ಕರ್ನಾಟಕ ಚುನಾವಣೆ; ಕಲಬುರಗಿಯ ಮತದಾರರು, ಮತಗಟ್ಟೆ ವಿವರಗಳು

ಕಲಬುರಗಿ, ಮಾರ್ಚ್ 30; ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ. ಕಲಬುರಗಿ ಜಿಲ್ಲೆಯಲ್ಲಿ 2,380 ಮತಗಟ್ಟೆ ಸ್ಥಾಪನೆ ಮಾಡಲಾಗುತ್ತದೆ, ಜಿಲ್ಲೆಯಲ್ಲಿ 21,71,211 ಮತದಾರರು ಮತ ಚಲಾಯಿಸಲು ಅರ್ಹರಿದ್ದಾರೆ.

ಚುನಾವಣೆ ದಿನಾಂಕ ಘೋಷಣೆ ಬಳಿಕ ಕಲಬುರಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಪತ್ರಿಕಾಗೋಷ್ಠಿ ನಡೆಸಿದರು. ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಹೇಳಿದರು.

Karnataka Assembly Elections 2023 Kalaburagi Voters And Polling Booths

ಕಲಬುರಗಿ ಜಿಲ್ಲೆಯಲ್ಲಿ 10,98,549 ಪುರುಷರು ಮತ್ತು 10,72,662 ಮಹಿಳೆಯರು ಸೇರಿ 21,71,211 ಮತದಾರರು ಮತ ಚಲಾಯಿಸಲು ಅರ್ಹರಿದ್ದಾರೆ. ಪ್ರತಿ ಮತಗಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ನೆರಳು ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮತದಾನ ಸಂದರ್ಭದಲ್ಲಿ ಮುಖಕ್ಕೆ ಮಾಸ್ಕ್ ಅಥವಾ ಬುರ್ಖಾ ಧರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದರು.

ಮೊದಲ ಬಾರಿಗೆ ಅವಕಾಶ; ಕರ್ನಾಟಕದ ಈ ಬಾರಿಯ ಚುನಾವಣೆ ವಿಶೇಷ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗದಿದ್ದಲ್ಲಿ ಅಂತವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶೇ 50ರಷ್ಟು ಮತಗಟ್ಟೆಯಲ್ಲಿ ಸಿಸಿಟಿವಿ ಕಣ್ಗಾವಲು ಇರಲಿದೆ. ಮಹಿಳಾ ಸ್ನೇಹಿಯಾಗಿ 40 ಸಖಿ ಪಿಂಕ್ ಬೂತ್ ಇರಲಿವೆ. ಇದಲ್ಲದೆ ವಿಲಚೇತನರೇ ಕಾರ್ಯನಿರ್ವಹಿಸುವ 9 ಮತಗಟ್ಟೆಗಳು ಮತ್ತು 20ರ ಆಸುಪಾಸು ಯುವಕ-ಯುವತಿ ಸಿಬ್ಬಂದಿಯಿಂದ ಕೂಡಿದ 9 ಮತಗಟ್ಟೆಗಳು ಕಾರ್ಯನಿರ್ವಹಿಸಲಿವೆ.

Karnataka Assembly Elections 2023 Kalaburagi Voters And Polling Booths

ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆ ಮುಕ್ತ ಮತ್ತ ನ್ಯಾಯಸಮ್ಮತವಾಗಿ ನಡೆಯಲು ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದು, ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಸಹ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ರಾಜಕೀಯ ಸಭೆ, ಸಮಾರಂಭಕ್ಕೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ನಡೆಯುವ ಜಯಂತಿಗಳು ಪೂಜೆಗೆ ಸೀಮಿತವಾಗಿ ಸರಳಾಚರಣೆ ಮಾಡಲಾಗುತ್ತದೆ.

ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಸರ್ಕಾರದಿಂದ ನೀಡಲಾದ ಎಲ್ಲಾ ಸೌಲಭ್ಯಗಳನ್ನು ವಾಪಸ್ ಪಡೆಯಲಾಗುತ್ತದೆ. ಸರ್ಕಾರಿ ಅಧಿಕಾರಿಗಳು, ನೌಕರರಿಗೆ ರಜೆ ನಿರ್ಬಂಧಿಸಿದ್ದು, ಕೇಂದ್ರಸ್ಥಾನ ಬಿಡುವಂತಿಲ್ಲ. ಜಿಲ್ಲೆಯಿಂದ ವರ್ಗಾವಣೆ ಮಾಡುವಂತಿಲ್ಲ. ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಸಭೆ ಮಾಡುವಂತಿಲ್ಲ. ಅತಿಥಿಗೃಹಗಳು ಜಿಲ್ಲಾ ಚುನಾವಣಾಧಿಕಾರಿಗಳ ಉಸ್ತುವಾರಿಯಲ್ಲಿ ಇರುವುದರಿಂದ ರಾಜಕೀಯ ಪಕ್ಷಗಳಿಗೆ, ಅಭ್ಯರ್ಥಿಗಳಿಗೆ ಸಾರ್ವಜನಿಕರಿಗೆ ಪ್ರವಾಸಿ ಮಂದಿರಕ್ಕೆ ಪ್ರವೇಶ ನಿಷೇಧಿಸಲಾಗಿದೆ.

ಅಭ್ಯರ್ಥಿಗಳ ಖರ್ಚು; ವಿಧಾನಸಭಾ ಕ್ಷೇತ್ರದ ಪ್ರತಿ ಅಭ್ಯರ್ಥಿಗೆ 40 ಲಕ್ಷ ರೂ. ಖರ್ಚಿನ ಮಿತಿಯನ್ನು ಚುನಾವಣಾ ಆಯೋಗ ನಿಗದಿಪಡಿಸಿದೆ. ಆದರೆ ಪಕ್ಷಕ್ಕೆ ಮಿತಿ ಇರುವುದಿಲ್ಲ. ಇದು ಮುದ್ರಣ, ವಿದ್ಯುನ್ಮಾನ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನೀಡುವ ಜಾಹೀರಾತನ್ನು ಸಹ ಒಳಗೊಂಡಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿ, ಪಕ್ಷದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಸುದ್ದಿ, ಪ್ರಕಟಣೆ, ಬಿತ್ತರ ಮಾಡುವ ಮಾಧ್ಯಮ ಸಂಸ್ಥೆಗಳ ಮೇಲೆ ನಿಗಾ ವಹಿಸಲು ಸಮಿತಿ ರಚಿಸಿಲಾಗಿದೆ. ವಿಶೇಷವಾಗಿ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಸೆಲ್ ಸಹ ರಚನೆಯಾಗಿದೆ.

ಚುನಾವಣೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ 42 ಚೆಕ್‌ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ಮಹಾರಾಷ್ಟ್ರ ಮತ್ತು ತೆಲಾಂಗಾಣ ಗಡಿಯಲ್ಲಿ ತಲಾ 8 ಅಂತರ ರಾಜ್ಯ ಗಡಿ ಚೆಕ್‌ಪೋಸ್ಟ್ ಮತ್ತು ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ 10 ಚೆಕ್‌ಪೋಸ್ಟ್‌ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+