ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ನೊಂದು ದಿನದಲ್ಲಿ ರಾಜ್ಯ ಸರ್ಕಾರದ ಕತೆ ಗೋವಿಂದ! ಉಮೇಶ್ ಜಾಧವ್

|
Google Oneindia Kannada News

ಕಲಬುರಗಿ, ಮೇ 23: "ಫಲಿತಾಂಶ ಬಂದ ಒಂದೇ ದಿನದಲ್ಲಿ ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳಲಿದೆ" ಎಂದು ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಭವಿಷ್ಯ ನುಡಿದಿದ್ದಾರೆ.

"ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗುತ್ತಾರೆ. ಈ ಕ್ಷೇತ್ರದಲ್ಲಿ ನಾನು ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ನನಗಿದೆ. ಅಷ್ಟೇ ಅಲ್ಲ, ಚುನಾವಣೆ ಫಲಿತಾಂಶ ಪ್ರಕಟವಾದ ಒಂದೇ ದಿನದಲ್ಲಿ ರಾಜ್ಯ ಸರ್ಕಾರ ಬೀಳಲಿದ್ದು, ಬಿಜೆಪಿ ಸರ್ಕಾರ ರಚಿಸಲಿದೆ" ಎಂದು ಅವರು ಹೇಳಿದ್ದಾರೆ.

ಮೇ 24 ಕ್ಕೆ ಯಡಿಯೂರಪ್ಪ ಸಿಎಂ: ಉಮೇಶ್ ಜಾಧವ್ ಮೇ 24 ಕ್ಕೆ ಯಡಿಯೂರಪ್ಪ ಸಿಎಂ: ಉಮೇಶ್ ಜಾಧವ್

ಕಲಬುರಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಮೇಶ್ ಜಾಧವ್ ಎದುರಿಸಲಿದ್ದಾರೆ.

Karnataka coalition government going to fall after lok sabha election results: Umesh Jadhav

ಏಪ್ರಿಲ್ 23 ರಂದು ಈ ಕ್ಷೇತ್ರಕ್ಕೆ ಮತದಾನ ನಡೆದಿದ್ದು, ಮೇ 23 ರಂದು ಫಲಿತಾಂಶ ಹೊರಬೀಳುತ್ತಿದೆ.

ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಇತ್ತೀಚೆಗಷ್ಟೇ ಪಕ್ಷ ತೊರೆದು ಬಿಜೆಪಿ ಸೇರಿದ್ದರು.

ಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE: ಚಾಮುಂಡೇಶ್ವರಿ ಮೊರೆ ಹೋದ ನಿಖಿಲ್ಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE: ಚಾಮುಂಡೇಶ್ವರಿ ಮೊರೆ ಹೋದ ನಿಖಿಲ್

ಮೇ 24 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಉಮೇಶ್ ಜಾಧವ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.

English summary
Umesh Jadhav, BJP candidate from Kalaburagi,Karnataka who is contesting against Congress' Mallikarjun Kharge: Narendra Modi will become the PM. I'm hopeful of winning the seat.After this,within a day or two this coalition govt is going to fall on its own and BJP govt will be formed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X