುದಾನದ ಅವಶ್ಯಕತೆ ಇರುತ್ತದೆ.

ಆದ್ದರಿಂದ ಸಂಘ-ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು, ಕಾರ್ಖಾನೆ-ಉದ್ದಿಮೆಗಳು, ವಿವಿಧ ವ್ಯಾಪಾರಿ ಸಂಘಗಳು ಮುಂತಾದವರು ಸ್ವಪ್ರೇರಣೆಯಿಂದ ದೇಣಿಗೆ ನೀಡಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+