ಸಿಎಂ ಸಿದ್ದರಾಮಯ್ಯಗೆ ಬರೆದಿದ್ದು ಎನ್ನಲಾದ ಪತ್ರ ನಕಲಿ: ಕಲಬುರಗಿ ಎಸ್‌ಪಿಗೆ ಶಾಸಕ ಬಿಆರ್‌ ಪಾಟೀಲ್‌ ದೂರು

ಕಲಬುರಗಿ, ಜುಲೈ 26: ತಮ್ಮದೇ ಸರ್ಕಾರದ ಸಚಿವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್‌ ಶಾಸಕ ಬಿಆರ್‌ ಪಾಟೀಲ್‌ ಅವರು ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಅವರ ಲೆಟರ್‌ ಹೆಡ್‌ ಇರುವ ಪತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಆದರೆ, ಬಿಆರ್‌ ಪಾಟೀಲ್‌ ಅವರು ಈ ಪತ್ರ ನಕಲಿ ಎಂದು ಹೇಳಿದ್ದಾರೆ. ಈ ಕುರಿತಾಗಿ ಕಲಬುರಗಿ ಎಸ್‌ಪಿ ಅವರಿಗೆ ದೂರು ನೀಡಿದ್ದಾರೆ.

ದೂರು ನೀಡಿದ ಫೋಟೊಗಳನ್ನು ಹಂಚಿಕೊಂಡಿರುವ ಕರ್ನಾಟಕ ಕಾಂಗ್ರೆಸ್, 'ನಮ್ಮ ಸರ್ಕಾರವನ್ನು ವಿರೋಧಿಸಲು, ಆಪಾದಿಸಲು ಬಿಜೆಪಿಗೆ ಈಗ ವಾಸ್ತವ ವಿಷಯಗಳೇ ಇಲ್ಲದಾಗಿದೆ. ಹಾಗಾಗಿ ನಕಲಿ ಸೃಷ್ಟಿಯ ಮೊರೆ ಹೋಗಿದೆ' ಎಂದು ಕಿಡಿ ಕಾರಿದೆ.

Karnataka Congress MLA BR Patil has given complaint on fake letter in his name

'ಬಿಜೆಪಿಯ ಫೇಕ್ ಫ್ಯಾಕ್ಟರಿಯಲ್ಲಿ ತಯಾರಾದ ನಕಲಿ ಪತ್ರದ ಕುರಿತು ನಮ್ಮ ಶಾಸಕ ಬಿ ಆರ್ ಪಾಟೀಲ್ ಅವರು ಕಲ್ಬುರ್ಗಿ ಎಸ್‌ಪಿ ಅವರನ್ನು ಭೇಟಿಯಾಗಿ ಸಮಗ್ರ ತನಿಖೆಯಾಗಬೇಕೆಂದು ದೂರು ಸಲ್ಲಿಸಿದರು' ಎಂದು ತಿಳಿಸಿದೆ.

'ವಿರೋಧ ಪಕ್ಷದ ನಾಯಕನ ಆಯ್ಕೆಗಾಗಿ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ನಕಲಿ ಸುದ್ದಿಗಳು, ಪತ್ರಗಳನ್ನು ತಯಾರಿಸುವ ಹೊಸ ಟಾಸ್ಕ್ ನೀಡಿರುವಂತಿದೆ. ಹಾಗಾಗಿ ಬಿಜೆಪಿ ನಾಯಕರು ಫೇಕ್ ಫ್ಯಾಕ್ಟರಿಗೆ ಹೆಚ್ಚಿನ ಕೆಲಸ ಕೊಟ್ಟಿದ್ದಾರೆ' ಎಂದು ಕಾಂಗ್ರೆಸ್‌ ಛೇಡಿಸಿದೆ.

Karnataka Congress MLA BR Patil has given complaint on fake letter in his name

'ನಮ್ಮ ಶಾಸಕರಾದ ಬಿ ಆರ್ ಪಾಟೀಲರ ಹೆಸರಿನ ಲೆಟರ್ ಹೆಡ್ ಬಳಸಿದ ನಕಲಿ ಪತ್ರ ಹರಿದಾಡುತ್ತಿರುವುದರ ಕುರಿತು ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ. ಶೀಘ್ರದಲ್ಲೇ ರಾಜ್ಯದ ಎಲ್ಲಾ ಫೇಕ್ ಫ್ಯಾಕ್ಟರಿಗಳ ಬಾಗಿಲು ಮುಚ್ಚಿಸುವುದು ನಿಶ್ಚಿತ. ಯಾರೇ ಆಗಿರಲಿ, ಅದೆಷ್ಟೇ ದೊಡ್ಡವರಾಗಿರಲಿ ನಕಲಿ ಸುದ್ದಿಗಳ ಸೃಷ್ಟಿಕರ್ತರನ್ನು ನಮ್ಮ ಸರ್ಕಾರ ಮಟ್ಟಹಾಕುವುದು ಖಚಿತ' ಎಂದು ಕಾಂಗ್ರೆಸ್ ಹೇಳಿದೆ.

'ಸೋಲಿನ ಹತಾಶೆಯಲ್ಲಿರುವ ವಿಪಕ್ಷಗಳು ಈಗ ತಮ್ಮ ಫೇಕ್ ಫ್ಯಾಕ್ಟರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿವೆ. ಗ್ಯಾರಂಟಿಗಳ ಜಾರಿ ಮಾಡಿದ ನಮ್ಮ ಸರ್ಕಾರಕ್ಕೆ ಸಿಗುತ್ತಿರುವ ಜನಮೆಚ್ಚುಗೆಯನ್ನು ಸಹಿಸಲಾಗದೆ ನಕಲಿ ಸೃಷ್ಟಿಯ ಮೊರೆ ಹೋಗಿವೆ ವಿಪಕ್ಷಗಳು. ಶಾಸಕ ಬಿ ಆರ್ ಪಾಟೀಲ್ ಅವರ ಹಳೆಯ ವಿಳಾಸದ ನಕಲಿ ಲೆಟರ್ ಹೆಡ್ ನಲ್ಲಿ ನಕಲಿ ಪತ್ರ ಸೃಷ್ಟಿಸಿದ ಸಾಧನೆ ಮಾಡುತ್ತೇವೆ ಎಂದುಕೊಂಡಿದ್ದರೆ ಅದು ಮೂರ್ಖತನವಾಗುತ್ತದೆ' ಎಂದು ಕಾಂಗ್ರೆಸ್‌ ಟೀಕಿಸಿದೆ.

'ಜೆಡಿಎಸ್ ನಾಯಕರು ಬಿಜೆಪಿಯ ಲೆಟರ್ ಹೆಡ್ ಮೇಲೆ ಸಹಿ ಮಾಡಿ ತಮ್ಮದು ಅಡ್ರೆಸ್ ಇಲ್ಲದ ಪಕ್ಷ ಎಂದು ಸಾಬೀತು ಮಾಡಿದ್ದರು. ಬೊಮ್ಮಾಯಿಯವರು ಜೆಡಿಎಸ್ ಕಚೇರಿಗೆ ತೆರಳಿ, ಪತ್ರಿಕಾಗೋಷ್ಠಿಗೆ ಜೆಡಿಎಸ್ ನೆರವು ಪಡೆದು ತಮಗೆ ದಮ್ಮು ತಾಕತ್ತು ಇಲ್ಲ ಎಂದು ಸಾಬೀತು ಮಾಡಿದ್ದರು. ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬಂತಹ ಸ್ಥಿತಿಯಲ್ಲಿರುವ ವಿಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ' ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+